ಏರ್ ಇಂಡಿಯಾ ವಿಮಾನ ದುರಂತ ಮಾಸುವ ಮುನ್ನ ಮತ್ತೊಂದು ವಿಮಾನದ ಇಂಜಿನ್‌ನಲ್ಲಿ ಬೆಂಕಿ; ವಿಡಿಯೋ ಭಾರೀ ವೈರಲ್
ಅಹಮದಾಬಾದ್ ವಿಮಾನ ದುರಂತ ಮಾಸುವ ಬೆನ್ನಲ್ಲೇ ಮತ್ತೊಂದು ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಡೆಲ್ಟಾ ಏರ್‌ಲೈನ್ಸ್‌ನ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಈ ವಿಮಾನವು ಶುಕ್ರವಾರ ಅಟ್ಲಾಂಟಾಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಮಾನದಲ್ಲಿ 200ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಸುಮಾರು 25 ವರ್ಷ ಹಳೆಯದಾದ ಬೋಯಿಂಗ್ 767 ವಿಮಾನವು ಲ್ಯಾಕ್ಸ್‌ನಿಂದ ಹೊರಟಿದ್ದು, ಆ ವೇಳೆ ವಿಮಾನ ಸಿಬ್ಬಂದಿ ಎಡ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಪತ್ತೆಹಚ್ಚಿದ್ದರು. ಬಳಿಕ ತಕ್ಷಣವೇ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು ಮತ್ತು ತಕ್ಷಣದ ವಾಪಸಾತಿಗಾಗಿ ವಾಯು ಸಂಚಾರ ನಿಯಂತ್ರಣದೊಂದಿಗೆ ಸಮನ್ವಯ ಸಾಧಿಸಿದರು. ಸುರಕ್ಷತಾ ಪರಿಶೀಲನಾ ಪಟ್ಟಿಗಳನ್ನು ಪೂರ್ಣಗೊಳಿಸಲು ಹಾಗೂ ಇಳಿಯುವಿಕೆಗೆ ಸಿದ್ಧರಾಗಲು ವಿಮಾನವು ಆರಂಭದಲ್ಲಿ ಪೆಸಿಫಿಕ್ ಮಹಾಸಾಗರದ ಮೇಲೆ ಹಾರಿಸಲಾಯಿತು. ಬಳಿಕ ತುರ್ತು ಭೂಸ್ಪರ್ಷ ಮಾಡಲಾಯಿತು.
ವಿಮಾನ ಲ್ಯಾಂಡ್ ಆದ ತಕ್ಷಣವೇ ಆಗ್ನಿ ಶಾಮಕ ಹಾಗೂ ತುರ್ತು ಸಿಬ್ಬಂದಿ ಎಲ್ಲಾ ಸಿದ್ಧತೆ ಮಾಡಿಕೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸದ್ಯ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಹಾನಿ ಆಗಿಲ್ಲ ಎಂದು ವರದಿಯಾಗಿದೆ. ಇನ್ನು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ತುರ್ತು ಲ್ಯಾಂಡಿಂಗ್: ಇತ್ತೀಚೆಗಷ್ಟೇ ದೆಹಲಿಯಿಂದ ಗೋವಾಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಇದ್ದಕ್ಕಿದ್ದಂತೆ ಎಂಜಿನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಗದ್ದಲ ಉಂಟಾದ ಪರಿಣಾಮ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು.
ಇಂಡಿಗೋ ವಿಮಾನ 6E 6271 ದೆಹಲಿಯಿಂದ ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತಯ. ವಿಮಾನದ ನಿಗದಿತ ಲ್ಯಾಂಡಿಂಗ್ ಸಮಯ ರಾತ್ರಿ 9:42 ಆಗಿತ್ತು, ಆದರೆ, ಪೈಲಟ್ ರಾತ್ರಿ 9:25ಕ್ಕೆ ಅಪಾಯದ ಸಂಕೇತ ನೀಡಿದರು. ಬಳಿಕ ವಿಮಾನವನ್ನು ರಾತ್ರಿ 9:52ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.
ಮಾಹಿತಿ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನ 6E 6271 ರ ಪೈಲಟ್ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡುವ ಮೊದಲು ಒಂದು ಎಂಜಿನ್‌ನಲ್ಲಿ ಅಸಮರ್ಪಕ ಕಾರ್ಯ ಕಂಡುಬಂದ ಕಾರಣ 'ಪ್ಯಾನ್ ಪ್ಯಾನ್ ಪ್ಯಾನ್' ಎಂದು ಕೂಗಿದ್ದರು.
ಇದರರ್ಥ ಮಾರಣಾಂತಿಕ ತುರ್ತು ಪರಿಸ್ಥಿತಿಯನ್ನು ಸೂಚಿಸುವ ತುರ್ತು ಸಂದೇಶವಾಗಿದೆ.
ಈ ಏರ್‌ಬಸ್ A320 ನಿಯೋ ವಿಮಾನವು 2 ಇಂಜಿನ್‌ಗಳನ್ನು ಹೊಂದಿದ್ದು, ಅಂತಹ ವಿಮಾನಗಳು ಒಂದು ಎಂಜಿನ್‌ನಲ್ಲಿಯೂ ಸಹ ಸುರಕ್ಷಿತವಾಗಿ ಇಳಿಯುವ ಸಾಮರ್ಥ್ಯವನ್ನು ಹೊಂದಿವೆ. ಆ ವೇಳೆಯೂ ಅದೇ ಸಂಭವಿಸಿತ್ತು. ಸದ್ಯ ಎಲ್ಲಾ ಸಿಬ್ಬಂದಿ ಮತ್ತು ಪ್ರಯಾಣಿಕರು ಯಾವುದೇ ಹಾನಿಯಾಗದೇ ಸುರಕ್ಷಿತ ಆಗಿದ್ದರು ಎಂದು ತಿಳಿದುಬಂದಿತ್ತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications