ಬಾಡಿಗೆಗಿದೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಧಿಕೃತ ನಿವಾಸ
ಇಸ್ಲಾಮಾಬಾದ್, ಆಗಸ್ಟ್ 03: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕೃತ ನಿವಾಸ ಬಾಡಿಗೆಗಿದೆ ಎನ್ನುವ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ.
2019ರ ಅಗಸ್ಟ್ ನಲ್ಲಿ ಇಮ್ರಾನ್ ಖಾನ್ ಪ್ರಧಾನಿ ಸರ್ಕಾರದ ಅಧಿಕೃತ ನಿವಾಸದಿಂದ ಸ್ವಂತ ಮನೆಗೆ ಶಿಫ್ಟ್ ಆಗಿದ್ದರು. ಬಳಿಕ ಈ ಪ್ರಧಾನಿ ನಿವಾಸವನ್ನು ವಿಶ್ವವಿದ್ಯಾಲಯವಾಗಿ ಪರಿವರ್ತಿಸತ್ತೇವೆ ಎಂದು ಪಾಕಿಸ್ತಾನ ಸರ್ಕಾರ ಹೇಳಿತ್ತು. ಆದರೀಗ ಪ್ರಧಾನಿ ನಿವಾಸ ಕಟ್ಟಡವನ್ನು ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದೆ.
ಇಮ್ರಾನ್ ಖಾನ್ ಅಧಿಕೃತ ನಿವಾಸವನ್ನು ಬಾಡಿಗೆ ನೀಡಲಿದ್ದಾರೆ. ಈ ಕುರಿತಾಗಿ ಖುದ್ದು ಇಮ್ರಾನ್ ಖಾನ್ ಅವರೇ ಹೀಗೊಂದು ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪಾಕಿಸ್ತಾನ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಯೂನಿವರ್ಸಿಟಿ ಮಾಡುತ್ತೇವೆ ಎಂದು ಹೇಳಿ ಇದೀಗ ಬಾಡಿಗೆಗೆ ನೀಡುತ್ತಿರುವುದ್ಯಾಕೆ ಎಂಬುದಕ್ಕೆ ಉತ್ತರ ಹಣಕಾಸಿನ ಕೊರತೆಯಾಗಿದೆ. ಈ ಹಿಂದೆ ಇಮ್ರಾನ್‍ಖಾನ್ ತಮ್ಮ ಸಚಿವಾಲಯದ ಕರೆಂಟ್ ಬಿಲ್ ಕಟ್ಟದೆ ಸುದ್ದಿಯಾಗಿದ್ದರು. ಇದೀಗ ನಿವಾಸವನ್ನು ಬಾಡಿಗೆ ನೀಡುವ ನಿರ್ಧಾರಕ್ಕೆ ಬರುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಫ್ಯಾಷನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಪ್ರಧಾನಿ ನಿವಾಸ ಬಾಡಿಗೆಗೆ ಸಿಗಲಿದೆ. ಸರ್ಕಾರದ ಯಾವುದೇ ನಿಯಮಗಳನ್ನು ಉಲ್ಲಂಘಿಸದೇ ಈ ಕಟ್ಟಡ ಬಳಸಿಕೊಳ್ಳಬಹುದಾಗಿದೆ ಎಂದು ಕಾಲ್ ಫೆಡೆರಲ್ ಕ್ಯಾಬಿನೆಟ್ ಆದೇಶ ಹೊರಡಿಸಿದೆ.
ಪಾಕಿಸ್ತಾನ ಪ್ರಧಾನಿ ಕಾರ್ಯಾಲಯ ಹೊಸದಾಗಿ ಹೊರಡಿಸಿರುವ ಪ್ರಕಟಣೆಯಲ್ಲಿ ನಿವಾಸ ಬಾಡಿಗೆಗೆ ನೀಡುವುದಾಗಿ ಹೇಳಿದೆ. ಆರ್ಥಿಕ ಸಂಕಷ್ಟ ಸರಿದೂಗಿಸಲು ಪಾಕಿಸ್ತಾನ ಸರ್ಕಾರ ಈ ರೀತಿ ತಂತ್ರಕ್ಕೆ ಇಳಿದಿರುವುದು ಇದೇ ಮೊದಲಲ್ಲ. ಕತ್ತೆ ವ್ಯಾಪಾರ ಸೇರಿದಂತೆ ಹಲವು ಮೂಲಗಳಿಂದ ಹಣ ಹೊಂದಿಸುವ ಕಾರ್ಯಕ್ಕೆ ಕೈಹಾಕಿದೆ. ಇದೀಗ ಬಾಡಿಗೆ ಮೂಲಕ ಹಣ ಪಡೆಯಲು ಮುಂದಾಗಿದೆ.
ಪ್ರಧಾನಿ ಅಧಿಕೃತ ನಿವಾಸವನ್ನು ಸ್ನಾತಕೋತ್ತರ ಸಂಸ್ಥೆಯನ್ನಾಗಿ ಪರಿವರ್ತಿಸುವುದಾಗಿ ಶಿಕ್ಷಣ ಸಚಿವ ಶಫ್‌ಖಾತ್ ಮೆಹಮ್ಮೂದ್ ಹೇಳಿದ್ದರು. ಪ್ರಧಾನಿ ನಿವಾಸ ಮಾತ್ರವಲ್ಲ, ಗರ್ವನರ್ ಕೂಡ ಅಧೀಕೃತ ನಿವಾಸ ತೊರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.
ಬರುತ್ತಿದ್ದ ಆದಾಯಕ್ಕೆ ಕತ್ತರಿ ಬಿದ್ದ ಕಾರಣ ಇದೀಗ ಪ್ರಧಾನಿ ನಿವಾಸವನ್ನು ಬಾಡಿಗೆಗೆ ನೀಡಲು ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ. ಈಗಾಗಲೇ ಬಾಡಿಗೆಗೆ ಪ್ರಕಟಣೆ ಹೊರಡಿಸಲಾಗಿದೆ. ಕೊರೋನಾ ಸಂಕಷ್ಟದಲ್ಲಿ ದುಬಾರಿ ಮೊತ್ತಕ್ಕೆ ಯಾರು ಬಾಡಿಗೆ ಪಡೆಯುತ್ತಾರೆ ಎನ್ನುವ ಪ್ರಶ್ನೆಯೂ ಇದೀಗ ಎದುರಾಗಿದೆ.
ಪ್ರಧಾನಿ ನಿವಾಸವನ್ನು ವಿದ್ಯಾಸಂಸ್ಥೆಯನ್ನಾಗಿ ಪರಿವರ್ತಿಸಲು ಪಾಕಿಸ್ತಾನ ಸರ್ಕಾರ ಹಣದ ಕೊರತೆ ಎದುರಿಸಿತು. ಹೀಗಾಗಿ 2019ರಲ್ಲಿ ಈ ನಿವಾಸವನ್ನು ಮದುವೆ ಸೇರಿದಂತೆ ಸಮಾರಂಭಗಳ ಹಾಲ್ ಆಗಿ ಪರಿವರ್ತಿಸಲಾಯಿತು. 2019ರಲ್ಲಿ ಪಾಕಿಸ್ತಾನ ಸೇನಾ ಬ್ರಿಗೇಡಿಯರ್ ವಾಸೀಮ್ ಪುತ್ರಿ ಮದುವೆ ಸೇರಿದಂತೆ ಹಲವು ರಾಜಕೀಯ ನಾಯಕರ ಮದುವೆಗೆ ಪಾಕಿಸ್ತಾನಿ ಪ್ರಧಾನಿ ನಿವಾಸ ಸಾಕ್ಷಿಯಾಗಿತ್ತು.
ಪಾಕ್ ಪ್ರಧಾನಿ ಅಧಿಕೃತ ನಿವಾಸದಿಂದ ಆದಾಯ ಪ್ಲಾನ್ ಮಾಡಿರುವುದು ಹೊಸದಲ್ಲ. ಪ್ರಧಾನಿ ಇಮ್ರಾನ್ ಖಾನ್ ತಮ್ಮ ಅಧೀಕೃತ ನಿವಾಸದ ವಾರ್ಷಿಕ 470 ಮಿಲಿಯನ್ ನಿರ್ವಹಣೆ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು 2018ರಲ್ಲಿ ನಿವಾಸ ತೊರೆದಿದ್ದರು. ಈ ವೇಳೆ ಪಾಕಿಸ್ತಾನ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿತ್ತು.
2019ರಲ್ಲಿ ಪ್ರಧಾನಿ ನಿವಾಸ ಒಂದಷ್ಟು ಆದಾಯ ತಂದಿದ್ದು ಸುಳ್ಳಲ್ಲ. ಆದರೆ 2020ರಲ್ಲಿ ಕೊರೋನಾ ವಕ್ಕರಿಸಿತು. ಪರಿಣಾಮ ಮದುವೆ ಸಮಾರಂಭಗಳೆಲ್ಲಾ ನಿಂತು ಹೋಯಿತು. ಇತ್ತ ಪ್ರಧಾನಿ ನಿವಾಸದಿಂದ ಬರುತ್ತಿದ್ದ ಆದಾಯವೂ ನಿಂತು ಹೋಯಿತು. ಕಳೆದೊಂದು ವರ್ಷದಿಂದ ಪ್ರಧಾನಿ ನಿವಾಸದಲ್ಲಿ ಯಾವ ಸಮಾರಂಭ ನಡೆದಿಲ್ಲ.
ಇತ್ತೀಚೆಗಷ್ಟೇ ಕೊರೊನಾ ಸಂಕಷ್ಟ ಎಂದು ಕಾರಣಕೊಟ್ಟು ಪೆಟ್ರೋಲ್ ದರವನ್ನು ಹೆಚ್ಚಳ ಮಾಡಿದ್ದರು. ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 5.4ರೂ. ಏರಿಕೆ ಮಾಡಿ ಇಮ್ರಾನ್ ಖಾನ್ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಲಾಕ್‌ಡೌನ್‌ಗೂ ಮುನ್ನವೂ ಪಾಕಿಸ್ತಾನ ಸರ್ಕಾರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿತ್ತು, ಆದರೆ ಕೊರೊನಾ ಸೋಂಕಿನಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ 5.4 ರೂ.ಗೆ ಏರಿಕೆ ಮಾಡಿ, ಡೀಸೆಲ್ ಬೆಲೆ 2.54ರಷ್ಟು ಹೆಚ್ಚಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪೆಟ್ರೋಲಿಯಂಉತ್ಪನ್ನಗಳ ಬೆಲೆ ಏರಿಕೆಯಾಗಿರುವುದರಿಂದ ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 11.4 ರೂ. ಹೆಚ್ಚಿಸುವಂತೆ ಒಜಿಆರ್‌ಎ ಶಿಫಾರಸು ಮಾಡಿತ್ತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications