Breaking News: ಉದ್ಯಮಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ನವದೆಹಲಿ, ಜೂನ್ 03: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಪ್ರಕರಣದಲ್ಲಿ ಜಾಮೀನು ನೀಡುವುದಕ್ಕೆ ಡೊಮಿನಿಕಾ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಹೈಕೋರ್ಟ್ ಮೊರೆ ಹೋಗುವುದಾಗಿ ಉದ್ಯಮಿ ಮೆಹುಲ್ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದಕ್ಕೂ ಮೊದಲು ನಡೆದ ಹೈಕೋರ್ಟ್ ವಿಚಾರಣೆಯಲ್ಲಿ ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಭಾರತಕ್ಕೆ ಗಡಿಪಾರು ಮಾಡಲಾಗುವುದು ಎಂದು ಡೊಮಿನಿಕಾ ಸರ್ಕಾರ ತಿಳಿಸಿತ್ತು.
ಭಾರತದ ಬ್ಯಾಂಕಿಗೆ ವಂಚಿಸಿರುವ 62 ವರ್ಷದ ಆರೋಪಿ ಸಲ್ಲಿಸಿರುವ ಅರ್ಜಿ ಸಮರ್ಥನೀಯಲ್ಲ. ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೊಳಪಡಿಸಬಾರದು ಎಂದು ಡೊಮಿನಿಕಾ ಪಬ್ಲಿಕ್ ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಭಾರತವು ಈಗಾಗಲೇ ಅವರನ್ನು ಗಡೀಪಾರು ಮಾಡುವಂತೆ ಕೋರಿದ್ದು, ಮೆಹುಲ್ ಚೋಕ್ಸಿ ಭಾರತೀಯ ಪ್ರಜೆಯಾಗಿ ಮುಂದುವರಿಯಲಿದ್ದಾರೆ ಎಂದು ಡೊಮಿನಿಕಾ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಹಾಜರುಪಡಿಸಿ ಎಂದಿದ್ದ ಹೈಕೋರ್ಟ್:
ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಅಕ್ರಮವನ್ನು ಬಂಧಿಸಲಾಗಿದ್ದು, ಅದಾಗಿ 72 ಗಂಟೆಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಎದುರಿಗೆ ಹಾಜರುಪಡಿಸಬೇಕಿತ್ತು. ಆದರೆ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿಲ್ಲ ಎನ್ನುವುದು ದೃಢಪಟ್ಟಿದೆ ಎಂದು ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದರ ಜೊತೆಗೆ ಸ್ಥಳೀಯ ಸಮಯ 4 ಗಂಟೆಯೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸುವಂತೆ ನೀಡಿರುವ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಭಾರತೀಯ ಸರ್ಕಾರ ಹಾಗೂ ಗಡೀಪಾರು ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ ಎನ್ನುವ ಬಗ್ಗೆ ಹಲವು ಸ್ಥಳೀಯ ಮಾಧ್ಯಮಗಳ ವರದಿಗಳ ಬಗ್ಗೆ ಅವರು ಮಾತನಾಡಿದ್ದರು.
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications