ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾ-ಭಾರತ ಗಡಿ ವಿವಾದ: ಟ್ರಂಪ್ ಮಧ್ಯಸ್ಥಿಕೆ ಬೇಕಿಲ್ಲ ಎಂದ ಚೀನಾ

|
Google Oneindia Kannada News

ಬೀಜಿಂಗ್, ಮೇ 29: ಚೀನಾ-ಭಾರತ ನಡುವಿನ ಗಡಿ ವಿವಾದವನ್ನು ಬಗೆ ಹರಿಸಿಕೊಳ್ಳಲು ಎರಡೂ ದೇಶಕ್ಕೆ ಸಾಮರ್ಥ್ಯವಿದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ ಮಧ್ಯಸ್ಥಿಕೆ ಬೇಕಿಲ್ಲ ಎಂದು ಚೀನಾ ಹೇಳಿದೆ.

Recommended Video

IPLನಲ್ಲಿ ಈವರೆಗೂ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಯಾರು ? | Oneindia Kannada

ಭಾರತ ಮತ್ತು ಚೀನಾದ ನಡುವೆ ಒಟ್ಟು 3,488 ಕಿ.ಮೀ ಗಡಿ ಇದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಮತ್ತು ರಾಜ್ಯಗಳಾದ ಉತ್ತರಾಖಂಡ್, ಹಿಮಾಚಲ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶಗಳು ಚೀನಾದ ಜೊತೆ ಗಡಿಯನ್ನು ಹಂಚಿಕೊಂಡಿವೆ.

ಭಾರತ ಚೀನಾ ಗಡಿ ವಿವಾದ: ಮೋದಿ ಉತ್ತಮ ಮನಸ್ಥಿತಿಯಲ್ಲಿಲ್ಲ ಎಂದ ಟ್ರಂಪ್ಭಾರತ ಚೀನಾ ಗಡಿ ವಿವಾದ: ಮೋದಿ ಉತ್ತಮ ಮನಸ್ಥಿತಿಯಲ್ಲಿಲ್ಲ ಎಂದ ಟ್ರಂಪ್

ಚೀನಾ-ಭಾರತ ನಡುವಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಸಿದ್ಧರಿದ್ದಾರೆ. ಸಾಕಷ್ಟು ಬಾರಿ ವೇದಿಕೆಗಳಲ್ಲಿ ಮಾತನಾಡುತ್ತಾ ಎರಡೂ ದೇಶಗಳು ಸಹಾಯ ಕೇಳಿದರೆ ನಾನು ಮಾಡಲು ಸಿದ್ಧ ಎಂದು ಹೇಳಿದ್ದರು.

China Rejects Trumps Mediation Offer On Border Row With India

ನಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವ ಸಾಮರ್ಥ್ಯ ನಮಗಿದೆ ಯಾರ ಮಧ್ಯಸ್ಥಿಕೆಯೂ ಬೇಕಿಲ್ಲ ಎಂದಿದ್ದಾರೆ.

ಭಾರತ ಅಭಿವೃದ್ಧಿಗೆ ಕೈ ಹಾಕಿದ್ದನ್ನೇ ನೆಪವಾಗಿರಿಸಿಕೊಂಡು ಚೀನಾ ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಿದೆ. ಪಂಗೊಂಗ್ ಸರೋವರದ ಹತ್ತಿರ ಟಿಬೆಟ್ ನಿಂದ 200 ಕಿಲೋ ಮೀಟರ್ ದೂರದಲ್ಲಿ ನಗಾರಿ ಗುನ್ಸ ವಾಯುನೆಲೆ ಹತ್ತಿರ ಬೃಹತ್ ಪ್ರಮಾಣದ ನಿರ್ಮಾಣ ಕಾಮಗಾರಿ ನಡೆಸುತ್ತಿದೆ.

ಲಡಾಖ್ ಬಳಿ ವಾಯುನೆಲೆ ವಿಸ್ತರಿಸುತ್ತಿರುವ ದೃಶ್ಯಗಳು ಉಪಗ್ರಹ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲದೇ ಚೀನಾ ಅತಿ ಎತ್ತರದಿಂದ ನಿಗಾ ಇಡುವ, ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಡ್ರೋನ್ ನಿಯೋಜಿಸಿದೆ.

English summary
China rejects America President Donald Trump's mediation offer, says China, India capable of resolving issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X