ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್: ಚೀನಾ ಪಾಲಿಗೆ ಅತಿದೊಡ್ಡ ಆರೋಗ್ಯ ತುರ್ತು ಪರಿಸ್ಥಿತಿ

|
Google Oneindia Kannada News

ಬೀಜಿಂಗ್, ಫೆಬ್ರವರಿ.23: ಡ್ರ್ಯಾಗನ್ ರಾಷ್ಟ್ರದಲ್ಲಿ ಕೊರೊನಾ ವೈರಸ್ ನಿಂದ ಸಾವಿನ ಸಂಖ್ಯೆಯು ದಿನೇ ದಿನೆ ಏರಿಕೆಯಾಗುತ್ತಿದ್ದು, ಇದು ಚೀನಾ ಕಂಡ ಅತಿದೊಡ್ಡ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಿಳಿಸಿದ್ದಾರೆ.
ಚೀನಾದಲ್ಲಿ ಮಾರಕ ರೋಗ ಕೊರೊನಾ ವೈರಸ್ ಗೆ 2,468 ಮಂದಿ ಪ್ರಾಣ ಬಿಟ್ಟಿದ್ದು, 78,966 ಜನರಲ್ಲಿ ಮಾರಕ ಸೋಂಕು ಪತ್ತೆಯಾಗಿದೆ. ಭಾನುವಾರ ಚೀನಾ ಒಂದರಲ್ಲೇ 97 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿರುವ ಬಗ್ಗೆ ಅಂತಾರಾಷ್ಟ್ರೀಯ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರ ಬೆನ್ನಲ್ಲೇ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ಸಂಬಂಧ ಮಹತ್ವದ ಸಭೆ ನಡೆಸಿದರು.

ಕೊರೊನಾ ವೈರಸ್ ಹಾವಳಿ ವಿಚಾರದಲ್ಲೂ ಕುತಂತ್ರ ಬುದ್ಧಿ ತೋರಿಸಿದ ಚೀನಾ
ದೇಶದಲ್ಲಿ ಕೊರಾನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವುದು ಮತ್ತು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ಬಲುಮುಖ್ಯ ಎಂದರು. ಚೀನಾದ ಸಿಸಿಟಿವಿ ಸುದ್ದಿ ವಾಹಿನಿ ಜೊತೆ ಮಾತನಾಡಿದ ಕ್ಸಿ ಜಿನ್ ಪಿಂಗ್, ಕೊವಿಡ್-19ಯಿಂದ ದೇಶದಲ್ಲಿ ಬಿಕ್ಕಟ್ಟು ಎದುರಾಗಿದ್ದು, ನಮ್ಮ ಪಾಲಿಗೆ ಅಗ್ನಿಪರೀಕ್ಷೆ ಎನಿಸಿದೆ. ಇದು ದೇಶ ಕಂಡ ಅತ್ಯಂತ ದೊಡ್ಡ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ.

Coronavirus Is Biggest Health Emergency In China

ಸಾಮಾಜಿಕ ಮತ್ತು ಆರ್ಥಿಕತೆಗೆ ಭಾರಿ ಪೆಟ್ಟು:
ಕೊರೊನಾ ವೈರಸ್ 33 ರಾಷ್ಟ್ರಗಳಲ್ಲಿ ಹರಡಿದ್ದು, ಜಾಗತಿಕ ಮಟ್ಟದಲ್ಲಿ ಆಂತಕವನ್ನು ಹುಟ್ಟುಹಾಕಿದೆ. ಇದರಿಂದ ಸಾಕಷ್ಟು ರಾಷ್ಟ್ರಗಳು ಚೀನಾದ ಜೊತೆಗಿನ ವ್ಯಾಪಾರ ವಹಿವಾಟನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಹೀಗಾಗಿ ದೇಶ ಸಾಮಾಜಿಕತೆ ಮತ್ತು ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಿಳಿಸಿದ್ದಾರೆ.
ಇನ್ನು, ಚೀನಾದ ಹುಬೈ ನಗರದಲ್ಲಿ ಭಾನುವಾರ 96 ಮಂದಿ ಕೊರೊನಾ ವೈರಸ್ ಗೆ ಪ್ರಾಣ ಬಿಟ್ಟಿದ್ದರೆ, 630 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇನ್ನೊಂದೆಡೆ ವುಹಾನ್ ನಗರದಲ್ಲಿ ಶನಿವಾರ 82 ಮಂದಿ ಕೊರೊನಾಗೆ ಬಲಿಯಾಗಿದ್ದು, 541 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು.
ವುಹಾನ್ ನಗರದ 15,299 ಮಂದಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದವರನ್ನು ಮುಂದಿನ ಎರಡು ವಾರಗಳ ಕಾಲ ಬೇರೊಂದು ಕಡೆಯಲ್ಲಿ ದಿಗ್ಬಂಧನದಲ್ಲಿ ಇರಿಸಿ ಆರೋಗ್ಯ ಪರಿಶೀಲನೆ ನಡೆಸಲಾಗುತ್ತದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.

English summary
Coronavirus Is Biggest Health Emergency In China. President Xi Jinping Says About Covid-19. Till Sunday 2,468 Death From Deadly Virus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X