• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎರಡು ವರ್ಷಗಳ ನಂತರ ಚೀನಾಗೆ ಭಾರತದ ವಿದ್ಯಾರ್ಥಿಗಳು ಮರಳಲು ಅವಕಾಶ

|
Google Oneindia Kannada News

ಯಯನಕ್ಕಾಗಿ ಹಿಂದಿರುಗುವ ಭಾರತೀಯ ವಿದ್ಯಾರ್ಥಿಗಳ ವೀಸಾಗೆ ಒಪ್ಪಿಗೆ ನೀಡಿದ್ದೇವೆ. ಭಾರತೀಯ ವಿದ್ಯಾರ್ಥಿಗಳ ಕಾಳಜಿಗೆ ಚೀನಾ ಹೆಚ್ಚಿನ ಪ್ರಾಮುಖ್ಯತೆಯನ್ನ ನೀಡುತ್ತದೆ. ಈಗಾಗಲೇ ಭಾರತೀಯ ವಿದ್ಯಾರ್ಥಿಗಳ ಹಿಂದಿರುಗುವ ಕಾರ್ಯ ಆರಂಭವಾಗಿದೆ. ಸದ್ಯಕ್ಕೆ ಭಾರತವು ಹೀಗಾಗಿ ಚೀನಾಗೆ ಮತ್ತೆ ಹಿಂದಿರುಗುವ ವಿದ್ಯಾರ್ಥಿಗಳ ಪಟ್ಟಿಯನ್ನು ನೀಡುವುದು ಮಾತ್ರ ಬಾಕಿ ಉಳಿದಿದೆ," ಎಂದು ತಿಳಿಸಿದ್ದಾರೆ.

ಬೆಂಗಳೂರು: ಪ್ರತಿದಿನ ಶತಕ ದಾಟುತ್ತಿರುವ ಕೋವಿಡ್ ಸೋಂಕಿತರುಬೆಂಗಳೂರು: ಪ್ರತಿದಿನ ಶತಕ ದಾಟುತ್ತಿರುವ ಕೋವಿಡ್ ಸೋಂಕಿತರು

2019 ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ, ಚೀನಾದ ಹಲವು ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿದ್ದ 23 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಮರಳಿ ಭಾರತಕ್ಕೆ ತೆರಳಿದ್ದರು. ಆದಾದ ಎರಡು ವರ್ಷಗಳವರೆಗೂ ಭಾರತದಿಂದ ಚೀನಾಗೆ ವಿದ್ಯಾರ್ಥಿಗಳು ಮತ್ತೆ ವಾಪಾಸ್‌ ಬರಲು ಸಾಧ್ಯವಾಗಿರಲಿಲ್ಲ. ಏಕೆಂದರೆ ಸೋಂಕು ಹರಡುವುದನ್ನ ತಡೆಗಟ್ಟಲು ಚೀನಾ ಸರ್ಕಾರ ಬೀಜಿಂಗ್‌ಗೆ ಬರುವ ಎಲ್ಲಾ ಭಾರತೀಯ ವಿದ್ಯಾರ್ಥಿಗಳ ವೀಸಾ ಹಾಗೂ ವಿಮಾನಗಳನ್ನ ರದ್ದು ಮಾಡಿತ್ತು. ಇದರಿಂದ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಆನ್‌ಲೈನ್‌ ತರಗತಿ ಸೀಮಿತವಾಗಿದ್ದರು. ಆದರೆ ಈಗ ಚೀನಾಗೆ ಮತ್ತೆ ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಮರಳಲು ಅವಕಾಶ ಮಾಡಿಕೊಡಲಾಗಿದೆ.

ಇತ್ತೀಚಿಗೆ ಭಾರತೀಯ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಹಾಗೂ ಚೀನಾದ ವಿದೇಶಾಂಗ ಸಚಿವ ವಾಂಗ್‌ ಯಿ ಅವರೊಂದಿಗೆ ಈ ವಿಚಾರವಾಗಿ ಸಭೆ ನಡೆಸಿದ್ದರು. ಸದ್ಯ ಸಭೆಯ ಬಳಿಕ ಶುಕ್ರವಾರ ಚೀನಾ ಭಾರತೀಯ ವಿದ್ಯಾರ್ಥಿಗಳ ವೀಸಾಗೆ ಒಪ್ಪಿಗೆ ನೀಡಿದೆ. ಹೀಗಾಗಿ ಚೀನಾ ಈ ಬಗ್ಗೆ ಪ್ರಕಟಣೆ ನೀಡಿರುವ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ ಭಾರತದಿಂದ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳ ವಿವರಗಳನ್ನು ನೀಡುವಂತೆ ಕೇಳಿದೆ. ಚೀನಾಗೆ ಮರಳಲು ಬಯಸುವ ವಿದ್ಯಾರ್ಥಿಗಳು ಮೇ 8ರೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ವಿದೇಶಾಂಗ ಇಲಾಖೆ ಹೇಳಿದೆ.

China To permit some indian students to return After over 2 years

ಇನ್ನು ಅರ್ಹ ವಿದ್ಯಾರ್ಥಿಗಳು ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಕೊರೊನಾಗೆ ತುತ್ತಾದರೆ ಅದರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸಲು ಒಪ್ಪಿಕೊಳ್ಳಬೇಕು ಎಂದು ಚೀನಾ ಸರ್ಕಾರ ತಿಳಿಸಿದೆ.

English summary
China on Friday announced plans to permit the return of "some" Indian students stranded in India for over two years following the visa and flight restrictions imposed by Beijing due to the COVID-19 pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X