• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಒಂದೇ ವಾರದಲ್ಲಿ ಯುರೋಪ್ ರಾಷ್ಟ್ರಗಳಲ್ಲಿ 30 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್!

|
Google Oneindia Kannada News

ನ್ಯೂಯಾರ್ಕ್, ನವೆಂಬರ್ 12: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಯುರೋಪ್ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಕಳೆದ ಒಂದು ವಾರದಲ್ಲಿ ಕೊವಿಡ್-19 ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಶೇ.10ರಷ್ಟು ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ತಿಳಿಸಿದೆ.

ಯುರೋಪ್ ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣ ಹಾಗೂ ಸಾವಿನ ಪ್ರಕರಣಗಳು ಸ್ಥಿರವಾಗಿ ಏರಿಕೆಯಾಗುತ್ತಿರುವ ಬಗ್ಗೆ ಅಂಕಿ-ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ. ನಿರಂತರ ಆರನೇ ವಾರವೂ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದು ಸಹ ಗೊತ್ತಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ವಾರದ ವರದಿ ಪ್ರಕಾರ, ಕಳೆದೊಂದು ವಾರದಲ್ಲಿ 30 ಲಕ್ಷಕ್ಕೂ ಅಧಿಕ ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.1ರಷ್ಟು ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಈ ಪೈಕಿ 3ರಲ್ಲಿ 2 ಹೊಸ ಪ್ರಕರಣಗಳು ಯುರೋಪ್ ರಾಷ್ಟ್ರಗಳಲ್ಲೇ ವರದಿಯಾಗಿವೆ. ಯುರೋಪ್ ರಾಷ್ಟ್ರಗಳಲ್ಲಿ 19 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಈ ರಾಷ್ಟ್ರಗಳಲ್ಲೇ ಶೇ.7ರಷ್ಟು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ವಿಶ್ವದಲ್ಲೇ ಅತಿಹೆಚ್ಚು ಅಪಾಯ ಎದುರಿಸುತ್ತಿರುವ ದೇಶಗಳು:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಜಗತ್ತಿನಲ್ಲೇ ಅತಿಹೆಚ್ಚು ಅಪಾಯವನ್ನು ಎದುರಿಸುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಯುರೋಪ್ ರಾಷ್ಟ್ರಗಳೇ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿವೆ. ವಿಶ್ವದಾದ್ಯಂತ ಅತಿಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸುವ ದೇಶಗಳ ಸಾಲಿನಲ್ಲಿ ಯುನೈಟೆಡ್ ಸ್ಟೇಟ್ಸ್, ರಷ್ಯಾ, ಬ್ರಿಟನ್, ಟರ್ಕಿ ಮತ್ತು ಜರ್ಮನಿ ಅಗ್ರ ಕ್ರಮಾಂಕದಲ್ಲಿವೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಇಳಿಮುಖವಾಗಿದೆ. ಜಗತ್ತಿನಲ್ಲಿ ಶೇ.4ರಷ್ಟು ಸಾವಿನ ಪ್ರಮಾಣ ಇಳಿಮುಖವಾಗಿದೆ. ಯುರೋಪ್ ಹೊರತುಪಡಿಸಿ ಉಳಿದ ದೇಶಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಕೂಡಾ ಇಳಿಮುಖವಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಾರದ(ಸಾಪ್ತಾಹಿಕ) ವರದಿಯಲ್ಲಿ ಉಲ್ಲೇಖಿಸಲಾಗಿದೆ.

61 ರಾಷ್ಟ್ರಗಳಲ್ಲಿ ಕೊವಿಡ್-19 ಪರಿಸ್ಥಿತಿ:

ವಿಶ್ವ ಆರೋಗ್ಯ ಸಂಸ್ಥೆಯು ಪಟ್ಟಿ ಮಾಡಿರುವ 61 ರಾಷ್ಟ್ರಗಳನ್ನು ಯುರೋಪ್ ಪ್ರಾದೇಶಿಕ ದೇಶಗಳು ಎಂದು ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ರಷ್ಯಾ ಸೇರಿದಂತೆ ಮಧ್ಯ ಏಷ್ಯಾದವರೆಗೂ ವ್ಯಾಪಿಸಿದೆ. ಈ ರಾಷ್ಟ್ರಗಳಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಏರಿಕೆಯ ಪ್ರಮಾಣದಲ್ಲಿ ಶೇ.42ರಷ್ಟು ಏರಿಕೆಯಾಗಿದೆ. ಕಳೆದೊಂದೇ ವಾರದಲ್ಲಿ ಶೇ.10ರಷ್ಟು ಹೊಸ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಮೆರಿಕಾದಲ್ಲಿ ಕೊರೊನಾವೈರಸ್ ಇಳಿಮುಖ:

ಕೊರೊನಾವೈರಸ್ ಸೋಂಕಿನಿಂದ ನಲುಗಿದ ಅಮೆರಿಕಾದಲ್ಲಿ ಪರಿಸ್ಥಿತಿ ಚೇತರಿಕೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಾಪ್ತಾಹಿಕದ ಪ್ರಕಾರ, ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.5ರಷ್ಟು ಇಳಿಮುಖವಾಗಿದ್ದು, ಸಾವಿನ ಪ್ರಕರಣಗಳಲ್ಲಿ ಶೇ.14ರಷ್ಟು ಕಡಿಮೆಯಾಗಿದೆ. ಆಗ್ನೇಯ ಏಷ್ಯಾ ಮತ್ತು ಆಫ್ರಿಕಾದ ಪ್ರದೇಶಗಳಲ್ಲಿ ಲಸಿಕೆಗಳ ಕೊರತೆಯ ಹೊರತಾಗಿಯೂ, ಕೋವಿಡ್ -19 ಸಾವಿನ ಪ್ರಕರಣಗಳು ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ವರ್ಷಾಂತ್ಯದವರೆಗೂ ಬೂಸ್ಟರ್ ಡೋಸ್ ಬೇಡ:

ಫಾರ್ಮಾಸ್ಯುಟಿಕಲ್ ಕಂಪನಿ ಫೈಜರ್ ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಅನ್ನು ಎಲ್ಲಾ ವಯಸ್ಕರಿಗೆ ಕೊರೊನವೈರಸ್ ಲಸಿಕೆಗಯ ಬೂಸ್ಟರ್ ಡೋಸ್‌ಗಳನ್ನು ಅಧಿಕೃತಗೊಳಿಸಲು ಮನವಿ ಮಾಡಿಕೊಳ್ಳಲಾಗಿತ್ತು. ಆದರೆ 2021ರ ವರ್ಷಾಂತ್ಯದವರೆಗಾದರೂ ಬೂಸ್ಟರ್ ಡೋಸ್ ಲಸಿಕೆಯನ್ಪು ವಿತರಿಸುವುದಕ್ಕೆ ಆರಂಭಿಸದಂತೆ ವಿಶ್ವ ಆರೋಗ್ಯ ಸಂಸ್ಥೆಯು ರಾಷ್ಟ್ರಗಳಿಗೆ ಸೂಚನೆ ನೀಡಿದೆ.

ಜಗತ್ತಿನಲ್ಲಿ ಕೊವಿಡ್-19 ಅಪಾಯ:

ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ದೊಡ್ಡ ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿನ ಅಪಾಯ ಹೆಚ್ಚಾಗಿ ಕಾಣಿಸಿಕೊಂಡಿದೆ. ಅಮೆರಿಕಾ, ಇಂಗ್ಲೆಂಡ್, ರಷ್ಯಾ, ಬ್ರೆಜಿಲ್, ಫ್ರಾನ್ಸ್ ರಾಷ್ಟ್ರಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪ್ರತಿನಿತ್ಯ ಹೊಸ ದಾಖಲೆಗಳನ್ನು ಬರೆಯುತ್ತಿವೆ.

ಜಗತ್ತಿನಲ್ಲಿ ಕಳೆದ 24 ಗಂಟೆಗಳಲ್ಲೇ 5,52,047 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 8,334 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ವಿಶ್ವದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 25,21,21,721ಕ್ಕೆ ಏರಿಕೆಯಾಗಿದ್ದು, 50,88,328 ಮಂದಿ ಸೋಂಕಿನಿಂದ ಉಸಿರು ಚೆಲ್ಲಿದ್ದಾರೆ. ಇದರ ಹೊರತಾಗಿ 2,28,85,412 ಸೋಂಕಿತರು ಗುಣಮುಖರಾಗಿದ್ದಾರೆ.

English summary
Coronavirus New Cases Declining Everywhere Except Europe, But Deaths up by 10 Percent: World Health Organization
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X