ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೂಮಿ, ಮಾನವನ ಸರ್ವನಾಶಕ್ಕೆ ಮುನ್ನುಡಿ ಬರೆದ ಬ್ರೆಜಿಲ್ ಸರ್ಕಾರ..!

|
Google Oneindia Kannada News

ಭ್ರಷ್ಟಾಚಾರ, ದಂಧೆ, ಗ್ಯಾಂಗ್ ವಾರ್ ಹೀಗೆ ಭೂಮಿ ಮೇಲೆ ಏನೆಲ್ಲಾ ಕೆಟ್ಟದ್ದು ನಡೆಯಬಹುದೋ ಅದನ್ನೆಲ್ಲಾ ಒಂದೇ ಜಾಗದಲ್ಲಿ ಕಾಣಬಹದು. ಬ್ರೆಜಿಲ್ ಎಂಬ ನಿಸರ್ಗ ಮಾತೆಯ ಸ್ವರ್ಗ, ಅಲ್ಲಿನ ರಾಜಕಾರಣಿಗಳ ದರ್ಪ ಹಾಗೂ ದ್ವೇಷ ರಾಜಕಾರಣದಿಂದ ನರಕವಾಗಿದೆ. ಇಡೀ ಜಗತ್ತಿನ ಯಾವ ಮೂಲೆಯಲ್ಲೂ ಕಾಣದಷ್ಟು ಕಾಡು ಇಡೀ ಬ್ರೆಜಿಲ್ ದೇಶವನ್ನು ಆವರಿಸಿದೆ. ಆದರೆ ಆ ಕಾಡಿನ ಮೇಲೆ ಕಾಡುಗಳ್ಳರು, ಮಾಫಿಯಾ ಕಣ್ಣು ಬಿದ್ದಿದೆ. ಇಂತಹ ಹೊತ್ತಲ್ಲಿ ಅಲ್ಲಿನ ಸರ್ಕಾರ ಕಾಡುಗಳ್ಳರಿಗೆ ನೆರವು ನೀಡಬಲ್ಲ ಬಿಲ್ ಪಾಸ್ ಮಾಡಿಬಿಟ್ಟಿದೆ. ಕಾಡುಜನ ವಾಸ ಮಾಡುತ್ತಿರುವ ಜಾಗದಲ್ಲಿ ಮೈನಿಂಗ್ ಮಾಡಲು ಬ್ರೆಜಿಲ್ ಸರ್ಕಾರ ಬಿಲ್ ಪಾಸ್ ಮಾಡಿದೆ. ಇದರಿಂದ ಅಮೆಜಾನ್ ಕಾಡಿನ ಮೇಲೆ ದೌರ್ಜನ್ಯ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ ರೊಚ್ಚಿಗೆದ್ದಿರುವ ಕಾಡಿನ ನಿವಾಸಿಗಳು ಜೈರ್ ಬೋಲ್ಸೊನಾರೋ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಡಿನ ಒಳಗೆ ಗಣಿಗಾರಿಕೆ ಹಾಗೂ ಕೃಷಿಗಾಗಿ ಅನುಮತಿ ನೀಡಲು ಬಿಲ್ ಜಾರಿಗೆ ತರಲಾಗಿದ್ದು, ಭವಿಷ್ಯದ ವಿನಾಶಕ್ಕೆ ನಾಂದಿ ಹಾಡಿದೆ ಎನ್ನುತ್ತಿದ್ದಾರೆ ತಜ್ಞರು.

ಅಮೆಜಾನ್ ಮಳೆಕಾಡು ಉಳಿಸಲು ಭಾರತೀಯನ ಅವಿರತ ಶ್ರಮಅಮೆಜಾನ್ ಮಳೆಕಾಡು ಉಳಿಸಲು ಭಾರತೀಯನ ಅವಿರತ ಶ್ರಮ

ಬೋಲ್ಸೊನಾರೋ ವಿರುದ್ಧ ಆಕ್ರೋಶ

ಬೋಲ್ಸೊನಾರೋ ವಿರುದ್ಧ ಆಕ್ರೋಶ

ಬ್ರೆಜಿಲ್‌ನಲ್ಲಿ ಬೋಲ್ಸೊನಾರೋ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲಾ ಒಂದು ವಿವಾದ ಸೃಷ್ಟಿಸುತ್ತಿದ್ದಾರೆ. ಕೊರೊನಾ ನಿಯಂತ್ರಣದ ವಿಚಾರದಲ್ಲಿ ಈಗಾಗಲೇ ಬ್ರೆಜಿಲ್‌ ಸಂಸತ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲೇ ಅಮೆಜಾನ್ ಮೂಲ ನಿವಾಸಿಗಳು ಜೈರ್ ಬೋಲ್ಸೊನಾರೋ ಸರ್ಕಾರದ ವಿರುದ್ಧ ರೊಚ್ಚಿಗೆದ್ದು ಹೋರಾಟ ಆರಂಭಿಸಿದ್ದಾರೆ. ಬ್ರೆಜಿಲ್ ಕೊರೊನಾ ಕೂಪವಾಗಿದ್ದು, ಜನರು ನೂರಾರು ಸಮಸ್ಯೆಗಳಿಂದ ಜೀವ ಬಿಡುತ್ತಿದ್ದಾರೆ. ಆದರೆ ಸಮಸ್ಯೆ ಬಗೆಹರಿಸಬೇಕಾದ ಸರ್ಕಾರ ವಿವಾದಗಳನ್ನು ಸೃಷ್ಟಿಸುತ್ತಿರುವುದು ವಿಪರ್ಯಾಸ. ಜಗತ್ತಿನಾದ್ಯಂತ ಬ್ರೆಜಿಲ್ ಕಾಡು ಜನರ ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ನೂರಾರು ಕೋಟಿ ಎಕರೆ ಅರಣ್ಯ..!

ನೂರಾರು ಕೋಟಿ ಎಕರೆ ಅರಣ್ಯ..!

ಅಮೆಜಾನ್ ಅರಣ್ಯದಲ್ಲಿ ಇರುವಷ್ಟು ಕಾಡು ಜಗತ್ತಿನ ಯಾವ ಭಾಗದಲ್ಲೂ ಸಿಗೋದಕ್ಕೆ ಸಾಧ್ಯವಿಲ್ಲ. ಇದಕ್ಕೆ ಸಹಕಾರಿಯಾಗಿರೋದು ಅಲ್ಲಿನ ವಾತಾವರಣ. ಸುಮಾರು 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ನಷ್ಟು ಅರಣ್ಯ ಪ್ರದೇಶವನ್ನ ಅಮೆಜಾನ್ ಹೊಂದಿದೆ. ಎಕರೆ ಲೆಕ್ಕದಲ್ಲಿ ಹೇಳುವದಾದರೆ ಸುಮಾರು 130 ಕೋಟಿ ಎಕರೆಗೂ ಹೆಚ್ಚಿನ ಪ್ರದೇಶ.

ಇಷ್ಟು ಪ್ರಮಾಣದ ಕಾಡಿನಲ್ಲಿ ಬಹುಪಾಲು ಅರಣ್ಯ ಹರಡಿರುವುದು ಬ್ರೆಜಿಲ್‌ನಲ್ಲಿ. ಎಡಬಿಡದೆ ಸುರಿಯುವ ಮಳೆ, ಸದಾ ತುಂಬಿ ಹರಿಯುವ ಅಮೆಜಾನ್ ನದಿಯ ಸುತ್ತಮುತ್ತಲೂ ದಟ್ಟವಾದ ಮರ-ಗಿಡಗಳು ಬೆಳೆದು ನಿಂತಿವೆ. ಜೌಗು ಪ್ರದೇಶವಾಗಿರುವ ಕಾಡು ಊಹೆಗೆ ನಿಲುಕದಷ್ಟು ಅರಣ್ಯ ಸಂಪತ್ತು ಹೊಂದಿದೆ. ಅಧ್ಯಯನವೊಂದರ ಪ್ರಕಾರ ಅಮೆಜಾನ್‌ನ 1 ಹೆಕ್ಟೇರ್ ಪ್ರದೇಶದಲ್ಲಿ 750 ಜಾತಿಯ ಮರಗಳು ಹಾಗೂ 1500ಕ್ಕೂ ಹೆಚ್ಚು ಜಾತಿಯ ಗಿಡಗಳನ್ನ ಕಾಣಬಹುದು. ಕೇವಲ 1 ಹೆಕ್ಟೆರ್ ಅಂದರೆ ಸುಮಾರು 2.47 ಎಕರೆ ಪ್ರದೇಶದಲ್ಲೇ ಇಷ್ಟು ಅರಣ್ಯ ಸಂಪತ್ತು ಅಡಗಿದೆ ಎಂದರೆ 5.5 ಮಿಲಿಯನ್ ಸ್ಕ್ವೇರ್ ಕಿಲೋಮೀಟರ್‌ ಜಾಗದಲ್ಲಿ ಇನ್ನೆಂತಹ ಸಂಪತ್ತು ಇರಬೇಡ ಊಹಿಸಿ.

ಕಾಡುಗಳ್ಳರಿಗೆ ಸ್ವರ್ಗ..!

ಕಾಡುಗಳ್ಳರಿಗೆ ಸ್ವರ್ಗ..!

ಅಮೆಜಾನ್‌ನಲ್ಲಿ ಅದರಲ್ಲೂ ಬ್ರೆಜಿಲ್‌ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್‌ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್‌ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ.

ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್‌ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್‌ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.

English summary
The Indigenous peoples starts protest against Brazil government over controversial bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X