ಮಾ.26: ಕೊರೊನಾವೈರಸ್‌ಗೆ ಯಾವ ದೇಶದಲ್ಲಿ ಮೃತಪಟ್ಟವರು ಎಷ್ಟು ಜನ?

ನವದೆಹಲಿ, ಮಾರ್ಚ್ 26: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 480,164,995ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,144,249 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 414,597,310 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 31 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

12-18 ವಯಸ್ಸಿನವರ ಮೇಲೆ ನೊವಾವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

Covid 19 Info: Countries With Number of Infected, Deaths, recovered March 26

ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 26ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1660 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1660 ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 1660 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 95 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2349 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,018,032ಕ್ಕೆ ಏರಿಕೆಯಾಗಿದೆ. ಈ ಪೈಕಿ 42,480,436 ಸೋಂಕಿತರು ಗುಣಮುಖರಾಗಿದ್ದರೆ, 520,885 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 16,711 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 480,164,995 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,144,249 ಮಂದಿ ಪ್ರಾಣ ಬಿಟ್ಟಿದ್ದಾರೆ. 414,597,310 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 59,423,436 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,16,00,890

ಭಾರತ: 4,30,18,032

ಬ್ರೆಜಿಲ್: 2,98,02,257

ಫ್ರಾನ್ಸ್: 2,47,79,882

ಯುಕೆ: 2,06,91,123

ಜರ್ಮನಿ: 2,00,18,465

ರಷ್ಯಾ: 1,77,39,462

ಟರ್ಕಿ: 1,47,75,634

ಇಟಲಿ: 1,42,29,495

ಸ್ಪೇನ್: 1,14,97,711

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,03,198

ಬ್ರೆಜಿಲ್: 6,58,626

ಭಾರತ: 5,20,885

ರಷ್ಯಾ: 3,67,013

ಮೆಕ್ಸಿಕೋ: 3,22,634

ಪೆರು: 2,12,050

ಯುಕೆ: 1,64,454

ಇಟಲಿ: 1,58,582

ಇಂಡೋನೇಷಿಯಾ: 1,54,463

ಫ್ರಾನ್ಸ್: 1,41,564

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 6,40,70,163

ಭಾರತ: 4,24,80,436

ಬ್ರೆಜಿಲ್: 2,84,33,713

ಫ್ರಾನ್ಸ್: 2,28,70,434

ಯುಕೆ: 1,87,83,177

ಟರ್ಕಿ: 1,44,23,782

ರಷ್ಯಾ: 1,66,06,691

ಜರ್ಮನಿ: 1,56,46,000

ಅರ್ಜೆಂಟೀನಾ: 88,31,906

ಇರಾನ್: 68,46,230

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+