ಕೆನಡಾ: ಹೈಸ್ಕೂಲ್ ಮೇಲೆ ಗುಂಡಿನ ದಾಳಿ, ಶಂಕಿತ ಶೂಟರ್ ಸೇರಿ 10 ಸಾವು
ಕೊಲಂಬಿಯಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ನಗರದಲ್ಲಿ ಪ್ರೌಢಶಾಲೆಯಲ್ಲಿ ಮಂಗಳವಾರ ಜರುಗಿದ ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಶಂಕಿತ ಶೂಟರ್ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ. ಅನೇಕ ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸರ್ಕಾರಿ ಏಜೆನ್ಸಿಯಾದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (RCMP) ಮಾಹಿತಿ ನೀಡಿದೆ.
ದಿಢೀರ್ ನಡೆದ ಈ ಗುಂಡಿನ ದಾಳಿಯಲ್ಲಿ ಟಂಬ್ಲರ್ ರಿಡ್ಜ್ ಮಾಧ್ಯಮಿಕ ಶಾಲೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿಯ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

25 ಮಂದಿ ಗಾಯಾಳು, ಇಬ್ಬರು ಸ್ಥಿತಿ ಚಿಂತಾಜನಕ
ಕೆನಡಾದ ಈ ಮಾಧ್ಯಮಿಕ ಶಾಲೆಯಲ್ಲಿನ ಈ ದಾಳಿಯಲ್ಲಿ ವೃತ್ತಿಪರ ಶೂಟರ್ಗಳು ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಅದರಲ್ಲಿ "ಗುಂಡು ಹಾರಿಸಿದ ವ್ಯಕ್ತಿಯೇ ಗಾಯಗೊಂಡು ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಾರಣಾಂತಿಕ ಗಾಯಗಳಿಂದ ಅವರು ಬಳಲುತ್ತಿದ್ದು, ಸ್ಥಳೀಯ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಈಗಲೇ ಏನು ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಆರ್ಸಿಎಂಪಿ ಹೇಳಿದೆ.
3,000ಕ್ಕಿಂತ ಕಡಿಮೆ ಜನ ಇಲ್ಲಿ ವಾಸ
ಘಟನೆ ಬಳಕಿಗೆ ಬರುತ್ತಿದ್ದಂತೆ ರಕ್ಷಣೆಗೆ ಧಾವಿಸಿದ ಪೊಲೀಸರು ಶಾಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ಭಾಗದಲ್ಲಿನ ನಾಗರಿಕರಿಗೆ, ಶಾಲೆಗಳೊಂದಿಗೆ ಪೊಲೀಸ್ ಸಿಬ್ಬಂದಿ ಪಡೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚಿನ ಅವಘಡ ಆಗದಂತೆ ನಿಗಾ ವಹಿಸಿದ್ದಾರೆ. ಈ ಟಂಬ್ಲರ್ ರಿಡ್ಜ್ ಪಟ್ಟಣವು ಕೆನಡಾದ ವ್ಯಾಂಕೋವರ್ನಿಂದ ಉತ್ತರಕ್ಕೆ 1,100 ಕಿಲೋ ಮೀಟರ್ ದೂರದಲ್ಲಿದ್ದು, ಬ್ರಿಟಿಷ್ ಕೊಲಂಬಿಯಾ ರಾಕಿ ಪರ್ವತಗಳ ತಪ್ಪಲಿನಲ್ಲಿದೆ. ಸುಮಾರು 3,000 ಕ್ಕಿಂತ ಕಡಿಮೆ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಇಂತಹ ಪ್ರದೇಶವನ್ನು ಆರೋಪಿಗಳು ಟಾರ್ಗೆಟ್ ಮಾಡಿ ಶಾಲೆ ಮೇಲೆ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ಗುಂಡು ಹಾರಿಸಿದ ಮಹಿಳೆ ಎಂದು ಕೆನಡಾದ ಮಾಧ್ಯಮಗಳು ವರದಿ ಮಾಡಿವೆ. ಆದರೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಶಂಕಿತನ ಗುರುತಿನ ಪತ್ತೆ, ಇತರ ಮಾಹಿತಿ ನೀಡಲು ಆರ್ಸಿಎಂಪಿ ನಿರಾಕರಿಸಿತು. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿರುವ ಬಗ್ಗೆ ಮತ್ತು ಟಂಬ್ಲರ್ ರಿಡ್ಜ್ ನಿವಾಸಿಗಳಿಗೆ ಧೈರ್ಯ ನೀಡಿದ್ದಾಗಿ ಪೊಲೀಸರು ಹೇಳಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications