ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್ ಸೇನಾ ಮುಖ್ಯಸ್ಥರನ್ನು ಭೇಟಿ ಮಾಡಿದ ಚೀನಾ ರಕ್ಷಣಾ ಸಚಿವ

|
Google Oneindia Kannada News

ಇಸ್ಲಾಮಾಬಾದ್,ನವೆಂಬರ್ 30: ಗಡಿ ವಿಚಾರವಾಗಿ ಚೀನಾ ರಕ್ಷಣಾ ಸಚಿವ ವೀ ಫೆಂಗ್ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾರನ್ನು ಇಂದು ಭೇಟಿ ಮಾಡಿದ್ದಾರೆ.

ಉಭಯ ದೇಶಗಳ ಸೇನೆ ನಡುವೆ ರಕ್ಷಣಾ ಸಹಕಾರಕ್ಕಾಗಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಸೇನಾ ಮಾಧ್ಯಮ ವಿಭಾಗ ಇಂಟರ್ ಸರ್ವೀಸ್ ಪಬ್ಲಿಕ್ ರಿಲೇಷನ್ಸ್ ತಿಳಿಸಿದೆ. ಆದರೆ, ಎಂಓಯು ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದು ಇಲ್ಲಿ ಗಮನಾರ್ಹವಾಗಿದೆ.

ಚೀನಾದಿಂದ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣ: ಭಾರತಕ್ಕೆ ಆತಂಕಚೀನಾದಿಂದ ಟಿಬೆಟ್‌ನಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್ ಅಣೆಕಟ್ಟು ನಿರ್ಮಾಣ: ಭಾರತಕ್ಕೆ ಆತಂಕ

ಚೀನಾದ ರಕ್ಷಣಾ ಸಚಿವರು ಭಾನುವಾರ ನೇಪಾಳಕ್ಕೆ ಭೇಟಿ ನೀಡಿ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಹಾಗೂ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಪೂರ್ಣಚಂದ್ರ ತಾಪಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.

China’s Defence Minister Meets Pak Army Chief

ಉಭಯ ದೇಶಗಳ ನಡುವೆ ಸಹಕಾರವನ್ನು ಪುನರಾರಂಭಿಸುವ ಜೊತೆಗೆ ಕೊವಿಡ್-19 ಕಾರಣದಿಂದ ಸ್ಥಗಿತಗೊಂಡಿದ್ದ ತರಬೇತಿ ಕಾರ್ಯಕ್ರಮ ಪುನರಾರಂಭಿಸುವ ಕುರಿತು ಚರ್ಚೆಗಳು ನಡೆದ ಬಗ್ಗೆ ವರದಿಯಾಗಿದೆ.

ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಸಭೆಯಲ್ಲಿ ಪರಸ್ಪರ ಹಿತಾಸಕ್ತಿಗಳು, ಪ್ರಾದೇಶಿಕ ಭದ್ರತೆ ಹಾಗೂ ದ್ವಿಪಕ್ಷೀಯ ರಕ್ಷಣಾ ಸಹಕಾರ ಬಲಪಡಿಸುವುದು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು.

English summary
China’s Defence Minister Gen Wei Fenghe on Monday held talks with Pakistan Army Chief Gen Qamar Javed Bajwa and discussed regional security issues and signed an agreement to deepen defence cooperation between the all-weather allies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X