ಬ್ರೆಜಿಲ್ ಅಧ್ಯಕ್ಷ ಬೋಲ್ಸೊನಾರೋ ಆಸ್ಪತ್ರೆಗೆ ದಾಖಲು
ರಿಯೋ ಡಿ ಜನೈರೊ, ಜನವರಿ 03: ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೋ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿವಿ ಗ್ಲೋಬೊ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ಪ್ರಕಾರ, 2019ರಿಂದ ಅಧಿಕಾರದಲ್ಲಿರುವ 66 ವರ್ಷದ ಬೊಲ್ಸೊನಾರೊ ಅವರನ್ನ ಸಾವೊ ಪೌಲೊದ ವಿಲಾ ನೋವಾ ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರುಳಿನ ಅಡಚಣೆಯಿಂದಾಗಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊಅವರನ್ನ ತುರ್ತು ಚಿಕಿತ್ಸೆಗಾಗಿ ಸೋಮವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ, ಆದರೆ ಯಾವಾದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎನ್ನುವ ಕುರಿತು ಮಾಹಿತಿ ನೀಡಿಲ್ಲ.
Recommended Video
'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಈಗ ನೆನಪಾಗಿದೆ: ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಕಿಡಿ | Oneindia Kannada












Click it and Unblock the Notifications