Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ನಡುವಿನ ಯುದ್ಧವು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಯುದ್ಧದ ವ್ಯಾಪ್ತಿಯು ವಿಸ್ತಾರಗೊಳ್ಳುತ್ತಿದೆ. ಯುರೋಪಿಯನ್ ರಾಷ್ಟ್ರಗಳಿಗೂ ಈ ಯುದ್ಧ ವ್ಯಾಪಿಸುತ್ತಿದ್ದು, ವಿಶ್ವದ ಅತ್ಯಂತ ಸುರಕ್ಷಿತ ದೇಶ ಎಂಬ ಖ್ಯಾತಿ ಗಳಿಸಿದ್ದ ದುಬೈನ ಮೇಲೂ ಈ ಯುದ್ಧ ತೀವ್ರ ಪರಿಣಾಮ ಬೀರಿದೆ. ಈ ರೀತಿಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಯುದ್ಧವು ಸದ್ಯಕ್ಕೆ ಮುಗಿಯುವುದಿಲ್ಲ ಎನ್ನುವ ಮುನ್ಸೂಚನೆಯನ್ನು ಅವರು ಕೊಟ್ಟಿದ್ದಾರೆ. ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಹಾಗೂ ಯುದ್ಧದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಇರಾನ್ ಜೊತೆಗಿನ ಯುದ್ಧದಲ್ಲಿ ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆಯೇ ಯುದ್ಧದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕುವೈತ್‌ನಲ್ಲಿರುವ ಅಮೆರಿಕದ ಸಿಬ್ಬಂದಿ ಇರಾನ್ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧ ಡೊನಾಲ್ಡ್ ಟ್ರಂಪ್ ಹೇಳಿದ್ದೇನು
ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ನಮ್ಮ ಎಲ್ಲಾ ಉದ್ದೇಶಗಳನ್ನು ಸಾಧಿಸುವವರೆಗೆ ಮಿಲಿಟರಿ ಕಾರ್ಯಾಚರಣೆ ಮುಂದುವರಿಯುತ್ತದೆ. ಅಲ್ಲದೆ ಹೆಚ್ಚಿನ ಸಾವು - ನೋವುಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಈ ಯುದ್ಧವು ಕನಿಷ್ಠ ನಾಲ್ಕು ವಾರಗಳ ಅವಧಿಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಒಂದೊಮ್ಮೆ ಕಡಿಮೆಯೂ ಆಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಇರಾನ್‌ನೊಂದಿಗೆ ಮಾತನಾಡಲು ಒಪ್ಪಿಕೊಂಡಿರುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದು, ಮಿಲಿಟರಿ ಕಾರ್ಯಾಚರಣೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಡೆಯುತ್ತಿದೆ ಎಂದಿದ್ದಾರೆ. ಖಮೇನಿಯವರ ಸಂಭಾವ್ಯ ಉತ್ತರಾಧಿಕಾರಿಗಳು ದಾಳಿಗಳಲ್ಲಿ ಕೊಲ್ಲಲ್ಪಟ್ಟರು ಎಂದು ಟ್ರಂಪ್ ಹೇಳಿದ್ದಾರೆ.
ಆರಂಭಿಕ ದಾಳಿಯಲ್ಲಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಇಸ್ಲಾಮಿಕ್ ಗಣರಾಜ್ಯದ ಆಡಳಿತದ ಸುಮಾರು 40 ಹಿರಿಯ ಸದಸ್ಯರೆಲ್ಲರನ್ನು ಕೊಲ್ಲಲಾಗಿದೆ. ಸಿಐಎ ತಿಂಗಳುಗಳಿಂದ ಸಂಗ್ರಹಿಸಿದ ಗುಪ್ತಚರ ಮಾಹಿತಿ ಮತ್ತು ಇಸ್ರೇಲಿ ಸಹವರ್ತಿಗಳೊಂದಿಗೆ ಹಂಚಿಕೊಂಡ ಮಾಹಿತಿಯು ಖಮೇನಿ ಹಾಗೂ ಪ್ರಮುಖ ನಾಯಕರ ಮೇಲೆ ಕ್ಷಿಪಣಿ ದಾಳಿ ಮಾಡುವುದಕ್ಕೆ ಕಾರಣವಾಯಿತು ಎಂದು ಅಮೆರಿಕದ ಸೇನಾಪಡೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.
ಉತ್ತರಾಧಿಕಾರಿಯನ್ನೂ ಬಿಟ್ಟಿಲ್ಲ!
ಇರಾನ್‌ನ ಮೇಲೆ ನಡೆಸಲಾಗಿರುವ ದಾಳಿಗಳು ಅತ್ಯಂತ ಯಶಸ್ವಿಯಾಗಿ ನಡೆದಿವೆ. ಯಾಕೆಂದರೆ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯ ಮಾತ್ರವಲ್ಲ ಆತನ ಉತ್ತರಾಧಿಕಾರಿಗಳು ಸಹ ಈ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಮೂರನೇ ಹಾಗೂ ನಾಲ್ಕನೇ ಸ್ಥಾನದ ಅಭ್ಯರ್ಥಿಗಳು ಸಹ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೊಂಡಿದ್ದಾರೆ.
ಭವಿಷ್ಯದಲ್ಲಿ ಇರಾನ್ ದೇಶವನ್ನು ಯಾರು ಮುನ್ನಡೆಸಬಹುದು ಎನ್ನುವುದಕ್ಕೆ ಮೂರು ಉತ್ತಮ ಆಯ್ಕೆಗಳಿವೆ ಎಂದಿದ್ದಾರೆ. ಆದರೆ ಆ ವ್ಯಕ್ತಿಗಳು ಯಾರು ಎನ್ನುವುದನ್ನು ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿಲ್ಲ. ಖಮೇನಿ ಅವರಿಗೆ ಸ್ಪಷ್ಟ ಉತ್ತರಾಧಿಕಾರಿ ಇರಲಿಲ್ಲ ಎನ್ನುವ ಮಾತು ಸಹ ಇದೇ ಸಂದರ್ಭದಲ್ಲಿ ಕೇಳಿ ಬಂದಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದೇನು
ಇನ್ನು ಯುದ್ಧ ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, ಇರಾನ್‌ನ ಮೇಲೆ ಇಸ್ರೇಲ್ ಇನ್ನಷ್ಟು ತೀವ್ರ ದಾಳಿಗಳನ್ನು ಮಾಡಲಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ ಎಂದಿದ್ದಾರೆ.












Click it and Unblock the Notifications