ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಯೊಬ್ಬ ಗರ್ಭಿಣಿಯೂ ಕೊರೊನಾ ಲಸಿಕೆ ಪಡೆಯುವಂತೆ ಸಿಡಿಸಿ ಸೂಚನೆ

|
Google Oneindia Kannada News

ಪ್ರತಿಯೊಬ್ಬ ಗರ್ಭಿಣಿಯೂ ಕಡ್ಡಾಯವಾಗಿ ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ದಿ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಬೋರ್ಡ್ (ಸಿಡಿಸಿ) ಸೂಚನೆ ನೀಡಿದೆ.

ಅಮೆರಿಕದಲ್ಲಿ ಡೆಲ್ಟಾ ಸೋಂಕು ಉಲ್ಬಣವಾಗುತ್ತಿದ್ದು, ಲಸಿಕೆಯ ಪಡೆಯದ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿರಿಗೆ ಸೋಂಕು ತಗುಲುವ ಪ್ರಮಾಣ ಹೆಚ್ಚಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಾಗಾಗಿ ಡೆಲ್ಟಾ ಪ್ಲಸ್ ಸೋಂಕಿನ ವಿರುದ್ಧ ಹೋರಾಡಲು ಎಲ್ಲಾ ಗರ್ಭಿಣಿಯರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಹೇಳಲಾಗಿದೆ.

ಗರ್ಭಿಣಿಯರು ಕೊರೊನಾ ಸೋಂಕಿಗೆ ತುತ್ತಾದರೆ ಹೆಚ್ಚಿನ ಅಪಾಯಗಳನ್ನು ಹೊಂದಿರುತ್ತಾರೆ ಬಹುಶಃ ಗರ್ಭಪಾತ ಆಗುವ ಸಾಧ್ಯತೆಯೂ ಹೆಚ್ಚಿರುತ್ತದೆ.

ಸಿಡಿಸಿ ಮಾಹಿತಿ ಪ್ರಕಾರ ಕೇವಲ ಶೇ.23ರಷ್ಟು ಗರ್ಭಿಣಿಯರು ಮಾತ್ರ ಲಸಿಕೆ ಪಡೆದಿದ್ದಾರೆ. ''ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದೆ, ಡೆಲ್ಟಾ ವೇಗವಾಗಿ ಹರಡುತ್ತಿರುವ ಕಾರಣ ಗರ್ಭಿಣಿಯರಿಗೂ ಸೋಂಕು ತಗುಲಬಹುದು'' ಎಂದು ಸಿಡಿಸಿ ನಿರ್ದೇಶಕ ಡಾ. ರೋಚಲ್ಲೆ ತಿಳಿಸಿದ್ದಾರೆ.

ಗರ್ಭಿಣಿಯರಿಗೆ ಕೊರೊನಾ ಲಸಿಕೆ: ವೈದ್ಯರು ನೀಡಿರುವ ಸಲಹೆ ಏನು?ಗರ್ಭಿಣಿಯರಿಗೆ ಕೊರೊನಾ ಲಸಿಕೆ: ವೈದ್ಯರು ನೀಡಿರುವ ಸಲಹೆ ಏನು?

''ಗರ್ಭಿಣಿಯರು ಲಸಿಕೆ ಪಡೆದುಕೊಂಡಿದ್ದೇ ಆದರೆ, ಸೋಂಕಿನ ತಗುಲಿದರೂ ಅದರ ತೀವ್ರತೆ ಕಡಿಮೆಯಿರುತ್ತದೆ. ಅಲ್ಲದೆ, ಹೆರಿಗೆ ಮತ್ತು ಅಕಾಲಿಕ ಹೆರಿಗೆಗಳ ಅಪಾಯ ಕಡಿಮೆ ಇರುತ್ತದೆ. ಸೋಂಕು ಹರಡುವ ಪ್ರಮಾಣ ಕೂಡ ಕಡಿಮೆ ಇರುತ್ತದೆ'' ಎಂದು ವೈದ್ಯರು ಹೇಳಿದ್ದಾರೆ. ಇತರಂತೆಯೇ ಎಲ್ಲಾ ಗರ್ಭಿಣಿಯರಿಗೂ ಕೋವಿಡ್ ಲಸಿಕೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

 ಗರ್ಭಪಾತವಾಗುವ ಸಾಧ್ಯತೆ ಕಡಿಮೆ

ಗರ್ಭಪಾತವಾಗುವ ಸಾಧ್ಯತೆ ಕಡಿಮೆ

2500 ಮಂದಿ ಮಹಿಳೆಯರನ್ನು ಅಧ್ಯಯನ ಮಾಡಿದಾಗ, ಗರ್ಭಧಾರಣೆಯ 20 ವಾರಗಳ ಮೊದಲು ಕನಿಷ್ಠ 1 ಡೋಸ್ ಫೈಜರ್ ಅಥವಾ ಮಾಡೆರ್ನಾ ಲಸಿಕೆಯನ್ನು ಪಡೆದವರಿಗೆ ಗರ್ಭಪಾತದ ಯಾವುದೇ ಅಪಾಯಗಳಿಲ್ಲ.

 ಅಮೆರಿಕದಲ್ಲಿ ಎಷ್ಟು ಮಂದಿ ಮಹಿಳೆಯರಿಗೆ ಸೋಂಕು

ಅಮೆರಿಕದಲ್ಲಿ ಎಷ್ಟು ಮಂದಿ ಮಹಿಳೆಯರಿಗೆ ಸೋಂಕು

ಅಮೆರಿಕದಲ್ಲಿ 105,000 ಮಹಿಳೆಯರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಮತ್ತು 18,000 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ನಾಲ್ಕನೇ ಒಂದು ಭಾಗದಷ್ಟು ಮಂದಿ ತೀವ್ರ ನಿಗಾ ಘಕಟದಲ್ಲಿದ್ದಾರೆ. ಮತ್ತು 124 ಮಂದಿ ಮೃತಪಟ್ಟಿದ್ದಾರೆ.
ಟೆನ್ನೆಸ್ಸೀ ಶಿಶುವಿಹಾರದ ಶಿಕ್ಷಕಿ ಸಾರಾ ಬ್ರೌನ್ ಅವರು ಮಗು ಹುಟ್ಟುವವರೆಗೂ ಲಸಿಕೆ ತೆಗೆದುಕೊಳ್ಳಬಾರದು ಎಂದು ನಿರ್ಧರಿಸಿದರು, ಆಗ ಗರ್ಭಿಣಿಯರು ಲಸಿಕೆ ಪಡೆದರೆ ಸುರಕ್ಷಿತ ಎಂಬಷ್ಟು ನಂಬಿಕೆ ಇರಲಿಲ್ಲ. ಆದರೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ಸೇರಬೇಕಾಯಿತು. ಉಸಿರಾಟದ ತೊಂದರೆಯಿಂದಾಗಿ ಐದು ದಿನ ಐಸಿಯುನಲ್ಲಿ ಇದ್ದರು. ಆಗಸ್ಟ್ 2 ರಂದು ಆರೋಗ್ಯಕರ ಮಗುವಿಗೆ ಜನ್ಮ ನೀಡಿದ್ದಾರೆ.
ಆದರೆ ಎಲ್ಲಾ ಪ್ರಕರಣಗಳಲ್ಲಿಯೂ ಹೀಗೆ ಆಗುವುದಿಲ್ಲ.

 ವೈದ್ಯರು ನೀಡಿರುವ ಸಲಹೆ ಏನು?

ವೈದ್ಯರು ನೀಡಿರುವ ಸಲಹೆ ಏನು?

ರಾಷ್ಟ್ರೀಯ ಸಲಹಾ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯ ಗರ್ಭಿಣಿಯರಿಗೆ ಲಸಿಗೆ ನೀಡಲು ಒಪ್ಪಿಗೆ ನೀಡಿದ್ದು, ಇದರ ಬೆನ್ನಲ್ಲೇ ಕೊರೊನಾ 3ನೇ ಅಲೆ ಆರಂಭಕ್ಕೂ ಮುನ್ನ ಲಸಿಕೆ ಪಡೆದುಕೊಳ್ಳುವಂತೆ ಗರ್ಭಿಣಿ ಮಹಿಳೆಯರಿಗೆ ತಜ್ಞರು ಸಲಹೆಗಳನ್ನು ನೀಡುತ್ತಿದ್ದಾರೆ.
ಇದೀಗ ಕೇಂದ್ರ ಸರ್ಕಾರ ಗರ್ಭಿಣಿಯರಿಗೆ ಲಸಿಕೆ ನೀಡಲು ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಕೊರೊನಾ ಮೂರನೇ ಅಲೆ ಆರಂಭಕ್ಕೂ ಮುನ್ನ ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡಲು ಯಾವುದೇ ರೀತಿಯ ಸಮಸ್ಯೆ ಹಾಗೂ ತೊಡಕುಗಳು ಎದುರಾಗದಂತೆ ನೋಡಿಕೊಳ್ಳಲು ಪ್ರತ್ಯೇಕ ಲಸಿಕಾ ಅಭಿಯಾನವನ್ನು ಸರ್ಕಾರ ನಡೆಸಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ.

 ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತಿದೆ

ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತಿದೆ

ಈಗಾಗಲೇ ಗರ್ಭಿಣಿಯರಿಗೆ ಲಸಿಕೆ ನೀಡುವ ಕಾರ್ಯಕ್ರಮಗಳು ಆರಂಭವಾಗಿದೆ. ಗರ್ಭಿಣಿಯರು ಲಸಿಕೆ ಪಡೆದುಕೊಳ್ಳಲು ಈಗಿನಿಂದಲೇ ತಾವಾಗಿಯೇ ಮುಂದಾಗಿದ್ದೇ ಆದರೆ, ಮೂರನೇ ಆರಂಭವಾಗುವುದಕ್ಕೂ ಮುನ್ನ ಎಲ್ಲಾ ಗರ್ಭಿಣಿಯರಿಗೂ ಲಸಿಕೆ ನೀಡಲು ಸಹಾಯಕವಾಗುತ್ತದೆ ಎಂದು ಎಂದು ವೈದ್ಯರು ಹೇಳಿದ್ದಾರೆ.

ಮೊದಲ ತ್ರೈಮಾಸಿಕ ಬಳಿಕ ಗರ್ಭಿಣಿಯರು ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ. ಮೊದಲ ತ್ರೈಮಾಸಿಕ ಪೂರ್ಣಗೊಂಡ ಬಳಿಕ ಯಾವಾಗ ಬೇಕಾದರೂ ಗರ್ಭಿಣಿಯರು ಲಸಿಕೆ ಪಡೆದುಕೊಳ್ಳಬಹುದಾಗಿದೆ. ಗರ್ಭಧರಿಸಿದ ಆರಂಭಿಕ ತಿಂಗಳುಗಳಲ್ಲಿ ಎದುರಾಗುವ ಅಡ್ಡಪರಿಣಾಮಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಹೀಗಾಗಿ ಮೊದಲ ತ್ರೈಮಾಸಿಕದ ಬಳಿಕ ಲಸಿಕೆ ಪಡೆದುಕೊಳ್ಳುವುದು ಉತ್ತಮ .

English summary
The Centers for Disease Control and Prevention on Wednesday strongly recommended that pregnant and breastfeeding women be vaccinated against Covid-19, pointing to new safety data that officials hope will sway the many who have resisted despite mounting evidence that the coronavirus can pose grave risks to their health and increase the chance of a preterm birth.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X