ಜ.14: ವಿಶ್ವದೆಲ್ಲೆಡೆ ಕೊವಿಡ್19 ರಿಂದ ಎಷ್ಟು ಮಂದಿ ಗುಣಮುಖ?

ಬೆಂಗಳೂರು, ಜನವರಿ 14: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 321,737,292ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 264,677,370 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 270,219,572 ಪ್ರಕರಣಗಳು ಮುಕ್ತಾಯಗೊಂಡಿವೆ.

ಭಾರತದಲ್ಲಿ ಜನವರಿ 10, 2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭಾರತದಲ್ಲಿ 2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಯಿತು. ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 14) ಇಲ್ಲಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 109,345 ರೋಗಿಗಳು ಚೇತರಿಕೆ

ಭಾರತದಲ್ಲಿ 24 ಗಂಟೆಗಳಲ್ಲಿ 109,345 ರೋಗಿಗಳು ಚೇತರಿಕೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 264,202ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 36,582,129ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 485,350ಕ್ಕೆ ಏರಿಕೆಯಾಗಿದೆ, 34,824,706ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 109,345 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು

ಜನವರಿ 14ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 321,737,292 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 5,542,202 ಕ್ಕೇರಿದೆ. ಒಟ್ಟಾರೆ, 264,677,370 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 51,517,720 ಸಕ್ರಿಯ ಪಾಸಿಟಿವ್ 96,016 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 270,219,572 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು

ವಿಶ್ವದಲ್ಲಿ ಕೊವಿಡ್ 19 ಬಾಧಿತ ಟಾಪ್ 10
ಯುಎಸ್ಎ: 65,236,475 ಪ್ರಕರಣಗಳು
ಭಾರತ: 36,582,129
ಬ್ರೆಜಿಲ್: 22,815,827
ಯುಕೆ: 15,066,395
ಫ್ರಾನ್ಸ್: 13,240,304
ರಷ್ಯಾ: 10,747,125
ಟರ್ಕಿ: 10,271,240
ಇಟಲಿ: 8,341,898
ಸ್ಪೇನ್: 7,930,528
ಜರ್ಮನಿ: 7,829,104

ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊವಿಡ್ ಮೃತಪಟ್ಟವರನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: ಮೃತರ ಸಂಖ್ಯೆ 869,212
ಬ್ರೆಜಿಲ್: 620,609
ಭಾರತ: 485,350
ರಷ್ಯಾ: 319,911
ಮೆಕ್ಸಿಕೋ: 300,912
ಯುಕೆ: 151,612
ಇಂಡೋನೇಷಿಯಾ: 144,163
ಇಟಲಿ: 140,548
ಕೊಲಂಬಿಯಾ: 130,625
ಫ್ರಾನ್ಸ್: 126,530

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
ಯುಎಸ್ಎ: 42,911,490
ಭಾರತ: 34,824,706
ಬ್ರೆಜಿಲ್: 21,650,151
ಯುಕೆ: 11,208,701
ರಷ್ಯಾ: 9,809,300
ಟರ್ಕಿ: 9,488,337
ಫ್ರಾನ್ಸ್: 8,961,841
ಜರ್ಮನಿ: 6,914,700
ಇರಾನ್: 6,060,680
ಅರ್ಜೆಂಟೀನಾ: 5,780,655
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+