• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ 19: ಜರ್ಮನಿಯಲ್ಲಿ ದೊಡ್ಡ ಸಮಾರಂಭಗಳನ್ನು ರದ್ದುಗೊಳಿಸಲು ಸೂಚನೆ

|
Google Oneindia Kannada News

ಬರ್ಲಿನ್, ನವೆಂಬರ್ 12: ಜರ್ಮನಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಸಭೆ, ಸಮಾರಂಭಗಳನ್ನು ನಡೆಸದಂತೆ ಸೂಚನೆ ನೀಡಲಾಗಿದೆ.

ಸಾಧ್ಯವಾದರೆ ದೊಡ್ಡ ಸಮಾರಂಭಗಳನ್ನು ರದ್ದುಗೊಳಿಸಬೇಕು, ಹಾಗೆಯೇ ಅಗತ್ಯವಿಲ್ಲದ ಕಡೆ ಜನರು ದೈಹಿಕ ಅಂತರ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ.

ಲಸಿಕೆ ತೆಗೆದುಕೊಳ್ಳಲು ಹಿಂದೇಟು, ಕೊರೊನಾ ಸೋಂಕು ಮತ್ತೆ ಉಲ್ಬಣಲಸಿಕೆ ತೆಗೆದುಕೊಳ್ಳಲು ಹಿಂದೇಟು, ಕೊರೊನಾ ಸೋಂಕು ಮತ್ತೆ ಉಲ್ಬಣ

ದೇಶದಲ್ಲಿ ಇದೇ ಮೊದಲ ಬಾರಿಗೆ ಗುರುವಾರ ದಾಖಲೆ ಮಟ್ಟದಲ್ಲಿ ಅಂದರೆ ದೈನಂದಿನ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕೆ ಬಂದು ತಲುಪಿದೆ, ಹೊಸದಾಗಿ 48,640 ಪ್ರಕರಣಗಳು ವರದಿಯಾಗಿವೆ. ಅಲ್ಲದೇ, ಪ್ರತಿ ಲಕ್ಷ ಜನಸಂಖ್ಯೆಗೆ ಸೋಂಕಿನ ಪ್ರಮಾಣವು 249.1ರಿಂದ 263.7ಕ್ಕೆ ಏರಿದೆ ಎಂದು ಅಲ್ಲಿನ ರಾಬರ್ಟ್ ಕೋಚ್ ಇನ್‌ಸ್ಟಿಟ್ಯೂಟ್ ಶುಕ್ರವಾರ ತಿಳಿಸಿದೆ.

ಒಂದೇ ದಿನ 191 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 97,389ಕ್ಕೆ ಏರಿಕೆಯಾಗಿದೆ.

ಜರ್ಮನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆ ಕಾಣುತ್ತಿದೆ. ಗುರುವಾರ ಒಂದೇ ದಿನ ದೇಶಾದ್ಯಂತ ಒಟ್ಟು 50,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಏರುತ್ತಿರುವ ಕೊರೊನಾ ಸೋಂಕನ್ನು ತಹಬದಿಗೆ ತರಲು ಸರ್ಕಾರ ಹೊಸ ಮಾರ್ಗಸೂಚಿಯನ್ನು ತರಲು ನಿರ್ಧರಿಸಿದೆ. ಈ ಕುರಿತಾಗಿ ಸರ್ಕಾರ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಜೊತೆ ಸಂಪರ್ಕದಲ್ಲಿದೆ.

ಜರ್ಮನಿಯ ಖ್ಯಾತ ವೈರಾಣು ತಜ್ಞರಾದ ಕ್ರಿಶ್ಚಿಯನ್ ದ್ರೊಸ್ಟೆನ್ ಅವರು ಕೆಲವೇ ತಿಂಗಳಲ್ಲಿ 1 ಲಕ್ಷ ಮಂದಿ ಕೊರೊನಾಗೆ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಬುಧವಾರ ಎಚ್ಚರಿಸಿದ್ದರು. ಅದರೊಳಗಾಗಿ ಲಸಿಕಾ ಹಂಚಿಕೆ ಕಾರ್ಯಕ್ರಮವನ್ನು ಸಮರ್ಥವಾಗಿ ನಡೆಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದರು.

ನಾಗರಿಕರಿಗೆ ಲಸಿಕೆ ಕಡ್ಡಾಯ ಮಾಡಲು ಜರ್ಮನಿ ಸರ್ಕಾರ ಮೀನ ಮೇಷ ಎಣಿಸುತ್ತಿದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯುವಂತೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮತ್ತೆ ಕೊರೊನಾ ದೇಶಾದ್ಯಂತ ತಾಂಡವವಾಡಲಿದೆ.

ನಾರ್ವೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಅಲ್ಲಿನ ಸರ್ಕಾರವು ಪಟ್ಟಣಗಳಲ್ಲಿ ಆರೋಗ್ಯ ಪಾಸ್‌ಗಳನ್ನು ಬಳಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಪುನರ್ ಜಾರಿಗೆ ತರುವುದಾಗಿ ಶುಕ್ರವಾರ ಘೋಷಿಸಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಿನ ಸರ್ಕಾರವು ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ವಾಪಸ್ ಪಡೆದಿತ್ತು. ಕೋವಿಡ್ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ 18 ವರ್ಷ ಮೇಲ್ಪಟ್ಟವರಿಗೆ ಮೂರನೇ ಡೋಸ್ ನೀಡುವ ಕುರಿತೂ ಆಲೋಚಿಸಲಾಗುತ್ತಿದೆ. ಆದರೆ, ಹೊಸದಾಗಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ನಾರ್ವೆಯ ಪ್ರಧಾನಿ ಜೋನಸ್ ತಿಳಿಸಿದ್ದಾರೆ.

English summary
Germany's disease control center is calling for people to cancel or avoid large events and to reduce their contacts as the country's coronavirus infection rate hits the latest in a string of new highs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion