ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳ, ಆತಂಕ
ಇಸ್ಲಾಮಾಬಾದ್, ನವೆಂಬರ್ 28. ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಶುರುವಾಗಿದೆ. ಒಂದೇ ದಿನ 45 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 7942ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 3 ಸಾವಿರಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ನ್ಯಾಷನಲ್ ಕಮ್ಯಾಂಡ್ ಆಂಡ್ ಆಪರೇಷನ್ ಸೆಂಟರ್ ತಿಳಿಸಿದೆ.
ಪಾಕಿಸ್ತಾನದಲ್ಲಿ ಕೊರೊನಾ ಸೋಂಕು ಏಕಾಏಕಿ ಕಡಿಮೆಯಾಗಲು ಕಾರಣವೇನು?
ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರಂಭವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇತ್ತು.
ಇದೀಗ ಪ್ರಕರಣಗಳು ಹೆಚ್ಚಾಗಿರುವ ಕಾರಣ ಸಾರ್ವಜನಿಕರು ಗುಂಪು ಸೇರುವಿಕೆ, ಸಭೆ, ಸಮಾರಂಭಗಳ ಕುರಿತು ನಿರ್ಬಂಧವನ್ನು ಹೇರಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕಡೆ ಗಮನವಹಿಸುವಂತೆ ತಿಳಿಸಲಾಗಿದೆ.
ಸಿಂಧ ಪ್ರಾಂತ್ಯದಲ್ಲಿ ಅತಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.