ಜ.02: ಜಾಗತಿಕವಾಗಿ ಕೊವಿಡ್19 ರಿಂದ ಗುಣಮುಖ ಹೊಂದಿದವರೆಷ್ಟು?

ಬೆಂಗಳೂರು, ಜನವರಿ 02: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 289,833,643 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 253,414,896 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 258,864,047 ಪ್ರಕರಣಗಳು ಮುಕ್ತಾಯಗೊಂಡಿವೆ.

ಅಮೆರಿಕದಲ್ಲಿ ಒಂದೇ ದಿನ 5.8 ಲಕ್ಷ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ. ಡಿಸೆಂಬರ್ 22-28ರ ವೇಳೆಯಲ್ಲಿ ದಾಖಲಾದವರ ಸಂಖ್ಯೆ ಶೇ 66ರಷ್ಟು ಏರಿಕೆಯಾಗಿದೆ ಎಂದು ಸಿಡಿಸಿ ವರದಿ ನೀಡಿದೆ.

ಭಾರತದಲ್ಲಿ ಜನವರಿ 10, 2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುವುದು, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 02) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 18,198 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 18,198 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 27,553ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 34,889,132ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 481,770ಕ್ಕೆ ಏರಿಕೆಯಾಗಿದೆ, 34,284,561ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 18,198 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜನವರಿ 02ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 289,833,643 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 5,458,870 ಕ್ಕೇರಿದೆ. ಒಟ್ಟಾರೆ, 254,317,341 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 30,057,432 ಸಕ್ರಿಯ ಪಾಸಿಟಿವ್ 89,517 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 259,776,211 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 55,864,519 ಪ್ರಕರಣಗಳು
ಭಾರತ: 34,889,132
ಬ್ರೆಜಿಲ್: 22,291,507
ಯುಕೆ: 13,100,458
ರಷ್ಯಾ: 10,537,966
ಫ್ರಾನ್ಸ್: 10,191,926
ಟರ್ಕಿ: 9,519,281
ಜರ್ಮನಿ: 7,196,154
ಸ್ಪೇನ್: 6,294,745
ಇಟಲಿ: 6,266,939

ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 847,162
ಬ್ರೆಜಿಲ್: 619,139
ಭಾರತ: 481,770
ರಷ್ಯಾ: 310,518
ಮೆಕ್ಸಿಕೋ: 299,525
ಯುಕೆ: 148,778
ಇಂಡೋನೇಷಿಯಾ: 144,097
ಇಟಲಿ: 137,513
ಕೊಲಂಬಿಯಾ: 129,986
ಫ್ರಾನ್ಸ್: 123,851

ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 41,518,472
ಭಾರತ: 34,284,561
ಬ್ರೆಜಿಲ್: 21,567,845
ಯುಕೆ: 10,365,262
ರಷ್ಯಾ: 9,524,039
ಟರ್ಕಿ: 9,086,637
ಫ್ರಾನ್ಸ್: 8,134,841
ಜರ್ಮನಿ: 6,441,000
ಇರಾನ್: 6,040,897
ಸ್ಪೇನ್: 5,056,955
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Recommended Video

      Mahindra SUV ಕಾರ್ ಮೇಲೆ ಅಟ್ಯಾಕ್ ಮಾಡಿದ ಹುಲಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+