ಕೊರೊನಾ ಆತಂಕ; ವಿಶ್ವಸಂಸ್ಥೆ ಅಧಿವೇಶನದ ಮೇಲೆ ಕರಿನೆರಳು

ವಾಷಿಂಗ್ಟನ್, ಮಾರ್ಚ್ 4: ಜಾಗತಿಕವಾಗಿ ತಲ್ಲಣ ಸೃಷ್ಠಿಸಿರುವ ಕೊರೊನಾ ವೈರಸ್ ಭೀತಿ ವಿಶ್ವಸಂಸ್ಥೆಯ 64ನೇ ವಾರ್ಷಿಕ ಮಹಾ ಅಧಿವೇಶನಕ್ಕೂ ತಟ್ಟಿದೆ. ಮಾರ್ಚ್‌ 9 ರಿಂದ 20ರವರೆಗೆ ನಡೆಯಬೇಕಾಗಿದ್ದ ಅಧಿವೇಶನವನ್ನು ವೈರಸ್‌ ಸೋಂಕಿನ ಭಯದಿಂದಾಗಿ ಒಂದು ವಾರ ನಡೆಯಬೇಕಿದ್ದ ಅಧಿವೇಶನವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ.

ಈ ಅಧಿವೇಶನದಲ್ಲಿ ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ವಿಷಯಗಳ ಕುರಿತು ಚರ್ಚೆ ನಡೆಸಲು ಉದ್ದೇಶಿಸಲಾಗಿದೆ. 193 ಸದಸ್ಯ ರಾಷ್ಟ್ರಗಳು ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿವೆ. ಆದರೆ, ವೈರಸ್‌ ಭೀತಿಯಿಂದ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಮಾರಕ ಕೊರೊನಾಕ್ಕೆ ಮಂಗಳವಾರ ಅಂತ್ಯಗೊಂಡಂತೆ ಜಗತ್ತಿನಾದ್ಯಂತ 3330 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಚೀನಾದಲ್ಲಿ 2977 ಜನ ಮೃತಪಟ್ಟಿದ್ದು. ಸಾವಿನ ಸರಣಿ ಮುಂದುವರೆದಿದೆ.

ನ್ಯೂಯಾರ್ಕ್‌ನಲ್ಲಿ ಅಧಿವೇಶನ

ನ್ಯೂಯಾರ್ಕ್‌ನಲ್ಲಿ ಅಧಿವೇಶನ

ಅಧಿವೇಶನ ವಿಶ್ವಸಂಸ್ಥೆಯ ಕಚೇರಿ ಇರುವ ನ್ಯೂಯಾರ್ಕ್‌ ನಲ್ಲಿ ಆಯೋಜಿಸಲಾಗಿದೆ. ನ್ಯೂಯಾರ್ಕ್‌ನಲ್ಲಿಯೇ ಒಬ್ಬರು ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ಆದರೆ, ಕೊರನಾ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಚರ್ಚಿಸುವ ಉದ್ದೇಶ ಇಲ್ಲ. ವೈರಸ್‌ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ಚೀನಾ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಉತ್ತಮ ಫಲಿತಾಂಶ ದೊರೆತಿದೆ. ಪರಿಸ್ಥಿತಿ ಈಗ ಸುಧಾರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಚೀನಾದ ರಾಯಭಾರಿ ಝಾಂಗ್ ತಿಳಿಸಿದ್ದಾರೆ.

ಅಮೆರಿಕದಲ್ಲಿ ಆರು ಸಾವು

ಅಮೆರಿಕದಲ್ಲಿ ಆರು ಸಾವು

ಮಾರಕ ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಸಾವಿಗೀಡಾದವರ ಸಂಖ್ಯೆ ಆರಕ್ಕೇರಿದೆ. 90ಕ್ಕೂ ಹೆಚ್ಚು ಮಂದಿಯಲ್ಲಿ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ. ಸಾವಿಗೀಡಾದವರೆಲ್ಲರೂ ವಾಷಿಂಗ್ಟನ್‌ ರಾಜ್ಯದವರಾಗಿದ್ದಾರೆ ಎಂದು ಅಮೆರಿಕ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

3,100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ

3,100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ

ಇದುವರೆಗೆ 67 ದೇಶಗಳಲ್ಲಿ ಸೋಂಕು ವ್ಯಾಪಿಸಿದ್ದು, 3,100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಜತೆಗೆ, 89,527 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ತಿಳಿಸಿದೆ. ಅಮೆರಿಕದ ಕಂಪನಿಗಳು ವೈರಸ್‌ಗೆ ಲಸಿಕೆ ಅಭಿವೃದ್ಧಿಪಡಿಸುವ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲು ಒಕ್ಕೂಟವನ್ನು ರಚಿಸಿಕೊಂಡಿವೆ.

ಚೀನಾ ಬಿಟ್ಟರೆ ಅತಿ ಹೆಚ್ಚು ದಕ್ಷಿಣ ಕೊರಿಯಾ

ಚೀನಾ ಬಿಟ್ಟರೆ ಅತಿ ಹೆಚ್ಚು ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 5,000ಕ್ಕೆ ತಲುಪಿದೆ. ಚೀನಾ ಹೊರತುಪಡಿಸಿದರೆ ದಕ್ಷಿಣ ಕೊರಿಯಾದಲ್ಲೇ ಅತಿ ಹೆಚ್ಚು ಮಂದಿ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ಮತ್ತೆ ಇಬ್ಬರು ಸಾವಿಗೀಡಾಗಿದ್ದು, ಮೃತಪಟ್ಟವರ ಸಂಖ್ಯೆ 28ಕ್ಕೇರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+