ಕೋವಿಡ್ ಬಳಿಕ ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆ; ಜಗತ್ತಿಗೆ ಶುರುವಾಯ್ತು ಆತಂಕ
ಕೋವಿಡ್ -19 ಎನ್ನುವ ಮಹಾಮಾರಿಯ ಹೊಡೆತದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಲಕ್ಷಾಂತರ ಮಂದಿ ಜೀವ ತೆಗೆದ, ಸಾವಿರಾರು ಕುಟುಂಬಗಳನ್ನು ಬೀದಿಪಾಲು ಮಾಡಿದ ಮಾರಕ ವೈರಸ್ ನೆನಪಿಸಿಕೊಂಡರೆ ಜಗತ್ತು ಬೆಚ್ಚಿಬೀಳುತ್ತದೆ. ಕೋವಿಡ್ -19 ಜಗತ್ತಿಗೆ ಹರಡಿ 5 ವರ್ಷಗಳ ಬಳಿಕ ಚೀನಾದಲ್ಲಿ ಮತ್ತೊಂದು ಮಾರಕ ವೈರಸ್ ಪತ್ತೆಯಾಗಿದ್ದು ಜಗತ್ತಿಗೆ ಹೊಸ ಆತಂಕ ಶುರುವಾಗಿದೆ.
ಚೀನಾ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಈಗ ದೊಡ್ಡ ತಲೆನೋವಾಗುವ ಎಲ್ಲಾ ಲಕ್ಷಣ ತೋರಿಸಿದೆ. ಚೀನಾ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವ ಪೋಸ್ಟ್‌ಗಳು ಈ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಖಚಿತಪಡಿಸಿದೆ. ಆಸ್ಪತ್ರೆಗಳು ಭರ್ತಿಯಾಗಿದ್ದರೆ ಸ್ಮಶಾನಗಳಲ್ಲಿ ಕೂಡ ಹೆಣಗಳ ಸಂಖ್ಯೆ ಹೆಚ್ಚಿರುವುದನ್ನು ಅನೇಕ ಪೋಸ್ಟ್‌ಗಳು ತಿಳಿಸಿವೆ.

ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳು ಕಿಕ್ಕಿರಿದು ತುಂಬಿರುವುದನ್ನು ನೋಡಬಹುದು. ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು, ಇನ್‌ಫ್ಲುಯೆನ್ಸ ಎ, ಹೆಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್-19 ಸೇರಿದಂತೆ ಅನೇಕ ವೈರಸ್‌ಗಳು ಹರಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಸ್ ಹರಡುವುದನ್ನು ತಪ್ಪಿಸಲು ಚೀನಾ ತುರ್ತು ಪರಿಸ್ಥಿತಿ ಘೋಷಿಸಿದೆ ಎಂದು ಹೇಳಲಾಗಿದ್ದರೂ ಈ ಸುದ್ದಿ ಇನ್ನೂ ಅಧಿಕೃತವಾಗಿಲ್ಲ. ಹೆಚ್‌ಎಂಪಿವಿ ಜ್ವರ ರೀತಿಯ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ. ಇದೂ ಕೂಡ ಕೋವಿಡ್-19 ರೀತಿಯ ರೋಗ ಲಕ್ಷಣಗಳನ್ನು ಹೊಂದಿದೆ, ವೈರಸ್ ಹರಡುತ್ತಿದ್ದು ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ವರದಿಯಾಗಿದೆ.
SARS-CoV-2 (Covid-19) ಎಕ್ಸ್ ಹ್ಯಾಂಡಲ್ ಪೋಸ್ಟ್ ಹಂಚಿಕೊಂಡಿದ್ದು, ಚೀನಾದಲ್ಲಿ ಇನ್‌ಫ್ಲುಯೆನ್ಸಾ ಎ, ಎಚ್‌ಎಂಪಿವಿ, ಮೈಕ್ರೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್-19 ಸೇರಿದಂತೆ ಅನೇಕ ವೈರಸ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು, ಆಸ್ಪತ್ರೆಗಳು ಮತ್ತು ಸ್ಮಶಾನಗಳು ಭರ್ತಿಯಾಗಿದೆ ಎಂದು ಹೇಳಿದೆ.
ಚೀನಾ ರೋಗ ನಿಯಂತ್ರಣ ಪ್ರಾಧಿಕಾರವು ಹೊಸ ರೀತಿ ನ್ಯೂಮೋನಿಯಾ ಬಗ್ಗೆ ಅಧ್ಯಯನ ಮಾಡುತ್ತಿದೆ ಎಂದು ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಚಳಿಗಾಲದಲ್ಲಿ ಉಸಿರಾಟ ತೊಂದರೆ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಐದು ವರ್ಷದ ಹಿಂದೆ ಕೋವಿಡ್-19 ಹರಡಿದಾಗ ಮೊದಲು ಕಳ್ಳಾಟವಾಗಿದ್ದ ಚೀನಾ ಬಳಿಕ ಇಡೀ ಜಗತ್ತೇ ಬೆಲೆತೆರುವಂತೆ ಮಾಡಿತ್ತು. ಈಗ ಮತ್ತೊಮ್ಮೆ ಅಂತಹ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಗೆ ವಹಿಸುತ್ತಿದ್ದು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.
ಚಳಿಗಾಲದಲ್ಲಿ ಚೀನಾದಲ್ಲಿ ಉಸಿರಾಟದ ತೊಂದರೆ ಮಾಡುವ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿರುತ್ತವೆ ಎಂದು ಚೀನಾದ ಅಧಿಕಾರಿ ಕಾನ್ ಬಿಯಾವೊ ಹೇಳಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಈ ಸಂಖ್ಯೆ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪತ್ತೆಯಾದ ಪ್ರಕರಣಗಳಲ್ಲಿ ರೈನೋವೈರಸ್ ಮತ್ತು ಹ್ಯೂಮನ್ ಮೆಟಾಪ್ನ್ಯೂಮೋವೈರಸ್‌ನಂತಹ ರೋಗಕಾರಕಗಳು ಇದರಲ್ಲಿ ಸೇರಿವೆ. ಈ ಕಾಯಿಲೆಗೆ ಲಸಿಕೆ ಇಲ್ಲ, ಆದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications