ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್: ದುಪ್ಪಟ್ಟು ಬೆಲೆಗೆ ಮಾಸ್ಕ್ ಮಾರಾಟ ಮಾಡಿದರೆ ದಂಡ

|
Google Oneindia Kannada News

ನವದೆಹಲಿ, ಮಾರ್ಚ್.06: ದೇಶಾದ್ಯಂತ ಕೊರೊನಾ ವೈರಸ್ ಜನರಲ್ಲಿ ಆತಂಕ ಸೃಷ್ಟಿಸಿದೆ. ಉರಿಯುವ ಬೆಂಕಿಯಲ್ಲಿ ಮೈ ಕಾಸಿಕೊಳ್ಳಲು ಹೊರಟಿರುವ ಅಂಗಡಿಯ ಮಾಲೀಕರಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಕೊರೊನಾ ವೈರಸ್ ನಿಂದ ಪಾರಾಗಲು ಜನರು ಮಾಸ್ಕ್ ಗಳ ಮೊರೆ ಹೋಗುತ್ತಿದ್ದಾರೆ. ಅಂಗಡಿ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಸಾಮಾನ್ಯ ಬೆಲೆಗಿಂತ ದುಪ್ಪಟ್ಟು ಬೆಲೆಗೆ ಮಾಸ್ಕ್ ಗಳನ್ನು ಮಾರಾಟ ಮಾಡುತ್ತಿದ್ದಾರೆ.

ನ್ಯೂಸ್ ಪೇಪರ್ ಜೊತೆಗೆ ಟಾಯ್ಲೆಟ್ ಪೇಪರ್ ಪ್ರಿಂಟ್ ಮಾಡಿದ ಸುದ್ದಿ ಪತ್ರಿಕೆನ್ಯೂಸ್ ಪೇಪರ್ ಜೊತೆಗೆ ಟಾಯ್ಲೆಟ್ ಪೇಪರ್ ಪ್ರಿಂಟ್ ಮಾಡಿದ ಸುದ್ದಿ ಪತ್ರಿಕೆ

ವಿಶ್ವದಾದ್ಯಂತ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಮಾಸ್ಕ್ ಗಳ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಈ ಹಿನ್ನೆಲೆ ಮಾಸ್ಕ್ ಗಳ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಸರ್ಜಿಕಲ್ ಮಾಸ್ಕ್ ಗಳು ಸಾಮಾನ್ಯವಾಗಿ 10-12 ರೂಪಾಯಿಗೆ ಮಾರಾಟವಾಗುತ್ತಿತ್ತು. ಆದರೆ, ಕೊರೊನಾ ವೈರಸ್ ನಿಂದಾಗಿ ಸರ್ಜಿಕಲ್ ಮಾಸ್ಕ್ ಗಳನ್ನು ಕನಿಷ್ಠ 50 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Coronavirus: Union Health Minister Dr. Harsh Vardhan On Coronavirus And Mask Rate

N-95 ಮಾಸ್ಕ್ 500 ರೂಪಾಯಿಗೆ ಮಾರಾಟ:

ಕೊರೊನಾ ವೈರಸ್ ಭೀತಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಜನರು ಮಾಸ್ಕ್ ಗಳ ಮೊರೆ ಹೋಗುತ್ತಿದ್ದು, ಇದರಿಂದ ಎನ್-95 ಮಾಸ್ಕ್ ಗಳಿಗೆ ಅತಿಹೆಚ್ಚು ಬೇಡಿಕೆ ಬಂದಿದೆ. ಕೆಲವು ಅಂಗಡಿಗಳಲ್ಲಿ ಮಾಸ್ಕ್ ಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಸಾಮಾನ್ಯವಾಗಿ 200 ರಿಂದ 250 ರೂಪಾಯಿಗೆ ಮಾರಾಟವಾಗುತ್ತಿದ್ದ ಮಾಸ್ಕ್ ಗಳನ್ನು ಇದೀಗ 500 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಥ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಎಚ್ಚರಿಸಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಯಾರೊಬ್ಬರೂ ಕೂಡಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವ ಡಾ.ಹರ್ಷವರ್ಧನ್ ತಿಳಿಸಿದರು.

English summary
Union Health Minister Dr. Harsh Vardhan On Coronavirus And Mask Rate. Now More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X