Donald Trump: ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸಮಾರಂಭ- ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗಿ
ಜನವರಿ 20ರಂದು ವಾಷಿಂಗ್ಟನ್‌ನಲ್ಲಿ ನಡೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಲ್ಲದೆ ಟ್ರಂಪ್-ವ್ಯಾನ್ಸ್ ಉದ್ಘಾಟನಾ ಸಮಿತಿಯ ಆಹ್ವಾನದ ಮೇರೆಗೆ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು, ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಜೆ. ಟ್ರಂಪ್ ಅವರ ಪ್ರಮಾಣವಚನ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೈಶಂಕರ್ ಅವರು ತಮ್ಮ ಭೇಟಿಯ ಸಮಯದಲ್ಲಿ ಆಡಳಿತದ ಪ್ರತಿನಿಧಿಗಳು ಮತ್ತು ಇತರ ಗಣ್ಯರನ್ನು ಸಹ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಮೆರಿಕದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭ ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ನಡೆಯಲಿದೆ. ಇದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆಡಿ ವ್ಯಾನ್ಸ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜನವರಿ 20 ರಂದು ಮಧ್ಯಾಹ್ನ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್‌ನ ಕ್ಯಾಪಿಟಲ್‌ನ ಮೆಟ್ಟಿಲುಗಳ ಮೇಲೆ ಅಮೆರಿಕದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಗಳ ಭಾಗವಾಗಿ 100 ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಅಮೆರಿಕದ ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಗುವುದು. 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರ ವಿಜಯವನ್ನು ಜನವರಿ 6ರಂದು ಯುನೈಟೆಡ್ ಸ್ಟೇಟ್ಸ್ ಕಾಂಗ್ರೆಸ್ ಪ್ರಮಾಣೀಕರಿಸಿತು. ಇದು ಅವರು ಶ್ವೇತಭವನಕ್ಕೆ ಮರಳಲು ದಾರಿ ಮಾಡಿಕೊಟ್ಟಿದೆ.
ಜನವರಿ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ಜೊತೆಗೆ, ಅಮೆರಿಕದಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ದಿನವನ್ನು ಸಹ ಆಚರಿಸಲಾಗುತ್ತದೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10:30 ಕ್ಕೆ ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಅವಧಿಯಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಯಾರಿಗೆಲ್ಲಾ ಆಹ್ವಾನ?
ಜನವರಿ 20ರಂದು ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ಅರ್ಜೆಂಟೀನಾ ಅಧ್ಯಕ್ಷ -ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೀಶಿ ಇವಾಯಾ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾಗವಹಿಸಲಿದ್ದಾರೆ. ಇನ್ನೂ ಎರಿಕ್ ಜೆಮ್ಮೌರ್(ಫ್ರಾನ್ಸ್), ಬ್ರಿಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೋ ಹಾಗೂ ನಿಗೆಲ್ ಫರಾಜ್ (ಯುಕೆ) ಸೇರಿದಂತೆ ಬಲ ಪಂಥೀಯ ನಾಯಕರು ಭಾಗಿಯಾಗಲಿದ್ದಾರೆ.
ಯಾರು ಗೈರಾಗುತ್ತಾರೆ?
ಇನ್ನೂ ಜನವರಿ 20ರಂದು ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗಲಿದ್ದಾರೆ.












Click it and Unblock the Notifications