ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಅಧ್ಯಕ್ಷ ಜೋ ಬೈಡನ್‌ಗೆ ಅಭಿನಂದಿಸಲು ನಿರಾಕರಿಸಿದ ಚೀನಾ

|
Google Oneindia Kannada News

ಬೀಜಿಂಗ್, ನವೆಂಬರ್ 9: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅವರನ್ನು ಅಭಿನಂದಿಸಲು ಚೀನಾ ಸೋಮವಾರ ನಿರಾಕರಿಸಿದೆ. ಅಮೆರಿಕ ಚುನಾವಣೆಯ ಫಲಿತಾಂಶವನ್ನು ದೇಶದ ಕಾನೂನು ಮತ್ತು ಪ್ರಕ್ರಿಯೆಗಳು ನಿರ್ಧರಿಸಬೇಕು ಎಂದು ಹೇಳಿದೆ.

ನವೆಂಬರ್ 3ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರ ವಿಜಯದ ಬಗ್ಗೆ ಚೀನಾ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಲ್ಲಿನ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ಚುನಾವಣೆ ಬಗ್ಗೆ ವರದಿಗಳನ್ನು ಪ್ರಕಟಿಸಿವೆ.

ಕೊನೆಯ ದಿನದವರೆಗೂ ಬೈಡನ್‌ರನ್ನು ಇಕ್ಕಟ್ಟಿಗೆ ಸಿಲುಕಿಸಲಿದ್ದಾರೆ ಡೊನಾಲ್ಡ್ ಟ್ರಂಪ್ !ಕೊನೆಯ ದಿನದವರೆಗೂ ಬೈಡನ್‌ರನ್ನು ಇಕ್ಕಟ್ಟಿಗೆ ಸಿಲುಕಿಸಲಿದ್ದಾರೆ ಡೊನಾಲ್ಡ್ ಟ್ರಂಪ್ !

ರಷ್ಯಾ ಹಾಗೂ ಚೀನಾ ಸೇರಿದಂತೆ ಅನೇಕ ದೇಶಗಳು ಇದುವರೆಗೂ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿಲ್ಲ. 'ಬೈಡನ್ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾರೆ ಎಂದು ಘೋಷಣೆ ಮಾಡಿರುವುದನ್ನು ಗಮನಿಸಿದ್ದೇವೆ. ನಮ್ಮ ತಿಳಿವಳಿಕೆ ಪ್ರಕಾರ ಚುನಾವಣೆಯ ಫಲಿತಾಂಶವನ್ನು ಅಮೆರಿಕ ಕಾನೂನು ಹಾಗೂ ಪ್ರಕ್ರಿಯೆಗಳಿಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ' ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಹೇಳಿದ್ದಾರೆ.

China Declines To Congratulate Joe Biden Says US Laws Will Determine Election Outcome

ಚೀನಾದ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಅಮೆರಿಕ ಚುನಾವಣಾ ಫಲಿತಾಂಶಚೀನಾದ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಅಮೆರಿಕ ಚುನಾವಣಾ ಫಲಿತಾಂಶ

ಚೀನಾವು ಯಾವಾಗ ಅಧಿಕೃತ ಹೇಳಿಕೆ ನೀಡಲಿದೆ ಅಥವಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿಲುವನ್ನು ಸ್ಪಷ್ಟಪಡಿಸುವವರೆಗೂ ಕಾಯಲಾಗುವುದೇ ಎಂಬ ಪ್ರಶ್ನೆಗೆ, 'ನಾವು ಅಂತಾರಾಷ್ಟ್ರೀಯ ಸಾಂಪ್ರದಾಯಿಕ ಪದ್ಧತಿಗಳನ್ನು ಅನುಸರಿಸುತ್ತೇವೆ' ಎಂದು ತಿಳಿಸಿದ್ದಾರೆ.

English summary
US Elections: China has declined to congratulate newly elected president Joe Biden and said US Laws will determine election outcome.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X