• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1800ರ ಗಡಿ ದಾಟಿದ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ

|
      Deadly Coronavirus still haunting China | Oneindia Kannada

      ಬಿಜಿಂಗ್, ಫೆಬ್ರವರಿ 18: ಚೀನಾದಲ್ಲಿ ತೀವ್ರ ತಲ್ಲಣ ಸೃಷ್ಠಿಸಿರುವ ಕೊರೊನಾದಿಂದ (ಕೋವಿದ್19) ಮೃತಪಟ್ಟವರ ಸಂಖ್ಯೆ ಸೋಮವಾರ ಅಂತ್ಯಕ್ಕೆ 1800 ಗಡಿ ದಾಟಿದೆ. ಸುಮಾರು 80 ಸಾವಿರ ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಚೀನಾ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

      ಸೋಮವಾರವೂ ಒಂದು ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವುನೋವಿನ ಸಂಖ್ಯೆಗಳು ಹೆಚ್ಚಾಗುವ ಸಂಭವವಿದೆ ಎಂದು ಚೀನಾ ಸರ್ಕಾರದ ರಾಷ್ಟ್ರೀಯ ಆರೋಗ್ಯ ಸಮಿತಿ ಹೇಳಿದೆ.

      ಕೊರೊನಾದಿಂದ ಮುಕ್ತಿ ಪಡೆದ ವಿದ್ಯಾರ್ಥಿನಿ; ಇದು ಭಾರತದಲ್ಲಿ ಮೊದಲು!

      ಚೀನಾದಲ್ಲಿ ಕೊರೊನಾದಿಂದ ಮೃತಪಟ್ಟರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದ್ದು, ಚೀನಾ ಸೇರಿದಂತೆ ಜಗತ್ತಿನ ಯಾವುದೇ ದೇಶಗಳು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಕೊರೊನಾದ ತೀವ್ರಗತಿಯ ಏರಿಕೆ ಸಾಂಕ್ರಾಮಿಕ ರೋಗಗಳ ದೊಡ್ಡ ಬದಲಾವಣೆಯನ್ನು ಪ್ರತಿನಿಧಿಸುವುದಿಲ್ಲ ಎಂದು ಡಬ್ಲೂ ಎಚ್ ಓ ಹೇಳಿದೆ.

      ಕೊರೊನಾ ಹರಡದಂತೆ ತಡೆಯುವಲ್ಲಿ ಚೀನಾ ಸರ್ಕಾರ ಚಿಂತಾಕ್ರಾಂತವಾಗಿದೆ ಎಂದು ಕೆಲ ವರದಿಗಳು ಹೇಳಿವೆ. ವುಹಾನ್ ನಗರದಲ್ಲಿ ಸಾವಿನ ಸಂಖ್ಯೆ ಐನೂರರ ಗಡಿ ದಾಟುತ್ತೆ ಎಂದು ತಿಳಿದು ಬಂದಿದೆ. ಈ ಭಯಾನಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಎಲ್ಲ ಅಗತ್ಯ ಕ್ರಮಗಳನ್ನೂ ಚೀನಾ ಸರ್ಕಾರ ಸಾದ್ಯ ಇರುವ ಎಲ್ಲ ಅಗತ್ಯಗಳನ್ನೂ ಪರಿಶೀಲಿಸುತ್ತಿದೆ ಎಂದು ವರದಿಗಳು ಹೇಳಿವೆ.

      English summary
      Deadly Coronavirus Deaths Crossed 1800. China National Health Council Confirms it.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X
      We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
      X