ಹೂಡಿಕೆದಾರರ ಜೊತೆ ಎಚ್.ಡಿ.ಕುಮಾರಸ್ವಾಮಿ ಸಂವಾದ
ನ್ಯೂಜೆರ್ಸಿ, ಜುಲೈ 01 : ಅಮೆರಿಕ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನ್ಯೂಜೆರ್ಸಿಯಿಂದ ವಾಷಿಗ್ಟಂನ್ ಡಿ.ಸಿ.ಗೆ ತೆರಳಿದರು. ಕುಮಾರಸ್ವಾಮಿ ಅವರು ಜೂನ್ 28 ರಿಂದ ಜುಲೈ 6ರ ತನಕ ಅಮೆರಿಕ ಪ್ರವಾಸದಲ್ಲಿದ್ದಾರೆ.
ವಾಷಿಂಗ್ಟನ್ ಡಿ.ಸಿಯಲ್ಲಿ ಜುಲೈ 2ರಂದು ಹೂಡಿಕೆದಾರರೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಇಂದು ನ್ಯೂಜೆರ್ಸಿಯಿಂದ ಅವರು ವಾಷಿಂಗ್ಟನ್ ಡಿ.ಸಿ.ಗೆ ತೆರಳಿದರು.
ವಾಷಿಂಗ್ಟನ್ ಡಿ.ಸಿ.ಯಲ್ಲಿ ಕನ್ನಡಿಗರು ಏರ್ಪಡಿಸಿರುವ ಹೂಡಿಕೆದಾರರೊಂದಿಗಿನ ಅನೌಪಚಾರಿಕ ಸಭೆಯಲ್ಲಿ ಪಾಲ್ಗೊಂಡು, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.

ಜುಲೈ 5 ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ವಾಷಿಂಗ್ಟನ್ ಡಿ.ಸಿ.ಗೆ ತೆರಳುವ ಮುನ್ನ ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯದ ಉಸ್ತುವಾರಿ ವಹಿಸಿರುವ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಗಳ ಜೊತೆ ಮಾತುಕರೆ ನಡೆಸಿದ ನಾಯಕರು ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದರು.












Click it and Unblock the Notifications