ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ: ಆ ಒಂದು ನಿರ್ಧಾರದಿಂದ ಅಮೆರಿಕದಲ್ಲಿ ಬಿರುಗಾಳಿ!
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಪದಗ್ರಹಣ ಮಾಡಲಿದ್ದು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಅಮರಿಕದಲ್ಲಿ ಭಾರೀ ಗದ್ದಲ ಶುರುವಾಗಿದೆ. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ನೀತಿಯು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಅಮೆರಿಕದಲ್ಲಿರುವ ವಿವಿಧ ದೇಶಗಳ ಕೋಟ್ಯಾಂತರ ಜನರ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯುವ ಸಂದರ್ಭದಲ್ಲಿ ನೀಡಲಾಗಿದ್ದ ಪ್ರಮುಖ ಭರವಸೆಗಳಲ್ಲಿ ಇದೂ ಸಹ ಒಂದಾಗಿದೆ. ಅಧಿಕಾರಕ್ಕೆ ಬಂದ ಮೇಲೆ ಅಮೆರಿಕದಲ್ಲಿ ಅಕ್ರಮವಾಗಿ ಅಥವಾ ಯಾವುದೇ ದಾಖಲೆಗಳು ಇಲ್ಲದೆ ಇರುವವರನ್ನು ಗಡಿಪಾರು ಮಾಡುವುದಾಗಿ ಟ್ರಂಪ್ ಈ ಹಿಂದೆಯೇ ಎಚ್ಚರಿಕೆ ಕೊಟ್ಟಿದ್ದರು. ಇದೀಗ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಈ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ.
ಡೊನಾಲ್ಡ್ ಟ್ರಂಪ್ ಅವರು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅಮೆರಿಕದಲ್ಲಿ ಬೃಹತ್ ಗಡಿಪಾರು ಪ್ರಕ್ರಿಯೆ ನಡೆಯಲಿದೆ ಅಂತ ಹೇಳಲಾಗಿದ್ದು. ಈಗಾಗಲೇ ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಭದ್ರತೆ ಹಾಗೂ ಅಮೆರಿಕದಲ್ಲಿ ಅಕ್ರಮವಾಗಿ ವಲಸೆ ನಿಂತಿರುವವರ ಪಟ್ಟಿಯನ್ನು ಮಾಡಿಕೊಳ್ಳಲಾಗಿದೆ. ಆದರೆ ಈ ಬೆಳವಣಿಗೆಯಿಂದ ಅಮೆರಿಕದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣವೂ ಇದೆ. ಯಾಕೆಂದರೆ ಅಮೆರಿಕದಲ್ಲಿ ಲಕ್ಷಾಂತರ ಜನರು ಈ ರೀತಿ ಅಕ್ರಮವಾಗಿ ನೆಲೆಸಿದ್ದಾರೆ. ಒಮ್ಮೆಗೆ ಗಡಿಪಾರು ಕಾರ್ಯಾಚರಣೆ ನಡೆಸುವುದರಿಂದ ಭಾರೀ ಅನಾಹುತ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಏಕಾಏಕಿ ಬೃಹತ್ ಕಾರ್ಯಾಚರಣೆ ನಡೆಸುವುದು ಅಮೆರಿಕದ ಕಾನೂನು ಹಾಗೂ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಅಲ್ಲಿನ ವಿರೋಧ ಪಕ್ಷ ಹಾಗೂ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕದಲ್ಲಿ ನೂತನ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದ ಬೆನ್ನಲ್ಲೇ ಅಮೆರಿಕದಲ್ಲಿ ಅಕ್ರಮ ವಲಸಿಗರನ್ನು ದೇಶದಿಂದ ಹೊರಕ್ಕೆ ಹಾಕುವುದೇ ಮೊದಲ ಕೆಲಸವಾಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆ ಹಾಗೂ ಭಾರೀ ಭದ್ರತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪದೇ ಪದೇ ಹೇಳಲಾಗುತ್ತಿದೆ. ಆದರೆ ಇದು ಅಷ್ಟೊಂದು ಸುಲಭವಲ್ಲ ಹಾಗೂ ಇದರ ಪರಿಣಾಮ ಗಂಭೀರವಾಗಿ ಇರಲಿದೆ ಎಂದು ಹೇಳಲಾಗುತ್ತಿದೆ.
ಅಮೆರಿಕದ ಮಾಜಿ ಅಧ್ಯಕ್ಷೆ ಹಾಗೂ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಮಲಾ ಹ್ಯಾರಿಸ್ ಅವರ ಸಲಹೆಗಾರ ಫ್ರಾಂಕ್ ಶಾರಿ ಅವರು ಈ ಬಗ್ಗೆ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ರಿಪಬ್ಲಿಕನ್ ಪಕ್ಷವು ಈ ಕೆಲಸವನ್ನು ಮಾಡುವಷ್ಟು ಬೇಕಾದ ಸಿದ್ಧತೆ ಹಾಗೂ ಸಾಮರ್ಥ್ಯವನ್ನು ಹೊಂದಿಲ್ಲ ಅಂತ ಹೇಳಲಾಗುತ್ತಿದೆ. ಈ ರೀತಿ ಮಾಡುವುದರಿಂದ ವಲಸಿಗರ ಕುಟುಂಬಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಟ್ರಂಪ್ ಅವರು ವಲಸೆಯ ವಿಚಾರದಲ್ಲಿ ಕಠಿಣವಾದಿಯಾಗಿದ್ದಾರೆ. ಆದರೆ ಈ ದೊಡ್ಡ ಪ್ರಕ್ರಿಯೆ ಅವರು ಅಂದುಕೊಂಡಷ್ಟು ಸುಲಭವೇನು ಅಲ್ಲ ಅಂತ ಹೇಳಿದ್ದಾರೆ. ಅಲ್ಲದೆ ಈ ರೀತಿ ಗಂಭೀರ ಹೇಳಿಕೆಗಳನ್ನು ಕೊಡುತ್ತಿರುವ ಟ್ರಂಪ್ ಅವರು ವಲಸಿಗರು ತಾವಾಗಿಯೇ ದೇಶ ಬಿಟ್ಟು ಹೋಗಲಿ ಎಂದೂ ಕಾಯುತ್ತಿರಬಹುದು ಎಂದೂ ಹೇಳಿದ್ದಾರೆ.
ಅಮೆರಿಕದಲ್ಲಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಡೊನಾಲ್ಡ್ ಟ್ರಂಪ್ ಅವರು ಗುಡುಗಿದ್ದಾರೆ. ಮೊದಲ ದಿನವೇ ಅವರು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅವರು ಯಾವ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎದುರಾಗಿದೆ.












Click it and Unblock the Notifications