ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಸರ ಉಳಿಸಲು ಸುಪ್ರೀಂಕೋರ್ಟ್ ದಿಟ್ಟ ನಿರ್ಧಾರ..! ಕಾಡುಗಳ್ಳನಿಗೆ ಕಾದಿದೆ ಮಾರಿಹಬ್ಬ..!

|
Google Oneindia Kannada News

ಸೋಷಿಯಲ್ ಮೀಡಿಯಾಗಳಲ್ಲಿ ಜಾಹೀರಾತು ಹಾಕಿ ಅಮೆಜಾನ್ ಅರಣ್ಯ ಪ್ರದೇಶದ ಜಾಗವನ್ನೇ ಮಾರಾಟ ಮಾಡಿದ್ದ ಪ್ರಕರಣವನ್ನ ಬ್ರೆಜಿಲ್ ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಫ್ಯಾಬ್ರಿಸಿಯೋ ಗಿಮರೀಸ್ ಎಂಬ ಕಿರಾತಕ ಫೇಸ್‌ಬುಕ್ ಮೂಲಕ ಅಮೆಜಾನ್ ಅರಣ್ಯಕ್ಕೆ ಸೇರಿದ ಭೂಮಿ ಮಾರಾಟ ಮಾಡಿದ್ದ. ಅರಣ್ಯ ಭೂಮಿಯಲ್ಲಿ ಶತಮಾನಗಳಿಂದ ವಾಸವಿದ್ದ ಬುಡಕಟ್ಟು ಜನರ ಭೂಮಿಯನ್ನ ಸೈಟ್ ಮಾಡಿ ಸೇಲ್ ಮಾಡಿದ್ದ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಜಗತ್ತಿನಾದ್ಯಂತ ಪರಿಸರವಾದಿಗಳು ಘಟನೆಯನ್ನ ಖಂಡಿಸಿದ್ದರು. ವಿಚಾರ ತಿಳಿಯುತ್ತಿದ್ದಂತೆ ಮಧ್ಯಪ್ರವೇಶಿಸಿದ ಬ್ರೆಜಿಲ್ ಸುಪ್ರೀಂಕೋರ್ಟ್ ತಕ್ಷಣ ಎಚ್ಚೆತ್ತುಕೊಳ್ಳಿ ಎಂದು ಬ್ರೆಜಿಲ್ ಸರ್ಕಾರಕ್ಕೆ ಚಾಟಿ ಬೀಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕಿದೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅರಣ್ಯ ಭೂಮಿ ಲಪಟಾಯಿಸಿದ ವ್ಯಕ್ತಿಯನ್ನ ವಿಚಾರಣೆ ನಡೆಸಿ ಎಂದು ಆದೇಶ ನೀಡಿದೆ.

ಕಾಡು ಜಾಗವನ್ನೇ ಸೇಲ್ ಮಾಡಿದ ಕಿರಾತಕ..! ಅಮೆಜಾನ್ ಅರಣ್ಯ ಫೇಸ್‌ಬುಕ್‌ನಲ್ಲಿ ಮಾರಾಟ..!ಕಾಡು ಜಾಗವನ್ನೇ ಸೇಲ್ ಮಾಡಿದ ಕಿರಾತಕ..! ಅಮೆಜಾನ್ ಅರಣ್ಯ ಫೇಸ್‌ಬುಕ್‌ನಲ್ಲಿ ಮಾರಾಟ..!

ಈಗಾಗಲೇ ಲಕ್ಷಾಂತರ ಎಕರೆ ಅಮೆಜಾನ್ ಕಾಡನ್ನು ನಾಶ ಮಾಡಲಾಗಿದೆ. ಇಷ್ಟೆಲ್ಲಾ ಘರ್ಷಣೆಯ ನಡುವೆ ಉಳಿದಕೊಂಡಿರುವ ಒಂದಿಷ್ಟು ಕಾಡನ್ನು ಕೂಡ ನಾಶ ಮಾಡಲು ಹೊಂಚು ನಡೆಯುತ್ತಿದೆ. ಬ್ರೆಜಿಲ್ ಸುಪ್ರೀಂಕೋರ್ಟ್ ನೀಡಿರುವ ಆದೇಶ ಆಶಾದಾಯಕವಾಗಿದೆ.

ಮೀಸಲು ಅರಣ್ಯ ಕೂಡ ಸೋಲ್ಡ್..!

ಮೀಸಲು ಅರಣ್ಯ ಕೂಡ ಸೋಲ್ಡ್..!

ತಂತ್ರಜ್ಞಾನವನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಕ್ಕೆ ಫ್ಯಾಬ್ರಿಸಿಯೋ ಗಿಮರೀಸ್ ಒಂದು ಸಣ್ಣ ಉದಾಹರಣೆ. ಸ್ಥಳೀಯವಾಗಿ ಜನರನ್ನ ನಂಬಿಸಿ, ಬಲವಂತವಾಗಿ ಭೂಮಿ ಕಿತ್ತುಕೊಂಡಿರುವ ಈತ ಅದನ್ನ ಸೈಟ್ ಮಾಡಿ ಸೇಲ್ ಮಾಡಿದ್ದಾನೆ. ಮೀಸಲು ಅರಣ್ಯವನ್ನೂ ನುಂಗಿಹಾಕಿದ ಆರೋಪ ಫ್ಯಾಬ್ರಿಸಿಯೋ ವಿರುದ್ಧ ಕೇಳಿಬಂದಿದೆ. ಇಷ್ಟೆಲ್ಲಾ ನಡೆದರೂ ಬ್ರೆಜಿಲ್ ಸರ್ಕಾರ ಕ್ರಮ ಕೈಗೊಂಡಿಲ್ಲ. ಅಂತಹ ತಾಕತ್ತು ಅಲ್ಲಿನ ಅಧಿಕಾರಿ ವರ್ಗಕ್ಕೆ ಇಲ್ಲ. ಭ್ರಷ್ಟಾಚಾರ ವಿಪರೀತವಾಗಿ ಹರಡಿರುವ ಬ್ರೆಜಿಲ್‌ನಲ್ಲಿ ಇಂತಹ ಕಾನೂನು ಬಾಹೀರ ಕೃತ್ಯಗಳು ಮಾಮೂಲಾಗಿವೆ. ಅಲ್ಲಿನ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿರುವುದು ದುರಂತವೇ ಸರಿ.

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಮೂಲ ನಿವಾಸಿಗಳ ಜೀವಕ್ಕೆ ಕುತ್ತು

ಅಮೆಜಾನ್ ಅರಣ್ಯ ಸಸ್ಯ ಸಂಕುಲ ಹಾಗೂ ಪ್ರಾಣಿಗಳಿಗೆ ಮಾತ್ರ ಜಾಗ ನೀಡಿಲ್ಲ. ಇಲ್ಲಿ ಸಾವಿರಾರು ಕಾಡು ಜನಾಂಗಗಳು ವಾಸ ಇವೆ. ಇವರೆಲ್ಲಾ ಇಲ್ಲಿನ ಮೂಲ ನಿವಾಸಿಗಳು. ಆದರೆ ಆಧುನಿಕ ಜಗತ್ತಿನಲ್ಲಿ ಇವರಿಗೂ ಇಲ್ಲಿ ಸ್ಥಾನವೇ ಇಲ್ಲದಂತಾಗಿದೆ. ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರ ಕೈಯಲ್ಲಿ ಸಿಲುಕಿ ಸಾವಿರಾರು ಕಾಡು ಜನರು ಪ್ರಾಣಬಿಟ್ಟಿದ್ದಾರೆ. ಹಲವರು ಕಾಡನ್ನೇ ತೊರೆದು ನಾಡು ಸೇರಿದ್ದಾರೆ. ಇನ್ನೂ ಆಧುನಿಕ ಜಗತ್ತಿನ ಜೊತೆಗೆ ಸಂಪರ್ಕವನ್ನೇ ಹೊಂದದ ಕೆಲವು ಜನಾಂಗಗಳು ಅಲ್ಲೇ ನರಳಿ ನರಳಿ ಪ್ರಾಣಬಿಡುವ ಸ್ಥಿತಿ ಇದೆ. ಆದರೆ ಇದ್ಯಾವುದೂ ಬ್ರೆಜಿಲ್ ಸರ್ಕಾರಕ್ಕೆ ಕಾಣುತ್ತಿಲ್ಲ. ಇದೇ ರೀತಿ ಅಮೆಜಾನ್ ಹರಡಿರುವ ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಮುಗ್ಧ ಕಾಡುಜನರ ಮಾರಣಹೋಮ ನಡೆಯುತ್ತಿದೆ.

ಕಾಡುಗಳ್ಳರಿಗೆ ಸ್ವರ್ಗ..!

ಕಾಡುಗಳ್ಳರಿಗೆ ಸ್ವರ್ಗ..!

ಅಮೆಜಾನ್‌ನಲ್ಲಿ ಅದರಲ್ಲೂ ಬ್ರೆಜಿಲ್‌ನಲ್ಲಿ ಹರಡಿರುವ ಅಮೆಜಾನ್ ಅರಣ್ಯದಲ್ಲಿ ಅಡಗಿರುವ ಸಂಪತ್ತಿನ ಮೇಲೆ ಸ್ಮಗ್ಲರ್ಸ್ ಹಾಗೂ ಕಾಡುಗಳ್ಳರು ಕಣ್ಣಿಟ್ಟಿದ್ದಾರೆ. ಒಂದ್ಕಡೆ ಕೃಷಿಕರು ಕಾಡು ಕಡಿದು ವ್ಯವಸಾಯ ಮಾಡಿದರೆ, ಸ್ಮಗ್ಲರ್ಸ್ ಇದೇ ಕಾಡಲ್ಲಿ ಕೊಕೇನ್‌ ರೀತಿಯ ಮಾದಕ ವಸ್ತುಗಳನ್ನ ಬೆಳೆಯುತ್ತಿದ್ದಾರೆ. ಇಲ್ಲಿ ಸಿಗುವ ಅಪಾರ ಪ್ರಮಾಣದ ಸಂಪತ್ತು ದೋಚುತ್ತಿದ್ದಾರೆ. ಇಷ್ಟೇ ಅಲ್ಲ ಅಮೆಜಾನ್‌ನ ಎಷ್ಟೋ ಗಣಿಗಾರಿಕೆಗಳು ಸ್ಮಗ್ಲರ್ಸ್ ಹಿಡಿತದಲ್ಲೇ ಇವೆ. ಕಳ್ಳದಾರಿ ಮೂಲಕ ಇಲ್ಲಿ ದೋಚಿದ ಅರಣ್ಯ ಸಂಪತ್ತನ್ನು ಕಾಡುಗಳ್ಳರು ನೆರೆಯ ಅಮೆರಿಕ ಸೇರಿದಂತೆ ದೂರದ ಯೂರೋಪ್ ರಾಷ್ಟ್ರಗಳಿಗೂ ಕದ್ದು ಸಾಗಿಸುತ್ತಿದ್ದಾರೆ. ಹೀಗಾಗಿ ಅಮೆಜಾನ್ ಪಾತ್ರದಲ್ಲಿ ಕತ್ತಲಾದರೆ ಸಾಕು ಜೆಸಿಬಿ, ಗರಗಸ, ಟ್ರಕ್‌ ಆರ್ಭಟ ಜೋರಾಗೇ ಇರುತ್ತೆ. ಬ್ರೆಜಿಲ್‌ನ ಸ್ಥಳೀಯ ಆಡಳಿತಗಳು ಸ್ಮಗ್ಲರ್ಸ್ ಬೆನ್ನಿಗೇ ನಿಂತಿವೆ. ಅಧಿಕಾರಿಗಳ ಕಥೆ ಕೇಳೋದೆ ಬೇಡ, ಅಷ್ಟರಮಟ್ಟಿಗೆ ಕಾಡುಗಳ್ಳರ ಹಾವಳಿ ಇದೆ. ಪೆರು, ಕೊಲಂಬಿಯಾ, ಬೊಲಿವಿಯಾ, ವೆನಿಜುವೆಲಾ ದೇಶಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಲಾಭಕ್ಕಾಗಿ ಬಂಡವಾಳಿಗರ ಫೈಟಿಂಗ್..!

ಲಾಭಕ್ಕಾಗಿ ಬಂಡವಾಳಿಗರ ಫೈಟಿಂಗ್..!

ಅರಣ್ಯ ಸಂಪತ್ತು ಇರುವ ಕಡೆ ಕೈಗಾರಿಕೆಗೆ ಬೇಕಾದ ಕಚ್ಚಾವಸ್ತುಗಳು ಸುಲಭವಾಗಿ ಸಿಗುತ್ತವೆ. ಇದೇ ಕಾರಣಕ್ಕೆ ಅಮೆಜಾನ್ ನಾಡು ಬ್ರೆಜಿಲ್‌ನಲ್ಲಿ ಹೂಡಿಕೆ ಮಾಡಲು ಜಗತ್ತಿನ ದೊಡ್ಡ ದೊಡ್ಡ ಉದ್ಯಮಿಗಳು ತುದಿಗಾಲಲ್ಲಿ ನಿಂತಿರುತ್ತಾರೆ. ಈಗಾಗಲೇ ಲಕ್ಷಾಂತರ ಕೋಟಿ ಬಂಡವಾಳ ಇದೇ ಕಾಡನ್ನು ನಂಬಿ ಹರಿದುಬಂದಿದೆ. ಬ್ರೆಜಿಲ್ ಸದ್ಯದ ಮಟ್ಟಿಗೆ ಬಂಡವಾಳಿಗರ ಸ್ವರ್ಗ ಕೂಡ. ಇನ್ನು ಇಲ್ಲಿ ಅಡಗಿರುವ ಅಪಾರ ಗಣಿ ಸಂಪತ್ತು ದೋಚುವ ಹುನ್ನಾರ ಶ್ರೀಮಂತ ರಾಷ್ಟ್ರಗಳದ್ದು. ಹೀಗಾಗಿಯೇ ಅಮೆಜಾನ್‌ನಲ್ಲಿ ಗಣಿಗಾರಿಕೆಗೆ ವಿಶ್ವದ ಬಲಿಷ್ಠ ರಾಷ್ಟ್ರಗಳು ಅತ್ಯುತ್ಸಾಹ ತೋರುತ್ತಿವೆ. ಇದರ ಪರಿಣಾಮವೇ ದಟ್ಟ ಅರಣ್ಯ ನಾಶವಾಗಿ, ಬೆಂಗಾಡು ರೂಪುಗೊಳ್ಳುತ್ತಿದೆ. ಇಲ್ಲಿ ಪ್ರಮುಖವಾಗಿ ಟಿಂಬರ್ ಉದ್ಯಮ, ಫಾರ್ಮಸಿ, ಗಣಿಗಾರಿಕೆಗಳ ಮೇಲೆ ಉದ್ಯಮಿಗಳು ಕಣ್ಣು ನೆಟ್ಟಿದ್ದಾರೆ. ಅಲ್ಲದೆ ಅಪಾರ ಪ್ರಮಾಣದ ಔಷಧಿ ಸಸ್ಯಗಳನ್ನು ಕೂಡ ದೋಚುತ್ತಿದ್ದಾರೆ.

1 ವರ್ಷ, 22 ಲಕ್ಷ ಎಕರೆ ಕಾಡು ಭಸ್ಮ

1 ವರ್ಷ, 22 ಲಕ್ಷ ಎಕರೆ ಕಾಡು ಭಸ್ಮ

ಇಲ್ಲಿ ಕೃಷಿ ಮಾಡುವ ನೆಪದಲ್ಲಿ ಕಾಡಿನ ಮೇಲೆ ಎಂತಹ ದೌರ್ಜನ್ಯ ನಡೆಯುತ್ತಿದೆ ಎಂದರೆ, 2019ರಲ್ಲಿ ಅಮೆಜಾನ್ ಕಾಡಿನಲ್ಲಿ ಬೆಂಕಿ ಹೊತ್ತಿತ್ತು. ಒಂದೆರಡು ಭಾಗದಲ್ಲಿ ಹಬ್ಬಿದ್ದ ಬೆಂಕಿಯನ್ನು ನಂದಿಸಲು ಬ್ರೆಜಿಲ್, ಬೊಲಿವಿಯಾ, ಪೆರು, ಕೊಲಂಬಿಯಾ ಸರ್ಕಾರಗಳು ಸರ್ಕಸ್ ಮಾಡುತ್ತಿದ್ದವು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಮಾಫಿಯಾ ಡಾನ್‌ಗಳು, ಒಣಗಿ ನಿಂತಿದ್ದ ಅಮೆಜಾನ್‌ನ ಹಲವು ಭಾಗಗಳಿಗೆ ಬೆಂಕಿ ಇಟ್ಟಿದ್ದರು. ಪರಿಣಾಮ ಅಮೆಜಾನ್ ಅರಣ್ಯದಲ್ಲಿ ಸುಮಾರು 40 ಸಾವಿರ ಕಡೆ ಬೆಂಕಿ ಕಾಣಿಸಿಕೊಂಡಿತ್ತು. ಈ ಕೃತ್ಯಕ್ಕೆ ಬಲಿಯಾಗಿದ್ದು 22 ಲಕ್ಷ ಎಕರೆಯಷ್ಟು ಅರಣ್ಯ ಪ್ರದೇಶ. ಇಷ್ಟು ಕಾಡು ಭಸ್ಮವಾಗುವುದರ ಜೊತೆಗೆ ಲಕ್ಷಾಂತರ ಪ್ರಾಣಿಗಳು ಹಾಗೂ ಕಾಡು ಜನರು ಕೂಡ ಅಗ್ನಿಗೆ ಆಹುತಿಯಾಗಿದ್ದರು. ಈಗಲಾದರೂ ಬ್ರೆಜಿಲ್ ಸರ್ಕಾರ ಎಚ್ಚೆತ್ತು ಅಮೆಜಾನ್ ರಕ್ಷಣೆಗೆ ಮುಂದಾಗಬೇಕಿದೆ. ಇಲ್ಲವಾದರೆ ಗ್ಲೋಬಲ್ ವಾರ್ಮಿಂಗ್ ಎಫೆಕ್ಟ್ ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.

English summary
Brazil supreme court ordered to investigate about Amazon forest land sold.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X