Donald Trump: ಭಾರತಕ್ಕೆ ಭೇಟಿ ನೀಡಲು ಡೊನಾಲ್ಡ್ ಟ್ರಂಪ್ ಯೋಜನೆ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಡೊನಾಲ್ಡ್ ಟ್ರಂಪ್ ಸಜ್ಜಾಗಿದ್ದಾರೆ. ಈಗಾಗಲೇ ಅಮೆರಿಕದಲ್ಲಿ ಟ್ರಂಪ್ ಸ್ವಾಗತಕ್ಕೆ ಜನ ಸಜ್ಜಾಗಿದ್ದಾರೆ. ಜನವರಿ 20 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ 2ನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಡೀ ಜಗತ್ತಿನ ಗಮನ ಇದೀಗ ಅಮೆರಿಕದತ್ತ ನೆಟ್ಟಿದೆ, ಟ್ರಂಪ್ ಅಧ್ಯಕ್ಷರಾದ ತೆಗೆದುಕೊಳ್ಳುವ ನಿರ್ಧಾರಗಳು ಜಗತ್ತಿನ ದೇಶಗಳ ಮೇಲೂ ಪರಿಣಾಮ ಬೀರುವುದರಿಂದ ಅವರ ಪ್ರಮಾನ ವಚನ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ.

ಕಳೆದ ಬಾರಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಭಾರತದ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಈ ಬಾರಿ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ಗೆ ಭಾರತೀಯ ಮೂಲದವರು ಕೂಡ ಬೆಂಬಲ ಕೊಟ್ಟಿದ್ದರು. ಇದೀಗ ಅಧ್ಯಕ್ಷರಾದ ಬಳಿಕ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ವರದಿಯಾಗಿದೆ.

Donald trump india visit pm modi white house invite

ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಬಗ್ಗೆ ತಮ್ಮ ಸಲಹೆಹಾರರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಶನಿವಾರ ವರದಿಯಾಗಿದೆ. ಭಾರತ ಮಾತ್ರವಲ್ಲದೆ ಚೀನಾ ಜೊತೆಗಿನ ಸಂಬಂಧವನ್ನು ಗಟ್ಟಿಗೊಳಿಸಲು ಟ್ರಂಪ್ ಯೋಜಿಸಿದ್ದು, ಚೀನಾಗೂ ಭೇಟಿ ನೀಡಲು ಬಯಸಿದ್ದಾರೆ ಎಂದು ವರದಿ ತಿಳಿಸಿದೆ.

ಚುನಾವಣೆ ಸಂದರ್ಭದಲ್ಲಿ ಚೀನಾಗೆ ಬೆದರಿಕೆ

ಯುಎಸ್ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚೀನಾದ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು. ಈಗ ಅಧ್ಯಕ್ಷರಾಗಲು ಸಜ್ಜಾಗಿರುವ ಅವರು, ಚೀನಾ ಜೊತೆಗೆ ಸಂಬಂಧ ಸುಧಾರಿಸಲು ಬಯಸಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಜೊತೆಗಿನ ಸಂಬಂಧವನ್ನು ಸುಧಾರಿಸಲು ಬಯಸುತ್ತಾರೆ ಎಂದರು ಹೇಳಿದರು.

ಶೀಘ್ರದಲ್ಲೇ ಭಾರತಕ್ಕೆ ಭೇಟಿ?

ಟ್ರಂಪ್‌ ಭಾರತಕ್ಕೆ ಭೇಟಿ ನೀಡುವ ಬಗ್ಗೆ ಸಲಹೆಗಾರರ ಜೊತೆ ಚರ್ಚಿಸಿದ್ದಾರೆ ಎಂದು ಆಪ್ತರು ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ. ಏಪ್ರಿಲ್ ಆರಂಭದಲ್ಲಿ ಅಥವಾ ವರ್ಷದ ಕೊನೆಯಲ್ಲಿ ಅವರು ಭಾರತಕ್ಕೆ ಭೇಟಿ ನೀಡಬಹುದು ಎಂದು ವರದಿಯಾಗಿದೆ.

ಶ್ವೇತಭವನದಲ್ಲಿ ನಡೆಯಲಿರುವ ಮಹತ್ವದ ಸಭೆಗೆ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡುವ ಸಾಧ್ಯತೆ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿ ತಿಳಿಸಿದೆ.

ಡಿಸೆಂಬರ್ ನಲ್ಲಿ ಮಾತುಕತೆ

ಡಿಸೆಂಬರ್ ತಿಂಗಳಿನಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ವಾಷಿಂಗ್ಟನ್ ಡಿಸಿಗೆ ಭೇಟಿ ನಿಡಿದ್ದ ಸಂದರ್ಭದಲ್ಲಿ ಈ ಬಗ್ಗೆ ಮೊದಲ ಹಂತದ ಮಾತುಕತೆ ನಡೆದಿದೆ. ಎಸ್ ಜೈಶಂಕರ್ ಡೊನಾಲ್ಡ್‌ ಟ್ರಂಪ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್‌ನ ನಾಯಕರನ್ನು ಒಳಗೊಂಡ ಕ್ವಾಡ್ ಶೃಂಗಸಭೆಯನ್ನು ಭಾರತ ಆಯೋಜಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+