ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಅಂತ್ಯವಾಗಿಲ್ಲ: WHO ಎಚ್ಚರಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ 11: ಜಗತ್ತಿನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಇನ್ನೂ ಅಂತ್ಯವಾಗಿಲ್ಲ. ಭವಿಷ್ಯದಲ್ಲಿ ಮತ್ತಷ್ಟು ಕೊವಿಡ್-19 ರೂಪಾಂತರಗಳು ಹುಟ್ಟಿಕೊಳ್ಳುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಎಚ್ಚರಿಕೆ ನೀಡಿದ್ದಾರೆ.

"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿಕಸನ ಮತ್ತು ರೂಪಾಂತರವನ್ನು ಕಂಡುಕೊಂಡಿದ್ದೇವೆ. ಕಾಳಜಿಯ ರೂಪಾಂತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಅಗತ್ಯವಿದೆ. ಆದ್ದರಿಂದ ನಾವು ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಅಂತ್ಯ ಕಾಲದಲ್ಲಿಲ್ಲ," ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಕೊರೊನಾವೈರಸ್ ಕಾಲದಲ್ಲಿ ಗಂಗಾ ನದಿಯಲ್ಲಿ ತೇಲಿದ ಹೆಣಗಳ ಸಂಖ್ಯೆ ಎಷ್ಟು?
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 58 ಸಾವಿರಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 659 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 150,407 ಸೋಂಕಿತರು ಗುಣಮುಖರಾಗಿದ್ದಾರೆ.

COVID-19 Pandemic Has Not Ended as More Variants Expected: WHO Chief Scientist Alert

ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,536,137ಕ್ಕೆ ಏರಿಕೆಯಾಗಿದೆ. ಈ ಪೈಕಿ 41,331,158 ಸೋಂಕಿತರು ಗುಣಮುಖರಾಗಿದ್ದರೆ, 507,208 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 697,771 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯುಪಿ ನದಿಯಲ್ಲಿ ಹೆಣಗಳು ತೇಲುತ್ತಿದ್ದರೆ, ಜಾಹೀರಾತಿಗೆ ಕೋಟಿ ಕೋಟಿ ಖರ್ಚು: ಕೇಜ್ರಿವಾಲ್ ಯುಪಿ ನದಿಯಲ್ಲಿ ಹೆಣಗಳು ತೇಲುತ್ತಿದ್ದರೆ, ಜಾಹೀರಾತಿಗೆ ಕೋಟಿ ಕೋಟಿ ಖರ್ಚು: ಕೇಜ್ರಿವಾಲ್

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

Recommended Video

ಟೀಂ‌ ಇಂಡಿಯಾ ಮತ್ತು ರವಿಶಾಸ್ತ್ರಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ Ajinkya Rahane | Oneindia Kannada

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 407,041,806 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,810,892 ಮಂದಿ ಪ್ರಾಣ ಬಿಟ್ಟಿದ್ದಾರೆ. 327,130,520 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 74,100,394 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

English summary
Discription: Covid-19 Pandemic has not ended as more variants expected: WHO chief scientist Alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X