Get Updates
Get notified of breaking news, exclusive insights, and must-see stories!

ಕೆನಾಡದಲ್ಲಿ ಕನ್ನಡದ ಕಂಪು: ಕರ್ನಾಟಕ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ, ವಿಡಿಯೋ ಇಲ್ಲಿದೆ

Kannada Speech in Canada Parliament: ಕರ್ನಾಟಕದಲ್ಲಿ ಪರಭಾಷಿಗರ ದಬ್ಬಾಳಿಕೆ ಹೆಚ್ಚಾಗಿಬಿಟ್ಟಿದೆ. ಅದು ಹೋಗಲಿ ಇಲ್ಲಿನ ಕೆಲವು ಮಂದಿಯೇ ಅವರ ತಾಳಕ್ಕೆ ಕುಣಿಯುತ್ತಾ ತಾಯ್ನಾಡಿನ ಭಾಷೆಯನ್ನೇ ಅಪಮಾನಿಸುತ್ತಿರುವ ಘಟನೆಗಳು ನಡೆಯುತ್ತಲೇ ಇವೆ. ಈ ನಡುವೆಯೇ ಕೆನಾಡದ ಸಂಸತ್‌ನಲ್ಲಿ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಳಿಕ ಭಾರತದ ಮೂಲದವರೊಬ್ಬರು ರಾಜ್ಯದ ಬಗ್ಗೆ ಅಭಿಮಾನದಿಂದ ಮಾತನಾಡಿ ಗಮನ ಸೆಳೆದಿದ್ದಾರೆ.

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಹಠಾತ್ ರಾಜೀನಾಮೆ ಹಿನ್ನೆಲೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ. ಭಾರತ ಮೂಲದ ಚಂದ್ರ ಆರ್ಯ ಅವರು ಇದೀಗ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಅವರು ಅಲ್ಲಿನ ಸಂಸತ್‌ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ್ದು, ಈ ವಿಡಿಯೋ ಭಾರೀ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಪತ್ರಕರ್ತೆ ಸ್ಮೀತಾ ಪ್ರಕಾಶ್ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Chandra Arya Speaks in Kannada During Nomination for Canada Prime Minister Post Video viral

ಭಾರತ ಮೂಲದ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಮಾಡಿ ಬಳಿಕ ಕನ್ನಡದಲ್ಲಿಯೇ ಮಾತನಾಡಿರುವುದು ವಿಶೇಷವಾಗಿದೆ. ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

ಚಂದ್ರ ಆರ್ಯ ಹೇಳಿದ್ದೇನು?: "ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು 7 ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ. ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾದ ಈ ಸಂಸತ್‌ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು" ಎಂದು ಹೇಳಿದ್ದಾರೆ.

ಅಲ್ಲದೆ, "ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ.ರಾಜ್‌​ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಕರುನಾಡ ಜನರ ಮನ ಗೆದ್ದಿದ್ದಾರೆ. ಇನ್ನು ಕೆನಡಾಕ್ಕೆ ವಲಸೆ ಹೋಗುವ ಮೊದಲು ಇವರು ಧಾರವಾಡಲ್ಲಿ ಎಂಬಿಎ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಮಾಡುವ, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನ ಗುರುತಿಸುವ ಭರವಸೆ ನೀಡುವ ಅಭಿಯಾನದೊಂದಿಗೆ ಲಿಬರಲ್ ನಾಯಕತ್ವಕ್ಕಾಗಿ ಸ್ಪರ್ಧಿಸುವುದಾಗಿ ಈ ಹಿಂದೇ ಹೇಳಿದ್ದರು. 2040ರಲ್ಲಿ ನಿವೃತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು ಚಂದ್ರ ಆರ್ಯ ಭರವಸೆಗಳನ್ನು ಈಗಾಗಲೇ ನೀಡಿದ್ದರು ಎಂದು ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+