ಕೊರೊನಾ ಸೋಂಕಿತರನ್ನು ಗುಣಪಡಿಸಲು ವೈದ್ಯರ ಹೊಸ ಅಸ್ತ್ರ!

ನವದೆಹಲಿ, ಏಪ್ರಿಲ್.10: ಕೊರೊನಾ ವೈರಸ್ ಚೀನಾದಲ್ಲೇ ಜನ್ಮ ತಾಳಿದರೂ ಮಹಾಮಾರಿ ಹಾವಳಿಗೆ ಅಮೆರಿಕಾ ತತ್ತರಿಸಿ ಹೋಗುತ್ತಿದೆ. ಪ್ರತಿನಿತ್ಯ ಸಾವಿರ ಸಾವಿರ ಜನರಲ್ಲಿ ಮಾರಕ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನೂರಾರು ಜನರು ಪ್ರಾಣ ಬಿಡುತ್ತಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಕೊರೊನಾ ವೈರಸ್ ಸೋಂಕಿತರಿಗಾಗಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂಬ ಚಿಕಿತ್ಸಾ ವಿಧಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ. ಹಾಗಾದರೆ ಈ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದರೇನು. ಈ ಚಿಕಿತ್ಸಾ ವಿಧಾನ ಹೇಗಿರುತ್ತದೆ ಎಂಬುದರ ಕುರಿತು ವಿಶೇಷ ವರದಿ.

ಕೊರೊನಾ ವೈರಸ್ ಸೋಂಕು ತಗಲಿ ಗುಣಮುಖರಾದ ವ್ಯಕ್ತಿಗಳ ರಕ್ತವನ್ನು ತೆಗೆದುಕೊಂಡು ಸೋಂಕಿತರಿಗೆ ಇಂಜೆಕ್ಟ್ ಮಾಡಲಾಗುತ್ತದೆ. ಇದರಿಂದ ಗಂಭೀರ ಸ್ಥಿತಿಯಲ್ಲಿ ಇರುವ ಕೊರೊನಾ ವೈರಸ್ ಸೋಂಕಿತನ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.

ಅಮೆರಿಕಾದಲ್ಲಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸೆ

ಅಮೆರಿಕಾದಲ್ಲಿ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸೆ

ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿಯನ್ನು ಬಳಸಿಕೊಳ್ಳಲಾಗುತ್ತಿದೆ. ನ್ಯೂಯಾರ್ಕ್ ನಲ್ಲಿ 11 ಮಂದಿ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ನೀಡಲಾಗಿದ್ದು, ಇದುವರೆಗೂ ಯಾವುದೇ ರೀತಿಯ ವರದಿಗಳು ಬಂದಿಲ್ಲ ಎಂದು ಹೇಳಲಾಗುತ್ತಿದೆ.

ಚೀನಾದಲ್ಲಿ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ

ಚೀನಾದಲ್ಲಿ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ

ವಿಶ್ವಕ್ಕೆ ಕೊರೊನಾ ವೈರಸ್ ಪರಿಚಯಿಸಿದ ಚೀನಾದಲ್ಲೂ ಕೂಡಾ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನವನ್ನು ಪ್ರಯೋಗಿಸಲಾಗುತ್ತಿದೆ. ಕೆಲವರಿಗೆ ಈ ಚಿಕಿತ್ಸೆ ನೀಡಿದ್ದು ಸೋಂಕಿತರ ದೇಹದಲ್ಲಿ ಆಮ್ಲಜನಕ ಪ್ರಮಾಣ ವೃದ್ಧಿಸಿರುವುದು ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ವಿಧಾನ ಹೇಗಿರುತ್ತದ?

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ವಿಧಾನ ಹೇಗಿರುತ್ತದ?

ಕೊರೊನಾ ವೈರಸ್ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆದು ಗುಣಮುಖರಾದ ವ್ಯಕ್ತಿಗಳ ರಕ್ತವನ್ನು ಸಂಗ್ರಹಿಸಲಾಗುತ್ತದೆ. ಈ ರಕ್ತವನ್ನು ಗಂಭೀರ ಸ್ಥಿತಿಯಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರಿಗೆ ನೀಡಲಾಗುತ್ತದೆ. ಈ ಚಿಕಿತ್ಸಾ ವಿಧಾನವನ್ನು ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದು ವೈದ್ಯಕೀಯ ಭಾಷೆಯಲ್ಲಿ ಹೇಳಲಾಗುತ್ತದೆ.

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿಯ ಎಫೆಕ್ಟ್ ಹೇಗಿರುತ್ತೆ?

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿಯ ಎಫೆಕ್ಟ್ ಹೇಗಿರುತ್ತೆ?

ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದ ವ್ಯಕ್ತಿಗಳಲ್ಲಿ ವೈರಸ್ ಗಳ ವಿರುದ್ಧ ಹೋರಾಡುವ ಶಕ್ತಿ ಇರುತ್ತದೆ. ಅಂಥ ವ್ಯಕ್ತಿಗಳ ರಕ್ತವನ್ನು ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ನೀಡುವುದರಿಂದ ಅವರಲ್ಲೂ ವೈರಸ್ ಗಳ ವಿರುದ್ಧ ಹೋರಾಡಬಲ್ಲ ಶಕ್ತಿ ವೃದ್ಧಿಸುತ್ತದೆ. ಒಮ್ಮೆ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದು, ಆತನ ರಕ್ತವನ್ನು ಸೋಂಕಿತನಿಗೆ ನೀಡುವುದರಿಂದ ರೋಗಿಯಲ್ಲೂ ರೋಗ ನಿರೋಧಕ ಶಕ್ತಿಯು ವೃದ್ಧಿಯಾಗುವ ಸಾಧ್ಯತೆಯಿರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಪರಿಣಾಮಕಾರಿಯಾಗಿದೆಯೇ?

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಪರಿಣಾಮಕಾರಿಯಾಗಿದೆಯೇ?

ಕೊರೊನಾ ವೈರಸ್ ಸೋಂಕಿತರ ಮೇಲೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಪರಿಣಾಮಕಾರಿಯಾಗಿ ಪ್ರಭಾವ ಬೀರಲಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಈ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನಕ್ಕೆ ಅಮೆರಿಕಾದ ಫುಡ್ ಆಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಕೂಡಾ ಅನುಮೋದನೆ ನೀಡಿಲ್ಲ. ಏಕೆಂದರೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಕೊರೊನಾ ವೈರಸ್ ನಿವಾರಣೆಗೆ ಸಹಕಾರಿ ಆಗುತ್ತದೆಯೇ ಇಲ್ಲವೇ ಎಂಬುದರ ಬಗ್ಗೆ ವೈದ್ಯರು ಸಂಶೋಧನೆಗಳನ್ನು ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+