ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನ ಬೆಳವಣಿಗೆ ಬಗ್ಗೆ ಬ್ರಿಕ್ಸ್ ಶೃಂಗಸಭೆಯಲ್ಲಿ ಪುಟಿನ್ ಉಲ್ಲೇಖ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 9: ಅಫ್ಘಾನಿಸ್ತಾನದಿಂದ ಯುಎಸ್ ಸೇನಾ ಪಡೆಗಳು ಮತ್ತು ಅದರ ಮಿತ್ರರಾಷ್ಟ್ರಗಳು ಸೇನೆಯನ್ನು ವಾಪಸ್ ಕರೆಸಿಕೊಂಡಿರುವುದು ಹೊಸ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.

ಬ್ರಿಕ್ಸ್ ರಾಷ್ಟ್ರಗಳ ವರ್ಚುವಲ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದರು. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಚಟುವಟಿಕೆಗಳು ಜಾಗತಿಕ ಮತ್ತು ಪ್ರಾದೇಶಿಕ ಭದ್ರತೆ ಮೇಲೆ ಹೇಗೆ ಪರಿಣಾಮ ಬೀರಬಲ್ಲದು ಎಂಬುದರ ಮೇಲೆ ಲಕ್ಷ್ಯ ವಹಿಸಬೇಕಿ ಎಂದು ಹೇಳಿದ್ದಾರೆ.

'ಅಫ್ಘಾನಿಸ್ತಾನ ವಿಚಾರದಲ್ಲಿ ಜಗತ್ತು ಒಗ್ಗೂಡಲಿ’ ಇದಪ್ಪಾ ಪುಟಿನ್ ಮಾತು ಅಂದ್ರೆ..!'ಅಫ್ಘಾನಿಸ್ತಾನ ವಿಚಾರದಲ್ಲಿ ಜಗತ್ತು ಒಗ್ಗೂಡಲಿ’ ಇದಪ್ಪಾ ಪುಟಿನ್ ಮಾತು ಅಂದ್ರೆ..!

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಬ್ರಿಕ್ಸ್ ವಾರ್ಷಿಕ ಶೃಂಗಸಭೆಯಲ್ಲಿ ಐದು ರಾಷ್ಟ್ರಗಳು ಭಯೋತ್ಪಾದನಾ ನಿಗ್ರಹ ಯೋಜನೆ ಅಳವಡಿಸಿಕೊಳ್ಳಲು ತೀರ್ಮಾನಿಸಿವೆ. ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ಪ್ರತಿಕೂಲವಾಗಿ ಸ್ವಾಧೀನಪಡಿಸಿಕೊಂಡಿದೆ. ಆದ್ದರಿಂದ ಈ ಪ್ರದೇಶವು ಹಲವಾರು ಭದ್ರತಾ ಸವಾಲುಗಳನ್ನು ಎದುರಿಸುತ್ತಿದೆ. "ಅಫ್ಘಾನಿಸ್ತಾನವು ಮಾದಕವಸ್ತು ಕಳ್ಳಸಾಗಣೆ ಮತ್ತು ಭಯೋತ್ಪಾದನೆಯ ಮೂಲವಾಗುವ ಮೂಲಕ ತನ್ನ ನೆರೆಯ ರಾಷ್ಟ್ರಗಳಿಗೆ ಬೆದರಿಕೆಯಾಗಬಾರದು," ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

BRICS Summit: Our Countries Have Paid Special Attention To Afghan Issue: Russian Pres Vladimir Putin

ಬ್ರಿಕ್ಸ್ ಸಮಾವೇಶದ ಧ್ಯೇಯವಾಕ್ಯ:

"ಭಾರತವು ತನ್ನ ಅಧ್ಯಕ್ಷತೆಗಾಗಿ ಆರಿಸಿಕೊಂಡಿರುವ ವಿಷಯದಿಂದ ನಿರಂತರತೆ, ಬಲವರ್ಧನೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಸಹಕಾರವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಆರಂಭಿಕ ಭಾಷಣದಲ್ಲಿ ಉಲ್ಲೇಖಿಸಿದರು. ಮುಂದುವರಿಕೆ, ಸದೃಢತೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಅಂತರ್ ಸಹಕಾರ ಎಂಬುದು ಈ ಬಾರಿಯ ಬ್ರಿಕ್ಸ್ ಸಮಾವೇಶದ ಧ್ಯೇಯವಾಕ್ಯವಾಗಿದೆ.

ಸಮಾವೇಶದ ಅಧ್ಯಕ್ಷತೆ ವಹಿಸಿರುವ ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆ ಮತ್ತು ಜನರ ನಡುವಿನ ಸಂವಹನ ಹೆಚ್ಚಳಕ್ಕೆ ಒತ್ತು ನೀಡಿದೆ. ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಾಯಕರು ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪರಿಣಾಮಗಳು ಮತ್ತು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ಭಾಗವಹಿಸಿದ್ದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್‌ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ಈ ವರ್ಷಕ್ಕೆ ಸಂಬಂಧಿಸಿದ ಪ್ರಗತಿಯ ವಿವರಗಳನ್ನು ಮಂಡಿಸಿದರು.

"ಬ್ರಿಕ್ಸ್ ಕಳೆದ ಒಂದೂವರೆ ದಶಕಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿದೆ. ಇಂದು ನಾವು ವಿಶ್ವದ ಉದಯೋನ್ಮುಖ ಆರ್ಥಿಕತೆಗಳಲ್ಲಿ ಪ್ರಭಾವಿ ಧ್ವನಿಯಾಗಿದ್ದೇವೆ. ಈ ವೇದಿಕೆಯು ಅಭಿವೃದ್ಧಿಶೀಲ ರಾಷ್ಟ್ರಗಳ ಆದ್ಯತೆಗಳ ಮೇಲೆ ಕೇಂದ್ರೀಕರಿಸಲು ಉಪಯುಕ್ತವಾಗಿದೆ," ಎಂದು ಹೇಳಿದ್ದಾರೆ.

ಬ್ರಿಕ್ಸ್ ರಾಷ್ಟ್ರಗಳ ಕುರಿತು ಕಿರು ಪರಿಚಯ:

ಬ್ರಿಕ್ಸ್ ಎಂದರೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ಸೇರಿ ವಿಶ್ವದ ಐದು ದೊಡ್ಡ ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಒಟ್ಟುಗೂಡಿಸುತ್ತದೆ. ಜಾಗತಿಕ ಜನಸಂಖ್ಯೆಯ ಶೇ.41ರಷ್ಟು ಜನಸಂಖ್ಯೆಯು ಈ ರಾಷ್ಟ್ರಗಳಲ್ಲಿದ್ದು, ಜಾಗತಿಕ ಜಿಡಿಪಿಯ ಶೇ. 24ರಷ್ಟು ಪ್ರತಿಶತ ಮತ್ತು ಜಾಗತಿಕ ವ್ಯಾಪಾರದ ಶೇ.16ರಷ್ಟು ಪ್ರತಿಶತ ಪ್ರಮಾಣವನ್ನು ಈ ಬ್ರಿಕ್ಸ್ ರಾಷ್ಟ್ರಗಳು ಪ್ರತಿನಿಧಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ 2ನೇ ಬಾರಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿದ್ದಾರೆ. ಇದಕ್ಕೂ ಮೊದಲು 2016ರಲ್ಲಿ ಗೋವಾದಲ್ಲಿ ನಡೆದ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ರಿಕ್ಸ್ ಶೃಂಗಸಭೆಯ 15ನೇ ವಾರ್ಷಿಕೋತ್ಸವದ ಸಂದರ್ಭದಲ್ಲೇ ಭಾರತ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿದ್ದು, ಇದು ಸಮಾವೇಶದ ಧ್ಯೇಯವಾಕ್ಯದಲ್ಲಿ ಪ್ರತಿಪಾದಿಸಿದೆ.

English summary
BRICS Summit: Our Countries Have Paid Special Attention To Afghan Issue: Russian Pres Vladimir Putin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X