ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಿಟ್ಜರ್ಲೆಂಡ್ ನಲ್ಲಿ ಮಿಂಚಿನ ಸಂಚಾರ ನಡೆಸಿದ ಸಿಎಂ ಯಡಿಯೂರಪ್ಪ

|
Google Oneindia Kannada News

ದಾವೊಸ್ (ಸ್ವಿಟ್ಜರ್ಲ್ಯಾಂಡ್), ಜನವರಿ 20: ಕರ್ನಾಟಕಕ್ಕೆ ಜಾಗತಿಕ ಹೂಡಿಕೆದಾರರನ್ನು ಸೆಳೆಯಲು ಸ್ವಿಟ್ಜರ್ಲ್ಯಾಂಡ್ ನ ದಾವೂಸ್‌ ಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಲ್ಲಿ ಮಿಂಚಿನ ಸಂಚಾರ ನಡೆಸಿ, ಯುರೋಪ್ ಹೂಡಿಕೆದಾರರ ಗಮನ ಸೆಳೆದಿದ್ದಾರೆ.

ಕರ್ನಾಟಕದಲ್ಲಿ ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿದ್ದಾರೆ.

ಸೂಟು-ಬೂಟು ತೊಟ್ಟು ವಿದೇಶಕ್ಕೆ ಹಾರಿದ ಬಿ. ಎಸ್. ಯಡಿಯೂರಪ್ಪಸೂಟು-ಬೂಟು ತೊಟ್ಟು ವಿದೇಶಕ್ಕೆ ಹಾರಿದ ಬಿ. ಎಸ್. ಯಡಿಯೂರಪ್ಪ

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಭಾರತ ಮತ್ತು ಏಷ್ಯಾ ಅಜೆಂಡಾದ ಪ್ರಾದೇಶಿಕ ಮುಖ್ಯಸ್ಥ ವಿರಾಜ್ ಮೆಹ್ತಾ ಅವರು ಮುಖ್ಯಮಂತ್ರಿ ಅವರಿಗೆ ಸಾತ್ ಕೊಟ್ಟಿದ್ದಾರೆ.

ಕರ್ನಾಟಕ ಪೆವಿಲಿಯನ್ ಉದ್ಘಾಟನೆ

ಕರ್ನಾಟಕ ಪೆವಿಲಿಯನ್ ಉದ್ಘಾಟನೆ

ದಾವೊಸ್ ನಲ್ಲೆ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟನೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊರಾಟ್ ಸಾನ್ಮೆಝ್ ಅವರು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ವ್ಯಾಪಾರ ವಹಿವಾಟಿನಲ್ಲಿ ನೈತಿಕತೆಯು ಕಡಿಮೆಯಾಗುತ್ತಿರುವ ಕುರಿತು ಹೂಡಿಕೆದಾರರು ಕಳವಳ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಗಳು ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ ಅನ್ನು ಪ್ರಾರಂಭಿಸುವ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ದುರುಪಯೋಗ ತಡೆಯಲು ಈ ಕೇಂದ್ರ ಸಹಕಾರಿ ಎಂದು ವಿವರಿಸಿದರು.

 ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ

ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ

ಕರ್ನಾಟಕ ರಾಜ್ಯವು ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸುವುದಾದರೆ, ಈ ಕೇಂದ್ರವನ್ನು ಕೂಡಲೇ ಸ್ಥಾಪಿಸುವಂತೆ ಮೊರಾಟ್ ಸಾನ್ಮೆಝ್ ಸಲಹೆ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಕೇಂದ್ರವನ್ನು ಸ್ಥಾಪಿಸುವ ಭರವಸೆ ನೀಡಿದರು. ನಂತರ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರು ಸುಲಲಿತ ವಹಿವಾಟು ನಡೆಸಲು ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ದಾವೋಸ್ ನಲ್ಲಿ ಹೂಡಿಕೆದಾರರ ಅಕರ್ಷಿಸಲು ಯಡಿಯೂರಪ್ಪ ಸಜ್ಜುದಾವೋಸ್ ನಲ್ಲಿ ಹೂಡಿಕೆದಾರರ ಅಕರ್ಷಿಸಲು ಯಡಿಯೂರಪ್ಪ ಸಜ್ಜು

ಆಸಕ್ತಿ ವಹಿಸಿದೆ

ಆಸಕ್ತಿ ವಹಿಸಿದೆ

ಅಭಿವೃದ್ಧಿಯ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳಲು ರಾಜ್ಯ ಸರ್ಕಾರ ಉತ್ಸುಕವಾಗಿದ್ದು, ಜಾಗತಿಕ ಮಟ್ಟದಲ್ಲಿ ಕರ್ನಾಟಕ ಮುಂಚೂಣಿಗೆ ಬರಲು ನೆರವಾಗುವ ಅಧ್ಯಯನಗಳನ್ನು ಕೈಗೊಳ್ಳಲು ಆಸಕ್ತಿ ವಹಿಸಿದೆ ಎಂದು ಹೂಡಿಕೆದಾರರಿಗೆ ಸಿಎಂ ಯಡಿಯೂರಪ್ಪ ತಿಳಿಸಿದರು.

 ವರ್ಲ್ಡ್ ಎಕನಾಮಿಕ್ ಫೋರಂ 2020ರ

ವರ್ಲ್ಡ್ ಎಕನಾಮಿಕ್ ಫೋರಂ 2020ರ

ಸುಸ್ಥಿರ ಕೈಗಾರಿಕೆಗಳನ್ನು ರೂಪಿಸುವ ಮೂಲಕ ಕರ್ನಾಟಕ ರಾಜ್ಯವು ವರ್ಲ್ಡ್ ಎಕನಾಮಿಕ್ ಫೋರಂ 2020ರ ಗುರಿ ಸಾಧನೆಗೆ ಸಕ್ರಿಯವಾಗಿ ಶ್ರಮಿಸಲಿದೆ. ಭಾರತದ ಪ್ರಮುಖ ಕೈಗಾರಿಕಾ ರಾಜ್ಯವಾಗಿ ಹೊರಹೊಮ್ಮುವ ಮೂಲಕ ಜಾಗತಿಕ ಮಟ್ಟದಲ್ಲಿಯೂ ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ರಾಜ್ಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

English summary
Karnataka Chief Minister BS Yediyurappa Invited The Global Investors In Davos. Yediyurappa assured for investors, 'Karnataka will be a good friend for Investors'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X