ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂಮಿ ಮೇಲೆ ಮಾನವರ ಸರ್ವನಾಶಕ್ಕೆ ಬ್ರೆಜಿಲ್ ಸರ್ಕಾರ ನಾಂದಿ ಹಾಡಲಿದೆಯಾ..?

|
Google Oneindia Kannada News

ಮನುಷ್ಯರು ಬದುಕಬೇಕು ಅಂದರೆ ಆಕ್ಸಿಜನ್ ಬೇಕೆ ಬೇಕು. ಆಕ್ಸಿಜನ್‌ನ ಉತ್ಪಾದನಾ ಮೂಲವೇ ಕಾಡುಗಳು. ಆದರೆ ಆ ಕಾಡುಗಳ ಬುಡಕ್ಕೆ ಬೆಂಕಿ ಬಿದ್ದರೆ ಏನಾಗಬೇಡ ಹೇಳಿ..? ಹೌದು, ನಾವು ಹೇಳುತ್ತಿರುವುದು ಭೂಮಿ ಮೇಲೆ ಬಹುದೊಡ್ಡ ಅರಣ್ಯ ಹೊಂದಿರುವ ಬ್ರೆಜಿಲ್ ಬಗ್ಗೆ. ಇತ್ತೀಚೆಗಷ್ಟೇ ದೊಡ್ಡಣ್ಣ ಅಂತಾ ಬಿಲ್ಡಪ್ ಕೊಡುವ ಅಮೆರಿಕದ ನೇತೃತ್ವದಲ್ಲಿ ಜಾಗತಿಕ ತಾಪಮಾನ ಏರಿಕೆ ಬಗ್ಗೆ ಸಭೆ ನಡೆಯಿತು.

ಈ ಸಭೆಯಲ್ಲಿ ಭಾಗವಹಿಸಿದ್ದ ಬ್ರೆಜಿಲ್‌ನ ಅಧ್ಯಕ್ಷ ಜೈರ್ ಬೋಲ್ಸೊನಾರೋ, ಉದ್ದುದ್ದ ಭಾಷಣ ಮಾಡಿದ್ದರು. ಆದರೆ ಅದ್ಯಾವುದೂ ಸದ್ಯಕ್ಕೆ ಕಾರ್ಯರೂಪಕ್ಕೆ ಬರೋದಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಬ್ರೆಜಿಲ್‌ನಲ್ಲಿ ಅಮೆಜಾನ್ ಕಾಡುಗಳ ಮೇಲೆ ದೌರ್ಜನ್ಯ ಹೆಚ್ಚಾಗಿರುವ ಸಂದರ್ಭದಲ್ಲೇ, ಅಲ್ಲಿನ ಸರ್ಕಾರ ಪರಿಸರ ಉಳಿಸುವ ಕರ್ತವ್ಯದಿಂದ ಹಿಂದೆ ಸರಿಯುತ್ತಿರುವ ಆರೋಪ ಕೇಳಿಬರುತ್ತಿದೆ.

ಭೂಮಿ ಮೇಲೆ ಪ್ರಳಯ! ಡೈನೋಸಾರ್ ಸಂತತಿ ನಾಶವಾಗಿದ್ದು ಹೇಗೆ?ಭೂಮಿ ಮೇಲೆ ಪ್ರಳಯ! ಡೈನೋಸಾರ್ ಸಂತತಿ ನಾಶವಾಗಿದ್ದು ಹೇಗೆ?

ಏಕೆಂದರೆ ಪರಿಸರ ಸಂರಕ್ಷಣೆಗಾಗಿ ಮೀಸಲಿಡುವ ಅನುದಾನದಲ್ಲಿ ಭಾರಿ ಕಡಿತ ಮಾಡಿದೆ ಜೈರ್ ಬೋಲ್ಸೊನಾರೋ ಸರ್ಕಾರ. ಇದಕ್ಕೆ ಕೊರೊನಾ ಆರ್ಥಿಕ ಹಿಂಜರಿತದ ಕಾರಣ ನೀಡಿರುವ ಬೋಲ್ಸೊನಾರೋ ಆಡಳಿತ, ತನ್ನ ಕ್ರಮವನ್ನ ಸಮರ್ಥಿಸಿಕೊಂಡಿದೆ. ಆಕ್ಸಿಜನ್ ಖಜಾನೆಯಾಗಿರುವ ಅಮೆಜಾನ್ ಕಾಡು ನಾಶಕ್ಕೆ ಇದು ನಾಂದಿ ಹಾಡಿದೆ ಎಂದು ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಬೋಲ್ಸೊನಾರೋ ವಿರುದ್ಧ ಆಕ್ರೋಶ

ಬೋಲ್ಸೊನಾರೋ ವಿರುದ್ಧ ಆಕ್ರೋಶ

ಬ್ರೆಜಿಲ್‌ನಲ್ಲಿ ಬೋಲ್ಸೊನಾರೋ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ವಿವಾದ ಸೃಷ್ಟಿಸುತ್ತಿದ್ದಾರೆ. ಕೊರೊನಾ ನಿಯಂತ್ರಣದ ವಿಚಾರದಲ್ಲಿ ಈಗಾಗಲೇ ಬ್ರೆಜಿಲ್‌ ಸಂಸತ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲೇ ಅಮೆಜಾನ್ ಮೂಲ ನಿವಾಸಿಗಳು ಜೈರ್ ಬೋಲ್ಸೊನಾರೋ ಸರ್ಕಾರದ ವಿರುದ್ಧ ರೊಚ್ಚಿಗೆದ್ದು ಹೋರಾಟ ಆರಂಭಿಸಿದ್ದಾರೆ. ಇದರ ನಡುವೆ ಪರಿಸರ ಸಂರಕ್ಷಣೆ ವಿಚಾರದಲ್ಲೂ ಬೋಲ್ಸೊನಾರೋ ಸರ್ಕಾರದ ಈ ಅಸಡ್ಡೆ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದ್ಯಾವುದಕ್ಕೂ ಜೈರ್ ಬೋಲ್ಸೊನಾರೋ ಕೇರ್ ಮಾಡುವ ಲಕ್ಷಣಗಳೇ ಕಾಣುತ್ತಿಲ್ಲ. ಮುಂದಿನ ದಿನಗಳಲ್ಲಿ ಅಮೆಜಾನ್‌ಗೆ ಅಪಾಯ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಅಮೆಜಾನ್ ಮಳೆಕಾಡು ಉಳಿಸಲು ಭಾರತೀಯನ ಅವಿರತ ಶ್ರಮಅಮೆಜಾನ್ ಮಳೆಕಾಡು ಉಳಿಸಲು ಭಾರತೀಯನ ಅವಿರತ ಶ್ರಮ

ನೂರಾರು ಕೋಟಿ ಎಕರೆ ಅರಣ್ಯ..!

ನೂರಾರು ಕೋಟಿ ಎಕರೆ ಅರಣ್ಯ..!

ಅಮೆಜಾನ್ ಅರಣ್ಯದಲ್ಲಿ ಇರುವಷ್ಟು ಕಾಡು ಜಗತ್ತಿನ ಯಾವ ಭಾಗದಲ್ಲೂ ಸಿಗೋದಕ್ಕೆ ಸಾಧ್ಯವಿಲ್ಲ. ಇದಕ್ಕೆ ಸಹಕಾರಿಯಾಗಿರೋದು ಅಲ್ಲಿನ ವಾತಾವರಣ. ಸುಮಾರು 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನ ಅಮೆಜಾನ್ ಹೊಂದಿದೆ. ಎಕರೆ ಲೆಕ್ಕದಲ್ಲಿ ಹೇಳುವದಾದರೆ ಸುಮಾರು 130 ಕೋಟಿ ಎಕರೆಗೂ ಹೆಚ್ಚಿನ ಪ್ರದೇಶ. ಇಷ್ಟು ಪ್ರಮಾಣದ ಕಾಡಿನಲ್ಲಿ ಬಹುಪಾಲು ಅರಣ್ಯ ಹರಡಿರುವುದು ಬ್ರೆಜಿಲ್‌ನಲ್ಲಿ. ಎಡಬಿಡದೆ ಸುರಿಯುವ ಮಳೆ, ಸದಾ ತುಂಬಿ ಹರಿಯುವ ಅಮೆಜಾನ್ ನದಿಯ ಸುತ್ತಮುತ್ತಲೂ ದಟ್ಟವಾದ ಮರ-ಗಿಡಗಳು ಬೆಳೆದು ನಿಂತಿವೆ.

ಜೌಗು ಪ್ರದೇಶವಾಗಿರುವ ಕಾಡು ಊಹೆಗೆ ನಿಲುಕದಷ್ಟು ಅರಣ್ಯ ಸಂಪತ್ತು ಹೊಂದಿದೆ. ಅಧ್ಯಯನವೊಂದರ ಪ್ರಕಾರ ಅಮೆಜಾನ್‌ನ 1 ಹೆಕ್ಟೇರ್ ಪ್ರದೇಶದಲ್ಲಿ 750 ಜಾತಿಯ ಮರಗಳು ಹಾಗೂ 1500ಕ್ಕೂ ಹೆಚ್ಚು ಜಾತಿಯ ಗಿಡಗಳನ್ನ ಕಾಣಬಹುದು. ಕೇವಲ 1 ಹೆಕ್ಟೆರ್ ಅಂದರೆ ಸುಮಾರು 2.47 ಎಕರೆ ಪ್ರದೇಶದಲ್ಲೇ ಇಷ್ಟು ಅರಣ್ಯ ಸಂಪತ್ತು ಅಡಗಿದೆ ಎಂದರೆ 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ ಜಾಗದಲ್ಲಿ ಇನ್ನೆಂತಹ ಸಂಪತ್ತು ಇರಬೇಡ ಊಹಿಸಿ.

ಕಾಡುಗಳ್ಳರಿಗೆ ಸ್ವರ್ಗ..!

ಕಾಡುಗಳ್ಳರಿಗೆ ಸ್ವರ್ಗ..!

ಅಮೆಜಾನ್‌ನಲ್ಲಿ ಅದರಲ್ಲೂ ಬ್ರೆಜಿಲ್‌ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್‌ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್‌ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ.

ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್‌ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್‌ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.

English summary
Brazil’s Bolsonaro administration cuts environment budget despite climate summit pledge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X