ವೈರಲ್ ವಿಡಿಯೋ; ಆಸ್ಟ್ರಿಚ್ ಜೊತೆ ದುಬೈ ರಾಜಕುಮಾರನ ಸೈಕಲ್ ರೇಸ್
ಅಬುದಾಬಿ, ಜನವರಿ 04: ಅತಿ ವೇಗವಾಗಿ ಓಡುವ ಪಕ್ಷಿ ಎಂದೇ ಆಸ್ಟ್ರಿಚ್ ಹೆಸರುವಾಸಿ. ಈ ವೇಗಿಗೇ ಸವಾಲೊಡ್ಡುವಂತೆ ಅದರ ಜೊತೆಗೆ ರೇಸ್ ನಡೆಸಿದವರು ಬೇರಾರೂ ಅಲ್ಲ, ದುಬೈನ ರಾಜಕುಮಾರ.
ದುಬೈ ರಾಜಕುಮಾರ ತಾನು ಆಸ್ಟ್ರಿಚ್ ಪಕ್ಷಿಯೊಂದಿಗೆ ಸೈಕಲ್ ನಲ್ಲಿ ರೇಸ್ ಮಾಡಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದುಬೈ ರಾಜಕುಮಾರ ಶೇಕ್ ಹಮ್ದಾನ್ ಬಿನ್ ಮೊಹಮದ್ ಬಿನ್ ರಶೀದ್ ಆಲ್ ಮುಕ್ತಮ್, ಆಸ್ಟ್ರಿಚ್ ಜೊತೆ ತಾವು ಸೈಕಲ್ ರೇಸ್ ನಡೆಸಿದ್ದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಎರಡು ಆಸ್ಟ್ರಿಚ್ ಪಕ್ಷಿಗಳು ಕಾಣಿಸಿಕೊಂಡಿವೆ. ರಾಜಕುಮಾರನ ಸೈಕಲ್ ವೇಗದೊಂದಿಗೇ ಬದಿಯಲ್ಲಿ ಆಸ್ಟ್ರಿಚ್ ಪಕ್ಷಿಗಳೂ ಓಡುತ್ತಿರುವುದು ಕಂಡುಬಂದಿದೆ. ಸೈಕಲ್ ಗಿಂತ ಪಕ್ಷಿಗಳೇ ವೇಗವಾಗಿದ್ದು, ಆ ವೇಗಕ್ಕೆ ತಕ್ಕಂತೆ ರಾಜಕುಮಾರ ಕೂಡ ಸೈಕ್ಲಿಂಗ್ ಮಾಡಲು ಪ್ರಯತ್ನ ಮಾಡಿದ್ದಾರೆ.
ರಾಜಕುಮಾರ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಂತೆ, ಸುಮಾರು 4 ಲಕ್ಷ ಜನರು ವಿಡಿಯೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಕೂಡ ರಾಜಕುಮಾರ ತನ್ನ ಕಾರಿನ ಮೇಲೆ ಹಕ್ಕಿಗಳು ಗೂಡು ಕಟ್ಟಿಕೊಂಡಿದ್ದನ್ನು ಫೋಟೊ ತೆಗೆದು ಹಂಚಿಕೊಂಡಿದ್ದರು. ಆ ಚಿತ್ರ ಕೂಡ ವೈರಲ್ ಆಗಿತ್ತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications