WHOಗೆ ಅಮೆರಿಕ ಅನುದಾನ ಕೊಡ್ದಿದ್ರೇನಾಯ್ತು ನಾವು ಕೊಡ್ತೀವಿ ಎಂದ ಚೀನಾ

ಬೀಜಿಂಗ್, ಏಪ್ರಿಲ್ 23: ವಿಶ್ವ ಆರೋಗ್ಯ ಸಂಸ್ಥೆಗೆ ಅಮರಿಕ ಅನುದಾನ ನೀಡದಿದ್ದರೆ ಏನಾಯ್ತು ನಾವು ಕೊಡುತ್ತೇವೆ ಎಂದು ಚೀನಾ ಹೇಳಿದೆ.

ಅಮೆರಿಕ ಆರ್ಥಿಕ ನೆರವು ನೀಡುವುದನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಚೀನಾ ಈಗ ವಿಶ್ವ ಆರೋಗ್ಯ ಸಂಸ್ಥೆಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದು 30 ಮಿಲಿಯನ್ ಡಾಲರ್ ಅನುದಾನ ನೀಡುವುದಾಗಿ ಘೋಷಿಸಿದೆ.

ಕೋವಿಡ್-19 ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸಮುದಾಯವನ್ನು ಎಚ್ಚರಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಡಬ್ಲ್ಯು ಹೆಚ್ ಒಗೆ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳೂ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ, ಅಮೆರಿಕದ ನಡೆಯನ್ನು ಕಳವಳಕಾರಿ ಎಂದು ಹೇಳಿತ್ತು.

China To Give WHO US$30 Million More After US Freezes Funds

ಚೀನಾದಿಂದಲೇ ಕೊರೊನಾ ವೈರಸ್ ಉದ್ಭವವಾಗಿದ್ದರೂ ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಮೇಲೆ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಆರೋಪಿಸಿದ್ದರು.

ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿಗೆ ಅಮೆರಿಕ ಕತ್ತರಿ ಹಾಕಿದ್ದನ್ನೇ ಚೀನಾ ಈಗ ತನ್ನ ಲಾಭಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತದ್ದ ಆರ್ಥಿಕ ನೆರವಿನ ವಿಷಯದಲ್ಲಿ ಅಮೆರಿಕಾಗೆ ಚೀನಾ ಪರ್ಯಾಯವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಚೀನಾ, ನಾವು ಈಗ ವಿಶ್ವ ಆರೋಗ್ಯ ಸಂಸ್ಥೆಗೆ 30 ಮಿಲಿಯನ್ ಡಾಲರ್ ನೀಡುತ್ತೇವೆ. ಸಂಬಂಧಪಟ್ಟ ವಿಷಯದ ಬಗ್ಗೆ ಅಧ್ಯಯನ ನಡೆಸುತ್ತೇವೆ ಎಂದು ಹೇಳಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಅದನ್ನು ನಿಯಂತ್ರಿಸುವ ಬಗ್ಗೆ ವಿಶ್ವಸಮುದಾಯಕ್ಕೆ ಮುನ್ನೆಚ್ಚರಿಕೆ ನೀಡಲಿಲ್ಲ ಎಂಬ ಆರೋಪ ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ವಿರುದ್ಧ ಕೇಳಿಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+