ಚೀನಾದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದ್ವಿಗುಣ
ಶಾಂಘೈ ಮಾರ್ಚ್ 18: 2020 ರಲ್ಲಿ ವುಹಾನ್‌ನಲ್ಲಿ ಹುಟ್ಟಿದ ಕೊರೊನಾ ದೇಶದಲ್ಲಿ ಅಧಿಕ ಕೊರೊನಾ ಪ್ರಕರಣಗಳನ್ನು ಹುಟ್ಟುಹಾಕಿತ್ತು. ಇದಾದ ಬಳಿಕ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆ ಮತ್ತು ಏರಿಕೆಯನ್ನು ಕಂಡಿದೆ. ಆದರೀಗ ಮತ್ತೆ ಚೀನಾದಲ್ಲಿ ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಾರ್ಚ್ 17 ರಂದು ಚೀನಾದಲ್ಲಿ 2,388 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಇದು ಒಂದು ದಿನದ ಹಿಂದಿನ ಎಣಿಕೆಗಿಂತ ದ್ವಿಗುಣವಾಗಿದೆ.
ಚೀನಾ ದೃಢಪಡಿಸಿದ ಒಟ್ಟು 2,388 ಪ್ರಕರಣಗಳ ಪೈಕಿ ಲಕ್ಷಣರಹಿತ ಪ್ರಕರಣಗಳ ಸಂಖ್ಯೆ ಗುರುವಾರ 1,742 ರಷ್ಟಿದೆ. ಇದು ಒಂದು ದಿನದ ಹಿಂದೆ 1,206 ರಷ್ಟಿತ್ತು. ಅಂತರರಾಷ್ಟ್ರೀಯ ಮಾನದಂಡಗಳ ಪ್ರಕಾರ ಸಂಖ್ಯೆಗಳು ಚಿಕ್ಕದಾಗಿದ್ದರೂ, ದೇಶಾದ್ಯಂತದ ಪ್ರದೇಶಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.
Recommended Video
ಶಾಂಘೈನ ಪ್ರಮುಖ ವಾಣಿಜ್ಯ ಕೇಂದ್ರದಲ್ಲಿ ಮಾರ್ಚ್ 17 ರಂದು 57 ಹೊಸ ಸ್ಥಳೀಯ ರೋಗಲಕ್ಷಣದ ಸೋಂಕುಗಳು ಕಂಡು ಬಂದಿವೆ. ಎರಡು ಮೂರು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಏಕಾಏಕಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದನ್ನು ಅಪಾಯದ ಮಟ್ಟಕ್ಕೆ ಹೋಗಲು ಬಿಡುವುದಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗುರುವಾರ ತಡವಾಗಿ ಸೂಚಿಸಿದರು.

ಅವರು ಪೊಲಿಟ್‌ಬ್ಯುರೊ ಸ್ಥಾಯಿ ಸಮಿತಿ ಸಭೆಯಲ್ಲಿ ಮಾತನಾಡಿ ಗೆಲುವು ಪರಿಶ್ರಮದಿಂದ ಬರುತ್ತದೆ ಎಂದರು. ಮಾರ್ಚ್ 17 ರ ಹೊತ್ತಿಗೆ ಚೀನಾ 126,234 ಪ್ರಕರಣಗಳನ್ನು ದೃಢಪಡಿಸಿದೆ. ಈ ಪ್ರಕರಣಗಳನ್ನು ರೋಗಲಕ್ಷಣಗಳೊಂದಿಗೆ ವರದಿ ಮಾಡಿದೆ. ಆದರೆ ಯಾವುದೇ ಹೊಸ ಸಾವುಗಳು ಸಂಭವಿಸಿಲ್ಲ. ಸಾವಿನ ಸಂಖ್ಯೆ ಬದಲಾಗಿಲ್ಲ.
ವರದಿಯ ಪ್ರಕಾರ ಕಳೆದ 10 ವಾರಗಳಲ್ಲಿ ಚೀನಾದಲ್ಲಿ 15 ಸಾವಿರಕ್ಕೂ ಹೆಚ್ಚು ಕೊರೊನಾ ರೋಗಿಗಳು ಕಂಡುಬಂದಿದ್ದಾರೆ. ಈ ಕಾರಣದಿಂದಾಗಿ ಚೀನಾ ಸರ್ಕಾರವು ಅನೇಕ ದೊಡ್ಡ ನಗರಗಳಲ್ಲಿ ಲಾಕ್‌ಡೌನ್ ಅನ್ನು ಜಾರಿಗೊಳಿಸಬೇಕಾಗಿದೆ. ಅಲ್ಲದೆ 'ಶೂನ್ಯ ಕೋವಿಡ್ ನೀತಿ'ಯನ್ನು ಜಾರಿಗೊಳಿಸಲಾಗಿದೆ, ಅದರ ಅಡಿಯಲ್ಲಿ ಕ್ವಾರಂಟೈನ್‌ನ ಕಟ್ಟುನಿಟ್ಟಾದ ನಿಯಮಗಳಿವೆ. ಇದೇ ಪರಿಸ್ಥಿತಿ ಇನ್ನೂ ಕೆಲ ದಿನ ಮುಂದುವರಿದರೆ ಚೀನಾದ ಆರ್ಥಿಕತೆಯ ಮೇಲೂ ದುಷ್ಪರಿಣಾಮ ಬೀರಲಿದೆ.

ಚೀನಾದಲ್ಲಿ ಕೊರೊನಾ ಪ್ರಕರಣಗಳು ಪತ್ತೆ ಹೆಚ್ಚಾಗುತ್ತಿದ್ದು ಪರೀಕ್ಷೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಪರೀಕ್ಷೆಗೆ ಒಳಗಾದ ಜನರಲ್ಲಿ ಸೋಂಕು ಕಾಣಿಸಿಕೊಂಡರೆ ಅಥವಾ ಗಂಭೀರ ಪರಿಸ್ಥಿತಿಯಲ್ಲಿದ್ದರೆ ಅಂಥವರನ್ನು ದಾಖಲಿಸಿಕೊಳ್ಳಲು ಜಿಲಿನ್‌ನಲ್ಲಿರುವ ಆಸ್ಪತ್ರೆಗಳಲ್ಲಿ ಸ್ಥಳಾವಕಾಶವಿಲ್ಲ ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಇದಲ್ಲದೇ ಇನ್ನೂ ಎರಡು-ಮೂರು ದಿನಗಳ ವರೆಗೆ ಮಾತ್ರ ವೈದ್ಯಕೀಯ ಚಿಕಿತ್ಸಾ ಸಾಮಗ್ರಿಗಳು ಉಳಿದುಕೊಂಡಿದ್ದು, ಅದನ್ನೂ ವ್ಯವಸ್ಥೆ ಮಾಡುವುದು ಆಡಳಿತಕ್ಕೆ ಸವಾಲಾಗಿದೆ. ಅಧಿಕಾರಿಗಳ ಪ್ರಕಾರ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರವನ್ನು ತಲುಪುತ್ತಿರುವ ಕಾರಣ ಆರೋಗ್ಯ ಇಲಾಖೆಯ ಮೇಲೆ ಪರೀಕ್ಷೆಯ ಹೊರೆ ಹೆಚ್ಚಾಗಿದೆ.
ಆರೋಗ್ಯ ತಜ್ಞರ ಪ್ರಕಾರ, ಚೀನಾದ ಶೇಕಡಾ 90 ರಷ್ಟು ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ, ಆದರೆ ಇದುವರೆಗೆ ಸಾಕಷ್ಟು ಸಂಖ್ಯೆಯಲ್ಲಿ ವಯಸ್ಸಾದವರಿಗೆ ಬೂಸ್ಟರ್ ಡೋಸ್ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಇದರಿಂದಾಗಿ ಪರಿಸ್ಥಿತಿ ಚಿಂತಾಜನಕವಾಗಿದೆ. ಇದುವರೆಗಿನ ತನಿಖೆಯಲ್ಲಿ ಓಮಿಕ್ರಾನ್ ರೂಪಾಂತರ ಪ್ರಕರಣದ ಹೆಚ್ಚಳಕ್ಕೆ ಕಾರಣ ಎಂದು ನಂಬಲಾಗಿದೆ. ಹೀಗಾಗಿ ಪರೀಕ್ಷೆಗೆ ಒಳಗಾಗುವ ಜನರ ಸಂಖ್ಯೆ ಅಧಿಕವಾಗುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications