Donald Trump: ಡೊನಾಲ್ಡ್ ಟ್ರಂಪ್‌ಗೆ ಭಾರಿ ಭದ್ರತೆ, ಮತ್ತೆ ಜೀವ ಭಯ?

ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ಸಮಸ್ಯೆ ಎದುರಿಸುತ್ತಿದ್ದು, ಈಗಾಗಲೇ 2 ಬಾರಿ ಅವರ ಮೇಲೆ ಹತ್ಯೆ ಯತ್ನ ಮಾಡಲಾಗಿದೆ ಎಂದು ಆರೋಪಗಳು ಕೂಡ ಕೇಳಿಬಂದಿವೆ. ಅದರಲ್ಲೂ ಒಂದು ಬಾರಿ ಚುನಾವಣಾ ಪ್ರಚಾರದ ಭಾಷಣ ಮಾಡುವಾಗಲೇ ಟ್ರಂಪ್ ಮೇಲೆ ಗುಂಡಿನ ದಾಳಿ ಆಗಿತ್ತು. ಹೀಗಿದ್ದಾಗ ಕೆಲವು ದಿನಗಳ ಹಿಂದಷ್ಟೇ ಮತ್ತೊಮ್ಮೆ ಟ್ರಂಪ್ ಮೇಲೆ ದಾಳಿ ಪ್ರಯತ್ನ ಆಗಿತ್ತು. ಹೀಗಾಗಿ ಇದೀಗ ಡೊನಾಲ್ಡ್ ಟ್ರಂಪ್ ಅವರಿಗೆ ಭದ್ರತೆ ನೀಡುತ್ತಿರುವ ಅಧಿಕಾರಿಗಳು ಎಲ್ಲೆಲ್ಲೂ ಹದ್ದಿನ ಕಣ್ಣು ಇಟ್ಟಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಇನ್ನೇನು ಕೊನೆಯಾಗುತ್ತಿದೆ, ಇನ್ನೊಂದು ತಿಂಗಳಲ್ಲಿ ಆ ದೇಶದ ಹೊಸ ಅಧ್ಯಕ್ಷ ಯಾರು? ಅನ್ನೊದು ಕನ್ಫರ್ಮ್ ಆಗಲಿದೆ. ಹೀಗಿದ್ದಾಗ ಅಮೆರಿಕದಲ್ಲಿ ಹೊಸ ಹೊಸ ಸಮಸ್ಯೆ ಹುಟ್ಟಿಕೊಳ್ಳುತ್ತಿವೆ. ಅದರಲ್ಲೂ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಆಗಿರುವ ಡೊನಾಲ್ಡ್ ಟ್ರಂಪ್ ಹತ್ಯೆಗೆ ಎರಡು ಬಾರಿ ಈಗಾಗಲೇ ಪ್ರಯತ್ನ ಮಾಡಲಾಗಿದೆ. ಪರಿಸ್ಥಿತಿ ಹೀಗಿದ್ದಾಗ ಡೊನಾಲ್ಡ್ ಟ್ರಂಪ್ ಅವರ ಕುರಿತು ಮತ್ತಷ್ಟು ಹೆಚ್ಚಿನ ಕಾಳಜಿ ಕೈಗೊಳ್ಳಲಾಗಿದ್ದು, ಅಮೆರಿಕದ ಮಾಜಿ ಅಧ್ಯಕ್ಷ & ಹಾಲಿ ಅಭ್ಯರ್ಥಿ ಟ್ರಂಪ್ ಅವರ ಭದ್ರತೆಯನ್ನ ಇನ್ನಷ್ಟು ಹೆಚ್ಚಿಸಲಾಗಿದೆ.

Donald Trump Security Guards Are Watching Everything After Assassination Attempt

ಅಧ್ಯಕ್ಷೀಯ ಸ್ಥಾನಕ್ಕೆ ಬಿಗ್ ಫೈಟ್!

ಡೊನಾಲ್ಡ್ ಟ್ರಂಪ್ & ಭಾರತ ಮೂಲದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ನಡುವೆ ಈ ಬಾರಿ ಭರ್ಜರಿ ಪೈಪೋಟಿ ನಡೆಯುತ್ತಿದೆ. ಒಂದು ಕಡೆ ಡೊನಾಲ್ಡ್ ಟ್ರಂಪ್ ಮತ್ತೊಂದು ಬಾರಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆ ಆಗಬೇಕು ಅಂತಾ ಮುನ್ನುಗ್ಗುತ್ತಿದ್ದಾರೆ. ಹಾಗೇ ಇನ್ನೊಂದು ಕಡೆ ಕಮಲಾ ಹ್ಯಾರಿಸ್ ಅವರು ಕೂಡ ಅಮೆರಿಕ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಯಾಕಂದ್ರೆ ಇದುವರೆಗೂ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇತಿಹಾಸದಲ್ಲೇ ಯಾವುದೇ ಮಹಿಳಾ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಕಮಲಾ ಹ್ಯಾರಿಸ್ ಈಗ ಗೆದ್ದು ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ.

ಯುವ ಮತದಾರರೇ ನಿರ್ಣಾಯಕ!

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಇದೀಗ ಯುವ ಮತದಾರರೇ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಯಾಕಂದ್ರೆ ಅಮೆರಿಕದ ಅಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಶಕ್ತಿ ದೊಡ್ಡದಾಗಿದೆ. ಹೀಗಾಗಿ ಕಮಲಾ ಹ್ಯಾರಿಸ್ & ಡೊನಾಲ್ಡ್ ಟ್ರಂಪ್ ನಡುವೆ ಸಿಕ್ಕಾಪಟ್ಟೆ ಫೈಟಿಂಗ್ ನಡೆಯುತ್ತಿದೆ. ಮತ್ತೊಂದು ಕಡೆ ಕಮಲಾ ಹ್ಯಾರಿಸ್ ಪರವಾಗಿ ದಿನದಿಂದ ದಿನಕ್ಕೆ ಬೆಂಬಲ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಡೊನಾಲ್ಡ್ ಟ್ರಂಪ್ ಕೂಡ ತಮ್ಮ ಪ್ರಚಾರ ರೀತಿ & ಸ್ಟ್ರಾಟಜಿ ಬದಲಾಯಿಸಿಕೊಂಡು ಮುನ್ನುಗ್ಗುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+