ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ಜೈಲು ಸೇರಿದ ಬಳಿಕ ಗಲಭೆ, 70ಕ್ಕೂ ಹೆಚ್ಚು ಮಂದಿ ಸಾವು

|
Google Oneindia Kannada News

ಜೋಹಾನ್ಸ್‌ಬರ್ಗ್, ಜುಲೈ 14: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಜೈಲಿಗೆ ಕಳುಹಿಸಿದ ಬೆನ್ನಲ್ಲೇ ಗಲಭೆ ಶುರುವಾಗಿದೆ. ಹಿಂಸಾಚಾರದಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ, 1234 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರಿಗೆ 15 ತಿಂಗಳು ಜೈಲು ಶಿಕ್ಷೆಯಾಗಿದೆ. ಅವರನ್ನು ಜೈಲಿಗೆ ಕಳುಹಿಸಿದ ನಂತರ ಹಿಂಸಾಚಾರ, ಗಲಭೆ ಹೆಚ್ಚಾಗಿದೆ.

ಗೌಟೆಂಗ್ ಹಾಗೂ ಕ್ವಾಜುಲು-ನಟಾಲ್ ಪ್ರಾಂತ್ಯಗಳಲ್ಲಿ ಕಳೆದ ಐದು ದಿನಗಳಿಂದ ಗಲಭೆ, ಅಂಗಡಿಗಳ ಲೂಟಿ ನಡೆಯುತ್ತಿದೆ, ಮಂಗಳವಾರವೂ ಈ ಪ್ರಾಂತ್ಯದಲ್ಲಿ ಅಂಗಡಿಗಳ ಲೂಟಿ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಧ್ಯಕ್ಷ ಸಿರಿಲ್ ರಾಮ್ಪೊಸಾ ಅವರು ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ.

Provided by Deutsche Welle

ಜೊಹಾನ್ಸ್‌ಬರ್ಗ್‌ ಹೊರವಲಯದ ಸೊವೆಟೊದಲ್ಲಿ ಗಲಭೆಕೋರರು ಲೂಟಿ ಮಾಡಿದ್ದಾರೆ, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ.

ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಡೆದ ಗಲಭೆ, ಹಿಂಸಾಚಾರದಲ್ಲಿ 27 ಜನರು ಮೃತಪಟ್ಟಿದ್ದಾರೆ. ಗೌಟೆಂಗ್ ಪ್ರಾಂತ್ಯದಲ್ಲಿ 45 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಮೂರು ಪ್ರಾಂತ್ಯಗಳಲ್ಲಿನ ಗಲಭೆ, ಕಾಲ್ತುಳಿತದಲ್ಲಿ ಸತ್ತವರ ಸಂಖ್ಯೆ 72ಕ್ಕೆ ಏರಿದಂತಾಗಿದೆ.

English summary
More than 70 people have died after demonstrators took to the street of South Africa to protest the imprisonment of former President Jacob Zuma. It rapidly escalated into looting and riots.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X