ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ಯಾಂಗ್ಯಾಂಗ್ ಸರೋವರದ ಬಳಿ ಕ್ಯಾತೆ: ಭಾರತಕ್ಕೆ ಚೀನಾ ನೀಡಿದ ಸ್ಪಷ್ಟನೆ

|
Google Oneindia Kannada News

ನವದೆಹಲಿ, ಆಗಸ್ಟ್.31: ಭಾರತ ಚೀನಾ ಗಡಿ ಪ್ರದೇಶದಲ್ಲಿ ಯಾವುದೇ ಸಂದರ್ಭದಲ್ಲೂ ಚೀನಾದ ಸೇನಾಪಡೆಯು ನಿಗದಿತ ಗಡಿ ರೇಖೆ ದಾಟಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿದೆ. ಪ್ಯಾಂಗಾಂಗ್ ತ್ಸೋ ಸರೋವರದ ಬಳಿ ಪ್ರಚೋದನಾತ್ಮಕ ಸೇನಾ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಭಾರತೀಯ ಸೇನೆ ಹೇಳಿತ್ತು.

Recommended Video

China ತನ್ನ ವಾಯು , ನೌಕಾ ಪಡೆಯನ್ನು ದ್ವಿಗುಣಗೊಳಿಸುತ್ತಿರುವುದೇಕೆ | Oneindia Kannada

ಭಾರತೀಯ ಸೇನೆ ಹೇಳಿಕೆ ನೀಡಿರುವ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝೋವೊ ಲಿಜಿಯಾನ್ ಸ್ಪಷ್ಟನೆ ನೀಡಿದ್ದಾರೆ. ಚೀನಾದ ಪೀಪಲ್ಸ್ ಲಿಬರ್ಟಿ ಆರ್ಮಿ ಯೋಧರು ನಿಗದಿತ ಗಡಿ ರೇಖೆಯನ್ನು ದಾಟಿ ಹೋಗಿಲ್ಲ. ಎರಡೂ ಕಡೆಗಳಲ್ಲಿ ಸದ್ಯದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗಡಿಯಲ್ಲಿ ಚೀನಾ ಗಾಂಚಾಲಿ: ಶ್ರೀನಗರದ ಗೌಪ್ಯ ರಸ್ತೆಯಲ್ಲಿ ಸಂಚಾರ ಬಂದ್!ಗಡಿಯಲ್ಲಿ ಚೀನಾ ಗಾಂಚಾಲಿ: ಶ್ರೀನಗರದ ಗೌಪ್ಯ ರಸ್ತೆಯಲ್ಲಿ ಸಂಚಾರ ಬಂದ್!

ಪ್ಯಾಂಗಾಂಗ್ ತ್ಸೋ ಸರೋವರದ ದಕ್ಷಿಣ ಪ್ರದೇಶದಲ್ಲಿ ಚೀನಾ ಸೇನೆ ಯಾವುದೇ ರೀತಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಡೆಸಿಲ್ಲ. ಉಭಯ ರಾಷ್ಟ್ರಗಳ ಗಡಿಯಲ್ಲಿ ಯಥಾಸ್ಥಿತಿಗೆ ಧಕ್ಕೆ ಉಂಟಾಗುವಂತಾ ಯಾವುದೇ ಚಟುವಟಿಕೆಗಳನ್ನು ನಡೆಸುತ್ತಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.

Chinese Troops Never Cross LAC: China Foreign Ministry Clarification

ಚೀನಾದ ಬಗ್ಗೆ ಭಾರತೀಯ ಸೇನೆ ಹೇಳಿದ್ದೇನು?:

ಕಳೆದ ಆಗಸ್ಟ್.29 ಮತ್ತು 30ರ ಮಧ್ಯರಾತ್ರಿ ಪ್ಯಾಂಗಾಂಗ್ ತ್ಸೋ ಸರೋವರ ಪ್ರದೇಶದಲ್ಲಿ ಚೀನಾ ಸೇನಾಪಡೆಗಳು ಪ್ರಚೋದನಾತ್ಮಕ ಸೇನಾ ಚಟುವಟಿಕೆಗಳನ್ನು ನಡೆಸಿರುವುದು ಗೊತ್ತಾಗಿದೆ. ಕಳೆದ ಜೂನ್.15ರಿಂದಲೂ ಉಭಯ ರಾಷ್ಟ್ರಗಳ ಗಡಿಯಲ್ಲಿ ಸೇನಾಪಡೆಗಳು ಅಲರ್ಟ್ ಆಗಿವೆ. ಪ್ಯಾಂಗಾಂಗ್ ತ್ಸೋ ಸರೋವರದ ದಕ್ಷಿಣ ಬ್ಯಾಂಕ್ ಪ್ರದೇಶದಲ್ಲಿ ಭಾರತೀಯ ಸೇನೆಯು ಪೂರ್ವಭಾವಿಯಾಗಿ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಂಡಿದೆ. ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯ ಕರ್ನಲ್ ಅಮನ್ ಆನಂದ್ ತಿಳಿಸಿದ್ದಾರೆ.

English summary
Chinese Troops Never Cross LAC: China Foreign Ministry Clarification.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X