3ನೇ ವರ್ಲ್ಡ್ ವಾರ್‌ಗೆ ದೊಡ್ಡ ತಯಾರಿ..? ನೌಕಾಸೇನೆಯಲ್ಲಿ ನಂ. 1 ಸ್ಥಾನಕ್ಕೆ ಚೀನಾ..!

ಚೀನಾ ಆರ್ಥಿಕವಾಗಿ ಮಾತ್ರವಲ್ಲ, ಸೇನಾ ಸಾಮರ್ಥ್ಯದಲ್ಲೂ ಜಗತ್ತಿನ ಬಲಿಷ್ಠ ರಾಷ್ಟ್ರವಾಗುವತ್ತ ಹೆಜ್ಜೆ ಇಟ್ಟಿದೆ. ಸಾವಿರ ಸಾವಿರ ಯುದ್ಧ ವಿಮಾನಗಳು, 360 ಯುದ್ಧ ನೌಕೆಗಳು, ಲಕ್ಷಾಂತರ ಸೈನಿಕರು. ಹೀಗೆ ಚೀನಾ ಇಡೀ ಜಗತ್ತಿನ ಬಲಿಷ್ಠ ನೌಕಾ ಸೇನೆ ಕಟ್ಟಿದೆ. ಈ ಮೂಲಕ ಇಷ್ಟು ದಿನ ಜಗತ್ತಿನ ಬಲಿಷ್ಠ ನೌಕಾ ಸೇನೆ ಹೊಂದಿರುವ ದೇಶ ಎಂಬ ಹೆಮ್ಮೆಗೆ ಪಾತ್ರವಾಗಿದ್ದ ಅಮೆರಿಕದ ಕಿರೀಟ ಕಳಚಿದೆ. ಅಟ್ ದಿ ಸೇಮ್ ಟೈಂ, ಚೀನಾದ ನೌಕಾ ಸೇನೆ ಸಾಮರ್ಥ್ಯ ಹೆಚ್ಚಳ ವಿಶ್ವದ ದೊಡ್ಡಣ್ಣನಿಗೆ ನಡುಕ ತಂದಿದೆ.

3ನೇ ಮಹಾಯುದ್ಧದ ಮಾತುಗಳು ಅಲ್ಲಲ್ಲಿ ಓಡಾಡುವಾಗಲೇ ಇದೊಂದು ಮಹತ್ವದ ಬೆಳವಣಿಗೆಯಾಗಿದೆ. ತನ್ನ ವಿರೋಧಿಗಳು ಹಾಗೂ ಶತ್ರು ಪಡೆಗಳ ನಾಶಕ್ಕೆ ಡ್ರ್ಯಾಗನ್ ಸೇನೆ ಪಣತೊಟ್ಟಿದೆ. ಚೀನಾ ಸಾಧನೆಯ ಹಿಂದೆ 5-10 ವರ್ಷಗಳ ಶ್ರಮ ಅಡಗಿಲ್ಲ, ಅರ್ಧ ಶತಮಾನಕ್ಕೂ ಹೆಚ್ಚು ಸಮಯದ ಹೋರಾಟವಿದೆ. ಅದರಲ್ಲೂ ಜಿನ್‌ಪಿಂಗ್ ಅಧ್ಯಕ್ಷ ಗಾದಿಗೆ ಏರಿದ ನಂತರ ಚೀನಾ ಸೇನೆಯ ಪ್ರಾಬಲ್ಯ ಹೆಚ್ಚುತ್ತಾ ಸಾಗಿದೆ. ನೋಡ ನೋಡುತ್ತಿದ್ದಂತೆ ಅಮೆರಿಕವನ್ನೇ ಹಿಂದಿಕ್ಕಿದೆ ಚೀನಾ.

400 ಯುದ್ಧ ನೌಕೆಗಳ ಟಾರ್ಗೆಟ್..!

400 ಯುದ್ಧ ನೌಕೆಗಳ ಟಾರ್ಗೆಟ್..!

ಚೀನಾ ಸರ್ಕಾರ ನೌಕಾ ಬಲ ಹೆಚ್ಚಿಸಲು ಮತ್ತಷ್ಟು ಆದ್ಯತೆ ನೀಡುತ್ತಿದ್ದು, ಮುಂದಿನ 4 ವರ್ಷಗಳ ಅವಧಿಯಲ್ಲಿ ಈಗಿರುವ 360 ಯುದ್ಧ ನೌಕೆಗಳನ್ನು 400ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಇದು ತನ್ನ ಜಲ ಗಡಿಯಲ್ಲಿನ ಭದ್ರತೆ ಹಾಗೂ ಶತ್ರು ಪಡೆಗಳಿಗೆ ದೊಡ್ಡ ಸಂದೇಶವಾಗಲಿದೆ ಎಂಬುದು ಚೀನಾ ಲೆಕ್ಕಾಚಾರ. ಈಗಾಗಲೇ ಭೂ ಸೇನೆ ಹಾಗೂ ವಾಯು ಸೇನೆಗಳಲ್ಲೂ ಬಲ ಪ್ರದರ್ಶನ ಮಾಡಿರುವ ಚೀನಿ ಸೇನೆ, ಸಮದ್ರದ ಮೇಲೂ ಹಿಡಿತ ಸಾಧಿಸುವ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಪ್ರತಿಪಾದಿಸುವ ಹಕ್ಕು ಸ್ವಾಮ್ಯ ಇದರಿಂದ ಮತ್ತಷ್ಟು ಗಟ್ಟಿಯಾಗಲಿದೆ.

ಟ್ರಿಲಿಯನ್ ಡಾಲರ್ ಜಾಗಕ್ಕೆ ವಾರ್..?

ಟ್ರಿಲಿಯನ್ ಡಾಲರ್ ಜಾಗಕ್ಕೆ ವಾರ್..?

ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಸಾಧಿಸುವ ಚೀನಾ ಪ್ರಯತ್ನ ಇಂದು, ನಿನ್ನೆಯದಲ್ಲ. ಸುಮಾರು 3-4 ದಶಕಗಳಿಂದಲೂ ಈ ಜಾಗಕ್ಕಾಗಿ ರಕ್ತ ರಹಿತ ಬಡಿದಾಟ ನಡೆಯುತ್ತಲೇ ಇದೆ. ಅಮೆರಿಕ ಚೀನಾ ವಿರುದ್ಧ ಈ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಕತ್ತಿ ಮಸೆಯುತ್ತಲೇ ಇದೆ. ಇಷ್ಟಕ್ಕೆಲ್ಲಾ ಕಾರಣವಾಗಿರುವುದು ದಕ್ಷಿಣ ಚೀನಾ ಸಮುದ್ರದಲ್ಲಿ ಅವಿತಿರುವ ಸಂಪತ್ತು. ಸುಮಾರು 3.5 ಮಿಲಿಯನ್ ಸ್ಕ್ವೇರ್ ಕಿಲೋ ಮೀಟರ್ ಅಂದರೆ ಭಾರತ ಹೊಂದಿರುವ ಭೂಭಾಗಕ್ಕಿಂತಲೂ ದೊಡ್ಡದಾದ ಪ್ರದೇಶ ದಕ್ಷಿಣ ಚೀನಾ ಜಲಗಡಿಗೆ ಇದೆ. ಭಾರಿ ಪ್ರಮಾಣದ ನೈಸರ್ಗಿತ ಸಂಪನ್ಮೂಲ ಹಾಗೂ ವ್ಯವಹಾರ ನಡೆಸುವ ಜಾಗ ಇದಾಗಿದೆ.

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಎಷ್ಟಿದೆ ಗೊತ್ತಾ ಸಂಪತ್ತಿನ ಪ್ರಮಾಣ..?

ಅಮೆರಿಕದ ಸರ್ಕಾರಿ ಸಂಸ್ಥೆ ನೀಡಿರುವ ಮಾಹಿತಿಯಂತೆ ದಕ್ಷಿಣ ಚೀನಾ ಸಮುದ್ರದಲ್ಲಿ 190 ಟ್ರಿಲಿಯನ್ ಕ್ಯೂಬಿಕ್ ಅಡಿ ನೈಸರ್ಗಿಕ ಅನಿಲ ಅಡಗಿದೆ. ಇಷ್ಟು ಗ್ಯಾಸ್ ಸಿಕ್ಕರೆ ಹತ್ತಾರು ವರ್ಷ ಚೀನಾ ಯಾರ ಬಳಿಯೂ ನ್ಯಾಚ್ಯುರಲ್ ಗ್ಯಾಸ್‌ಗೆ ಕೈಚಾಚುವ ಅವಶ್ಯಕತೆ ಇರೋದಿಲ್ಲ. ಹಾಗೇ 11 ಬಿಲಿಯನ್ ಬ್ಯಾರೆಲ್‌ ಪೆಟ್ರೋಲ್, ಡೀಸೆಲ್ ಸಂಯುಕ್ತ ಇಲ್ಲಿ ಅಡಗಿದೆ. ಇಷ್ಟೇ ಆಗಿದ್ದರೆ ಚೀನಾ ಅಷ್ಟೊಂದು ತಲೆಕೆಡಿಸಿಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತಿತ್ತೇನೋ. ಆದರೆ ಇದೆಲ್ಲವನ್ನೂ ಮೀರಿಸುವ ಖಜಾನೆ ದಕ್ಷಿಣ ಚೀನಾ ಸಮುದ್ರದಲ್ಲಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಅಮೂಲ್ಯ ಅದಿರುಗಳಿವೆ. ಚಿನ್ನ ಸೇರಿದಂತೆ ಟಿನ್, ಕ್ರೋಮೈಟ್, ಮ್ಯಾಗ್ನಟೈಟ್, ಜಿರ್ಕಾನ್ ಮತ್ತಿತರ ಅದಿರುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಇಷ್ಟು ಪ್ರಮಾಣದ ಸಂಪತ್ತನ್ನು ಬಿಟ್ಟುಕೊಡಲು ಚೀನಾ ಬಿಲ್‌ಕುಲ್ ಸಿದ್ಧವಿಲ್ಲ.

5.3 ಟ್ರಿಲಿಯನ್ ಡಾಲರ್ ವಹಿವಾಟು..!

5.3 ಟ್ರಿಲಿಯನ್ ಡಾಲರ್ ವಹಿವಾಟು..!

ಆಶ್ಚರ್ಯವಾದರೂ ಇದು ನಂಬಲೇಬೇಕಾದ ವಿಚಾರ. ದಕ್ಷಿಣ ಚೀನಾ ಸಮುದ್ರ ತೈಲ ಹಾಗೂ ಅದಿರುಗಳನ್ನು ಮಾತ್ರ ಹೊಂದಿಲ್ಲ. ಸಂಪದ್ಭರಿತ ವ್ಯಾಪಾರವನ್ನೂ ನಡೆಸುತ್ತಾ ಬಂದಿದೆ. ಸೌತ್ ಚೀನಾ ಸಮುದ್ರ ಮಾರ್ಗವಾಗಿ ಪ್ರತಿವರ್ಷವೂ ಸುಮಾರು 5.3 ಟ್ರಿಲಿಯನ್ ಮೊತ್ತದ ವ್ಯಾಪಾರ, ವಹಿವಾಟು ನಡೆಯುತ್ತಿದೆ. ಇದು ಜಗತ್ತಿನಲ್ಲಿ ಜಲ ಮಾರ್ಗದ ಮೂಲಕ ನಡೆಯುವ ವ್ಯಾಪಾರದ 3ನೇ ಒಂದು ಭಾಗವಾಗಿದೆ. ಭಾರತವು ಕೂಡ ಪ್ರತಿವರ್ಷ 200 ಬಿಲಿಯನ್ ಡಾಲರ್ ಮೊತ್ತದ ವಹಿವಾಟನ್ನು ದಕ್ಷಿಣಚೀನಾ ಸಮುದ್ರ ಮಾರ್ಗದ ಮೂಲಕ ನಡೆಸುತ್ತದೆ. ಅಮೆರಿಕ, ಜಪಾನ್, ಚೀನಾ, ಕೊರಿಯಾ, ಆಸ್ಟ್ರೇಲಿಯಾ ಹೀಗೆ ಹತ್ತಾರು ದೇಶಗಳು ಇದೇ ಮಾರ್ಗ ಬಳಸಿ ವ್ಯಾಪಾರ ನಡೆಸುತ್ತಿವೆ. ಇದೇ ಕಾರಣಕ್ಕೆ ದಕ್ಷಿಣ ಚೀನಾ ಸಮುದ್ರ ಸಂಘರ್ಷದ ತಾಣವಾಗಿ ಮಾರ್ಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+