Get Updates
Get notified of breaking news, exclusive insights, and must-see stories!

ಕೊರೊನಾ ವೈರಸ್: ಚೀನಾದಲ್ಲಿ 361ಕ್ಕೆ ಏರಿದ ಸಾವಿನ ಸಂಖ್ಯೆ

ಬೀಜಿಂಗ್, ಫೆಬ್ರವರಿ.03: ಚೀನಾದಲ್ಲಿ ಮಾರಕ ಕೊರೊನಾ ವೈರಸ್ ಮರಣ ಮೃದಂಗ ಮುಂದುವರಿದಿದೆ. ಇದುವರೆಗೂ ಕೊರೊನಾ ವೈರಸ್ ಗೆ ಹ್ಯೂಬೈ ಪ್ರದೇಶದ ವ್ಯಾಪ್ತಿಯಲ್ಲೇ 361ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. ಇತ್ತೀಚಿಗೆ ಮತ್ತೆ 56 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಹ್ಯೂಬೈ ಆರೋಗ್ಯ ಪ್ರಾಧಿಕಾರ ತಿಳಿಸಿದೆ.

ಹ್ಯೂಬೈ ಆರೋಗ್ಯ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ ಇದುವರೆಗೂ ಚೀನಾದಲ್ಲಿ 361 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಭಾನುವಾರ 2,103 ಜನರಿಗೆ ಸೋಂಕು ತಗಲಿರುವ ಬಗ್ಗೆ ಸ್ಪಷ್ಟವಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ ಚೀನಾ ಒಂದರಲ್ಲೇ 16,600ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ತಗಲಿರುವ 9,618 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 478 ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಯುನೈಟೆಡ್ ಸ್ಟೇಟ್ಸ್ ನಲ್ಲಿ 9, ಕ್ಯಾಲಿಫೋರ್ನಿಯಾದಲ್ಲಿ 4, ವಾಶಿಂಗ್ ಟನ್ ಮತ್ತು ಅರಿಜೋನಾದಲ್ಲಿ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

 CoronaVirus: Death Rate Rise To 361 In China

ರಷ್ಯಾ ಮತ್ತು ಚೀನಾ ನಡುವೆ ರೈಲ್ವೆ ಸಂಪರ್ಕ ಬಂದ್:

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಚೀನಾ ಮತ್ತು ರಷ್ಯಾ ನಡುವಿನ ರೈಲ್ವೆ ಸಂಪರ್ಕವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಜನರಿ.31ರವರೆಗೂ ಮಾಸ್ಕೋ ಮತ್ತು ಬೀಜಿಂಗ್ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಯುತ್ತಿದ್ದು, ಈ ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಚೀನಾದ ವುಹಾನ್ ನಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ರೋಗ ವಿಶ್ವದ 36 ದೇಶಗಳಲ್ಲಿ ಹರಡಿದೆ ಎನ್ನಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+