ಸ್ವಿಟ್ಜರ್ಲ್ಯಾಂಡ್‌ನಲ್ಲಿ ಯಡಿಯೂರಪ್ಪ-ಟ್ರಂಪ್ ಮುಖಾಮುಖಿ!
ದಾವೊಸ್, ಜನವರಿ 21: ಸ್ವಿಟ್ಜರ್ಲ್ಯಾಂಡ್‌ನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ರಾಜ್ಯದ ಮುಖ್ಯಮಂತ್ರಿಯೊಬ್ಬರು ಅಮೆರಿಕ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಗೆ ಸಿಎಂ ಬಿ ಎಸ್ ಯಡಿಯೂರಪ್ಪ ಪಾತ್ರರಾದರು.
2003ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಆ ಸಂದರ್ಭದಲ್ಲಿ ಅಮೆರಿಕಾ ಸರ್ಕಾರದ ಕಾರ್ಯದರ್ಶಿ ಸಮಾವೇಶದಲ್ಲಿ ಭಾಗವಹಿಸಿದ್ದರು.

ಟ್ರಂಪ್ ಹೊಗಳಿದ ಯಡಿಯೂರಪ್ಪ
ಸಭೆಯ ನಂತರ ಟ್ರಂಪ್ ಅವರ ಭಾಷಣದ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, "ಟ್ರಂಪ್ ಅವರ ಭಾಷಣ, ಸರಿಯಾದ ದಿಕ್ಕಿನಲ್ಲಿದ್ದರೂ, ತಮ್ಮ ದೇಶದ ಆರ್ಥಿಕತೆಯ ಕುರಿತು ಅವರು ಗಮನ ಕೇಂದ್ರೀಕರಿಸಿದರು. ಆದರೆ, ಯಾವುದೇ ದೇಶದ ನಾಯಕನ ದೃಷ್ಟಿಯಿಂದ ಇದು ಸಹಜ" ಎಂದು ಅಭಿಪ್ರಾಯಪಟ್ಟರು.

ಹೂಡಿಕೆ ರಾಜ್ಯಗಳಿಗೆ ಅತಿ ಅಗತ್ಯ
''ಟ್ರಂಪ್ ಅವರು ವರ್ಲ್ಡ್ ಎಕನಾಮಿಕ್ ಫೋರಂ ಹೂಡಿಕೆದಾರರು ಹಾಗೂ ವ್ಯಾಪಾರಸ್ಥರಿಗೆ ತಮ್ಮ ವಹಿವಾಟು ವಿಸ್ತರಿಸಲು ವೇದಿಕೆಯಾಗಿದೆ. ಅಂತೆಯೇ ರಾಜಕೀಯ ನಾಯಕರಿಗೆ ತಮ್ಮ ರಾಜ್ಯ ಮತ್ತು ದೇಶಕ್ಕೆ ಹೂಡಿಕೆದಾರರನ್ನು ಆಹ್ವಾನಿಸುವ ಮೂಲಕ ತಮ್ಮ ದೇಶದ ಆರ್ಥಿಕತೆಯನ್ನು ವೃದ್ಧಿಸಲು ಉತ್ತಮ ಅವಕಾಶವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪೂರಕವಾಗಿ ಇಂತಹ ವೇದಿಕೆಗಳು ತಮ್ಮದೇ ಸಂಪನ್ಮೂಲ ಹೊಂದಿಸಲು ಅಡಚಣೆ ಇರುವ ರಾಜ್ಯಗಳಿಗೆ ಅತಿ ಅಗತ್ಯ'' ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಉದ್ಯೋಗ ಸೃಷ್ಟಿ ನಮ್ಮ ಗುರಿ
''ಹೂಡಿಕೆಗಳು ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಯುವಕರಿಗೆ ಉದ್ಯೋಗ ಒದಗಿಸುತ್ತವೆ. ಉದ್ಯೋಗ ಸೃಷ್ಟಿ ನಮ್ಮ ಗುರಿ ಈಡೇರಲು ಹೂಡಿಕೆಯ ಅಗತ್ಯವಿದೆ. ಇಂತಹ ಅವಕಾಶಗಳು ರಾಜ್ಯದ ಆರ್ಥಿಕತೆ ವೃದ್ಧಿಗೆ ಪೂರಕವಾಗಿವೆ'' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಕೊರೆಯುವ ಚಳಿಯಲ್ಲಿ ಮುಖ್ಯಮಂತ್ರಿ
ಕೇವಲ ಎರಡು-ಮೂರು ಸಾವಿರ ಜನಸಂಖ್ಯೆಯ ದಾವೋಸ್‌ನಲ್ಲಿ ಮೈನಸ್ 9 ಡಿಗ್ರಿ ಸೆಲ್ಸಿಯಸ್ ಚಳಿಯನ್ನೂ ಲೆಕ್ಕಿಸದೆ ಮುಖ್ಯಮಂತ್ರಿಗಳು ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಉತ್ಸಾಹದಿಂದ ಸರಣಿ ಸಭೆಗಳನ್ನು ನಡೆಸಿದರು. ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಬಿ.ಎಸ್. ಯಡಿಯೂರಪ್ಪ ಅವರ ಜೊತೆಯಾಗಿದ್ದರು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications