ಇಸ್ರೇಲ್ - ಇರಾನ್ ನಡುವಿನ ಯುದ್ಧದ ಬಗ್ಗೆ ಮಹತ್ವ ಟ್ವೀಟ್ ಮಾಡಿದ ಡೊನಾಲ್ಡ್ ಟ್ರಂಪ್!
ಇಸ್ರೇಲ್ ಹಾಗೂ ಇರಾನ್ ದೇಶದ ನಡುವೆ ಯುದ್ಧ ಹೆಚ್ಚಾಗುತ್ತಿದ್ದು. ಈ ಸಂದರ್ಭದಲ್ಲಿ ಫ್ರಾನ್ಸ್‌ನ ವಿರುದ್ಧ ಹಾಗೂ ಇರಾನ್ ಹಾಗೂ ಇಸ್ರೇಲ್‌ಗೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್ ಅವರು ಮಾತನಾಡಿರುವುದು ಭಾರೀ ವೈರಲ್ ಆಗುತ್ತಿದೆ. ಇಸ್ರೇಲ್ ಹಾಗೂ ಇರಾನ್‌ನ ನಡುವೆ ಮಧ್ಯಸ್ಥಿಕೆ ವಹಿಸುವುದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಾಗಿದ್ದಾರೆ. ನಾನು ಅಧಿಕಾರಕ್ಕೆ ಬಂದರೆ ಮುಂದಿನ 24 ಗಂಟೆ ಅವಧಿಯಲ್ಲಿ ಇಸ್ರೇಲ್ ಹಾಗೂ ಇರಾನ್‌ನ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲಿದ್ದೇನೆ ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು ಇಷ್ಟು ದಿನಗಳಾದರೂ ಈ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಈ ರೀತಿ ಇರುವಾಗಲೇ ಅವರು ಫ್ರಾನ್ಸ್ ಅಧ್ಯಕ್ಷರ ವಿರುದ್ಧವೂ ಕಿಡಿಕಾರಿದ್ದಾರೆ. ದೊಡ್ಡಣ್ಣ ಈ ವಿಷಯದಲ್ಲಿ ಎದುರಿಸುತ್ತಿರುವ ಸವಾಲುಗಳೇನು ಎನ್ನುವುದು ಇಲ್ಲಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಿ7 ಶೃಂಗಭಸೆಯ ನಂತರ ಮಾತನಾಡಿದ್ದು ಫ್ರಾನ್ಸ್ ಹಾಗೂ ಇಸ್ರೇಲ್ ದೇಶದ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶೃಂಗಸಭೆಯಿಂದ ಬೇಗನೆ ವಾಪಸ್ ಬರುವುದಕ್ಕೂ ಇಸ್ರೇಲ್ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ಪ್ರಸ್ತಾವನೆ ಮಾಡಿದ್ದಾರೆ ಎಂಬ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಹೇಳಿಕೆಗಳನ್ನು ಟ್ರಂಪ್ ನಯವಾಗಿ ತಿರಸ್ಕರಿಸಿದ್ದಾರೆ.

ಇನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನಡಾದಲ್ಲಿ ನಡೆಯುತ್ತಿದ್ದ ಜಿ7 ಶೃಂಗಸಭೆಯಿಂದ ಬೇಗನೆ ಹಿಂದಿರುಗಿದ್ದಕ್ಕೆ ಮುಖ್ಯ ಕಾರಣ ಇರಾನ್ ಹಾಗೂ ಇಸ್ರೇಲ್‌ನ ನಡುವೆ ಕದನ ವಿರಾಮ ಘೋಷಣೆ ಮಾಡುವುದಕ್ಕೇ ಅಂತ ಹೇಳಿದ್ದರು. ಆದರೆ ಅದೆಲ್ಲ ಏನು ಇಲ್ಲ ಅವರ ಹೇಳಿಕೆಗೂ ನನಗೂ ಸಂಬಂಧವಿಲ್ಲ ಅಂತ ಟ್ರಂಪ್ ಹೇಳಿದ್ದಾರೆ.
ನಾನು ವಾಷಿಂಗ್ಟನ್‌ಗೆ ಹಿಂದಿರುಗಿದ್ದು ಯಾಕೆ ಎನ್ನುವುದು ಫ್ರಾನ್ಸ್ ಅಧ್ಯಕ್ಷರಿಗೆ ಗೊತ್ತಿಲ್ಲ. ಇದು ಕದನ ವಿರಾಮಕ್ಕೆ ಸಂಬಂಧಿಸಿದ್ದಲ್ಲ ಅದಕ್ಕೂ ದೊಡ್ಡದು ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.
ನಾನು ಹೇಳಿದಂತೆ ಇರಾನ್ ಮಾಡಬೇಕಿತ್ತು!
ಇನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿ ಬೇಸರ ಹೊರ ಹಾಕಿದ್ದಾರೆ. ಇರಾನ್ ದೇಶವು ನಾನು ಹೇಳಿದಂತೆ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು. ಎಂತಹ ಅವಮಾನ ಹಾಗೂ ಎಷ್ಟೊಂದು ಜೀವಗಳಿಗೆ ಹಾನಿ. ಸರಳವಾಗಿ ಹೇಳುವುದಾದರೆ, ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ. ನಾನು ಅದನ್ನು ಮತ್ತೆ ಮತ್ತೆ ಹೇಳಿದ್ದೇನೆ! ಎಲ್ಲರೂ ತಕ್ಷಣ ಟೆಹ್ರಾನ್ ಅನ್ನು ಸ್ಥಳಾಂತರಿಸಬೇಕು! ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಎಂದು ಟ್ವೀಟ್ ಮಾಡಿದ್ದಾರೆ. ಇರಾನ್ ಹಾಗೂ ಇಸ್ರೇಲ್ ಒಪ್ಪಂದ ಮಾಡಿಕೊಳ್ಳಬೇಕಿತ್ತು ಎಂದು ಅವರು ಹೇಳಿದ್ದಾರೆ.












Click it and Unblock the Notifications