ವಿದ್ಯಾರ್ಥಿಗಳ ರಕ್ಷಣೆಗೆ ಉಕ್ರೇನಿನತ್ತ ಹೊರಟ ಕೇಂದ್ರದ 4 ಸಚಿವರು

ನವದೆಹಲಿ, ಫೆಬ್ರವರಿ 28: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಕೇಂದ್ರ ಮುಂದಾಗಿದೆ. ಹಾಗೆಯೇ ಉಕ್ರೇನ್‌ಗೆ ಕೇಂದ್ರದ ನಾಲ್ವರು ಸಚಿವರು ಹೊರಟಿರುವುದು ಎಲ್ಲರಿಗೂ ಆಶ್ಚರ್ಯ ತಂದಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಮೋದಿ ಸರ್ಕಾರ ಇದೀಗ ನಾಲ್ವರು ಕೇಂದ್ರ ಸಚಿವರನ್ನೇ ಉಕ್ರೇನ್​ ಗಡಿ ರಾಷ್ಟ್ರಗಳಿಗೆ ಕಳುಹಿಸಲು ಮುಂದಾಗಿದೆ.

ಈ ನಾಲ್ವರು ಸಚಿವರು ಉಕ್ರೇನ್​ ನೆರೆಯ ರಾಷ್ಟ್ರಗಳಿಗೆ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ವಿಕೆ ಸಿಂಗ್ ಅವರು ಉಕ್ರೇನ್​​ ನೆರೆಯ ದೇಶಗಳಿಗೆ ಪ್ರಯಾಣ ಬೆಳೆಸಲಿದ್ದಾರೆ.

Centre To Send Four Ministers To Countries Neighbouring Ukraine To Oversee Evacuation Ops

ಸುಮಾರು 16,000 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಬಂಕರ್‌ಗಳು, ಬಾಂಬ್ ಶೆಲ್ಟರ್‌ಗಳು ಅಥವಾ ಅವರ ಹಾಸ್ಟೆಲ್‌ಗಳ ನೆಲಮಾಳಿಗೆಯಲ್ಲಿ ಅಡಗಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದಾರೆ.

ಪ್ರಧಾನಿ ಮೋದಿ ಭಾನುವಾರವೂ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿಯವರಲ್ಲದೆ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎರಡು ಗಂಟೆಗೂ ಹೆಚ್ಚು ಕಾಲ ಈ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದಲ್ಲಿ ಪ್ರಚಾರ ಮುಗಿಸಿ ಹಿಂದಿರುಗಿದ ತಕ್ಷಣ ಪ್ರಧಾನಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉದ್ಭವಿಸಿರುವ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಇತ್ತೀಚೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದರು ಮತ್ತು ಹಿಂಸಾಚಾರವನ್ನು ನಿಲ್ಲಿಸಿ ಮಾತುಕತೆ ಪ್ರಾರಂಭಿಸುವಂತೆ ಮನವಿ ಮಾಡಿದ್ದರು.

ಇದರ ನಂತರ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದರು ಮತ್ತು ತನ್ನ ದೇಶದ ವಿರುದ್ಧ ರಷ್ಯಾದ ಮಿಲಿಟರಿ ಆಕ್ರಮಣವನ್ನು ನಿಲ್ಲಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಭಾರತದಿಂದ ರಾಜಕೀಯ ಬೆಂಬಲವನ್ನು ಕೋರಿದ್ದರು.

ರಷ್ಯಾದ ದಾಳಿಯ ನಂತರ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರುವ ಪ್ರಯತ್ನಗಳ ಮಧ್ಯೆ ಪ್ರಧಾನಿ ಮೋದಿ ಭಾನುವಾರ ಉನ್ನತ ಮಟ್ಟದ ಸಭೆಗೆ ಒತ್ತಾಯಿಸಿದ್ದರು. ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಬೇಗನೆ ಹಿಂದಿರುಗುವಿಕೆಯನ್ನು ಖಚಿತಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದಾರೆ.

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ನೆರೆಯ ದೇಶಗಳಾದ ರೊಮೇನಿಯಾ, ಹಂಗೇರಿ, ಸ್ಲೋವಾಕ್ ರಿಪಬ್ಲಿಕ್ ಮತ್ತು ಪೋಲೆಂಡ್‌ನಿಂದ ಏರ್ ಇಂಡಿಯಾ ಸ್ಥಳಾಂತರಿಸುವ ವಿಮಾನಗಳ ಮೂಲಕ ಕರೆ ತರುವ ಪ್ರಯತ್ನಕ್ಕೆ ಭಾರತ ಮುಂದಾಗಿದೆ.

ಉಕ್ರೇನ್​ನಲ್ಲಿ ಯುದ್ಧ ಪರಿಸ್ಥಿತಿ ಹೆಚ್ಚಾಗುತ್ತಿರುವ ಹಿನ್ನೆ ಜೀರೋ ತಾಪಮಾನದಲ್ಲಿ ಅನೇಕ ವಿದ್ಯಾರ್ಥಿಗಳು ಹಲವು ಕಿ.ಮೀ ದೂರ ಕಾಲ್ನಡಿಗೆಯಲ್ಲಿ ಗಡಿಗೆ ತೆರಳಿದ್ದರು. ಆದರೆ, ಅನೇಕ ವಿದ್ಯಾರ್ಥಿಗಳು, ತಾವು ಉಕ್ರೇನ್​ ಗಡಿ ದಾಟಲು ಸಾಧ್ಯವಾಗುತ್ತಿಲ್ಲ.

ಜೊತೆಗೆ ಅಧಿಕಾರಿಗಳಿಂದ ಯಾವುದೇ ಸಹಾಯವೂ ಸಿಗುತ್ತಿಲ್ಲ ಎಂದು ಆರೋಪಿಸಿದರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವಾಲಯದ ಹಲವು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದು, ಉಕ್ರೇನ್​ ಪರಿಸ್ಥಿತಿಯನ್ನು ಅವರಿಗೆ ವಿವರಿಸಿದರು.

ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ ಭಾರತೀಯ ವಿದ್ಯಾರ್ಥಿಗಳನ್ನು ಬಸ್, ರೈಲು ಅಥವಾ ಇತರ ಮಾರ್ಗಗಳಲ್ಲಿ ಕರೆದೊಯ್ಯಲಾಗುತ್ತಿದೆ. ಅಲ್ಲಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಕರೆತರಲಾಗುವುದು. ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರವು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+