ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ತಂದೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಂತ್ವನ
ಕೀವ್, ಮಾರ್ಚ್ 1: ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಗ್ಯಾನಗೌಡರ್ ತಂದೆ ಶೇಖರಗೌಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವಾನ ಹೇಳಿದ್ದಾರೆ.
ದೂರವಾಣಿ ಮೂಲಕ ಮಾತನಾಡಿರುವ ಸಿಎಂ ನವೀನ್ ಸಾನಿನ ಬಗ್ಗೆ ಮಾಹಿತಿ ಪಡೆದರು. ಇದು ನಿಜಕ್ಕೂ ದೊಡ್ಡ ದುರಂತ. ದೇವರು ನವೀನ್ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ನೀವು ಧೈರ್ಯದಿಂದ ಇರಬೇಕು. ನವೀನ್ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆದಿದೆ ಎಂದು ಸಿಎಂ ತಿಳಿಸಿದ್ದಾರೆ.
ನವೀನ್ ಗ್ಯಾನಗೌಡರ್ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಗನ ನೆನೆದು ಕಣ್ಣೀರು ಹಾಕಿದ ತಂದೆ:
ಮಗ ನವೀನ್ ಗ್ಯಾನಗೌಡರ್ ಬಗ್ಗೆ ದುಃಖದಿಂದ ಮಾತನಾಡಿದ ತಂದೆ ಶೇಖರಗೌಡ ಗ್ಯಾನ ಗೌಡರ್ ಇಂದು ಮುಂಜಾನೆಯಷ್ಟೇ ಮಗನ ಜೊತೆ ದೂರವಾಣಿಯಲ್ಲಿ ಮಾತನಾಡಿರುವುದಾಗಿ ಹೇಳಿದರು. ಪ್ರತಿ ದಿನ ಎರಡರಿಂದ ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದರು.
Koo AppDeeply saddened to learn about the sad demise of Naveen Shekharappa, 4th Year MBBS student from Haveri, Karnataka in the crisis zone at Kharkiv, Ukraine. May God give his family, friends and well wishers strength to bear this irreparable loss. Om Shanti. - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 1 Mar 2022
ಕುಟುಂಬ ಸದಸ್ಯರೊಂದಿಗೆ ನೊಡೆಲ್ ಅಧಿಕಾರಿ ಮಾತು:
ಹಾವೇರಿ ಜಿಲ್ಲೆಯ ನವೀನ್ ಗ್ಯಾನಗೌಡರ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಬಂದಿದೆ. ನಾವು ವಿದೇಶಾಂಗ ಸಚಿವಾಲಯಕ್ಕೆ ಕರೆ ಮಾಡಿದ್ದವು. ನವೀನ್ ಪೋಷಕರಿಗೂ ಫೋನ್ ಮಾಡಿ ಮಾತನಾಡಿದ್ದೇವೆ. ವಿದೇಶಾಂಗ ಸಚಿವಾಲಯದಿಂದ ಕರೆ ಬಂದಿತ್ತು ಎಂದು ಪೋಷಕರು ವಿವರಿಸಿದ್ದಾರೆ ಎಂದು ನೋಡೆಲ್ ಅಧಿಕಾರಿ ಮನೋಜ್ ರಾಜನ್ ಹೇಳಿದ್ದಾರೆ.
ಉಕ್ರೇನ್‌ನಲ್ಲಿ ಹೊರಗೆ ಬಾರದಂತೆ ಮನವಿ:
ಉಕ್ರೇನ್‌ನ ಬಹುಪಾಲು ನಗರಗಳಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ನೀವು ಇರುವ ಸ್ಥಳದಿಂದ ಯಾರೂ ಹೊರಗಡೆ ಬರಬೇಡಿ. ತುಂಬಾ ಅನಿವಾರ್ಯವಾದಲ್ಲಿ ಮಾತ್ರ ಪರಿಸ್ಥಿತಿಯನ್ನು ನೋಡಿಕೊಂಡು ಹೊರಗೆ ಬನ್ನಿ ಎಂದು ಬೆಂಗಳೂರಿನಲ್ಲಿ ನೊಡೆಲ್ ಅಧಿಕಾರಿ ಮನೋಜ್ ರಾಜನ್ ಮನವಿ ಮಾಡಿಕೊಂಡಿದ್ದಾರೆ.
ಕರೆನ್ಸಿ ಬದಲಾಯಿಸಿಕೊಂಡು ಬರಲು ಹೋದಾಗ ದಾಳಿ:
ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನವೀನ್, ಮಂಗಳವಾರ ಬೆಳಗ್ಗೆ ಕರೆನ್ಸಿ ಬದಲಾಯಿಸಿಕೊಂಡು ಬರುವುದಕ್ಕೆ ತೆರಳಿದ ಸಂದರ್ಭದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಅವರ ಜೊತೆಗಿದ್ದ ವಿದ್ಯಾರ್ಥಿಗಳು ವಿವರಿಸಿದ್ದಾರೆ. ಇದಕ್ಕೂ ಮೊದಲು
ನವೀನ್ ಜೊತೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಾಣೆಬೆನ್ನೂರು ತಾಲೂಕಿನ ಸ್ನೇಹಿತ ಪ್ರವೀಣ್ ಎಂಬಾತನು ಈ ಸಾವಿನ ಬಗ್ಗೆ ಪೋಷಕರಿಗೆ ಮೊಬೈಲ್ ಮೂಲಕ ಸಂದೇಶ ರವಾನಿಸಿದ್ದಾನೆ. ಸ್ನೇಹಿತನ ಸಂದೇಶದ ನಡುವೆ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಕೂಡ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಭಾರತೀಯ ವಿದೇಶಾಂಗ ಸಚಿವಾಲಯದ ಟ್ವೀಟ್:
ಇಂದು ಬೆಳಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾವು ತೀವ್ರ ದುಃಖದಿಂದ ದೃಢಪಡಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಕುಟುಂಬಕ್ಕೆ ನಾವು ಸಂತಾಪವನ್ನು ತಿಳಿಸುತ್ತೇವೆ.
ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳು ಸೇರಿದಂತೆ ಇತರ ಸಂಘರ್ಷ ವಲಯಗಳಲ್ಲಿರುವ ನಗರಗಳಿಂದ ಸುರಕ್ಷಿತವಾಗಿ ಭಾರತೀಯ ಪ್ರಜೆಗಳನ್ನು ಕಳುಹಿಸಿಕೊಡುವಂತೆ ವಿದೇಶಾಂಗ ಕಾರ್ಯದರ್ಶಿ ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳನ್ನು ಸಂಪರ್ಕಿಸಿದ್ದಾರೆ.












Click it and Unblock the Notifications