ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಅಫ್ಘಾನಿಸ್ತಾನದಲ್ಲಿ ಭೂಕಂಪ, 130 ಜನರ ಸಾವು

|
Google Oneindia Kannada News

ಕಾಬೂಲ್‌, ಜೂ. 22: ಅಫ್ಘಾನಿಸ್ತಾನದಲ್ಲಿ ಬುಧವಾರ ಮುಂಜಾನೆ 6.1 ರ ತೀವ್ರತೆಯ ಭೂಕಂಪವು ಸಂಭವಿಸಿದ್ದು, ಕನಿಷ್ಠ 280 ಜನರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ತಾಲಿಬಾಲ್‌ ವಿಪತ್ತು ನಿರ್ವಹಣಾ ಅಧಿಕಾರಿಗಳು ಭೂಕಂಪದಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ ಮತ್ತು ದೂರದ ಪರ್ವತ ಹಳ್ಳಿಗಳಲ್ಲಿ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ಗಡಿಯ ಸಮೀಪವಿರುವ ಖೋಸ್ಟ್ ನಗರದಿಂದ ಸುಮಾರು 44 ಕಿಮೀ (27 ಮೈಲಿ) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಸಿ) ತಿಳಿಸಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಿಂದ ದೀರ್ಘವಾದ ಆಘಾತಗಳನ್ನು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

Earthquake Kills 130 People in Afghanistan

ಅಫ್ಘಾನಿಸ್ತಾನದ ಸಂಭವಿಸಿರುವ ಭೂಕಂಪದ ಬಗ್ಗೆ ಇದು ಬಲವಾಗಿತ್ತು. ಸಾಕಷ್ಟು ಹಾನಿಯು ಉಂಟಾಗುವ ಅಪಾಯ ಇದೆ ಎಂದು ವಾಯುವ್ಯ ಪಾಕಿಸ್ತಾನಿ ನಗರದ ಪೇಶಾವರ್ ನಿವಾಸಿ ಹೇಳಿದರು. ಮಾಧ್ಯಮಗಳಲ್ಲಿ ಮನೆಗಳು ಕುಸಿದಿರುವ ದೃಶ್ಯಗಳು ಕಂಡು ಬಂದಿವೆ.

ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಅಧಿಕಾರಿ ಸಲಾವುದ್ದೀನ್ ಅಯೂಬಿ, ಸುಮಾರು 255 ಜನರು ಭೂಕಂಪದಿಂದ ಸಾವನ್ನಪ್ಪಿದ್ದಾರೆ. ಅಲ್ಲದೆ ಪೂರ್ವ ಅಫ್ಘಾನ್ ಪ್ರಾಂತ್ಯದ ಪಕ್ಟಿಕಾದಲ್ಲಿ 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹೆಚ್ಚಿನ ಸಾವುಗಳು ಸಂಭವಿಸಿವೆ. ಖೋಸ್ಟ್ ಪ್ರಾಂತ್ಯದಲ್ಲಿ, 25 ಜನರು ಸಾವನ್ನಪ್ಪಿದ್ದಾರೆ ಹಾಗೂ 90 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ಹೇಳಿದರು.

ಕೆಲವು ಹಳ್ಳಿಗಳು ಮೂಲ ಸೌಕರ್ಯ ಸಿಗುವ ಪ್ರದೇಶಗಳಿಂದ ದೂರದ ಪ್ರದೇಶಗಳಲ್ಲಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ವಿವರಗಳನ್ನು ಸಂಗ್ರಹಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಸರ್ಕಾರಿ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಗಾಯಾಳುಗಳನ್ನು ತಲುಪಲು ಮತ್ತು ವೈದ್ಯಕೀಯ ಸೌಲಭ್ಯ ಹಾಗೂ ಆಹಾರವನ್ನು ತಲುಪಿಸಲು ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಭಾರತದಲ್ಲಿ ಸುಮಾರು 119 ಮಿಲಿಯನ್ ಜನರು ಕಂಪನದ ಅನುಭವವನ್ನು ಪಡೆದಿದ್ದಾರೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ಟ್ವಿಟರ್‌ನಲ್ಲಿ ತಿಳಿಸಿದೆ. ಆದರೆ ಪಾಕಿಸ್ತಾನದಲ್ಲಿ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ತಕ್ಷಣದ ವರದಿಗಳನ್ನು ಅದು ನೀಡಿಲ್ಲ.

ಎರಡು ದಶಕಗಳ ನಂತರ ಅಮೆರಿಕ ನೇತೃತ್ವದ ಅಂತಾರಾಷ್ಟ್ರೀಯ ಪಡೆಗಳು ಹಿಂದೆ ಸರಿಯುತ್ತಿದ್ದಂತೆ, ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನವು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಈಗ ಈ ದುರಂತವು ಸಂಭವಿಸಿದೆ. ತಾಲಿಬಾನ್ ಸ್ವಾಧೀನಕ್ಕೆ ಪ್ರತಿಕ್ರಿಯೆಯಾಗಿ, ಅನೇಕ ಸರ್ಕಾರಗಳು ಅಫ್ಘಾನಿಸ್ತಾನದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ನಿರ್ಬಂಧಗಳನ್ನು ವಿಧಿಸಿವೆ ಹಾಗೂ ಶತಕೋಟಿ ಡಾಲರ್ ಮೌಲ್ಯದ ಅಭಿವೃದ್ಧಿ ಸಹಾಯವನ್ನು ಕಡಿತಗೊಳಿಸಿವೆ.

ಅಫ್ಘಾನ್ ವಿದೇಶಾಂಗ ಸಚಿವಾಲಯದ ವಕ್ತಾರರು ಯಾವುದೇ ಅಂತರರಾಷ್ಟ್ರೀಯ ಸಂಸ್ಥೆಯಿಂದ ಸಹಾಯವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. 2015 ರಲ್ಲಿ ಭೂಕಂಪವು ದೂರದ ಅಫ್ಘಾನ್‌ ದೇಶದ ಈಶಾನ್ಯಕ್ಕೆ ಅಪ್ಪಳಿಸಿತ್ತು. ಆ ಸಂದರ್ಭದಲ್ಲಿ ಅಫ್ಘಾನಿಸ್ತಾನ ಮತ್ತು ಹತ್ತಿರದ ಉತ್ತರ ಪಾಕಿಸ್ತಾನದಲ್ಲಿ ನೂರಾರು ಜನರು ಸಾವನ್ನಪ್ಪಿದರು.

Recommended Video

Narendra Modi ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಜ್ಯೋತಿಷಿಗಳು ಹೇಳಿದ್ದೇನು | *India | OneIndia Kannada

English summary
Disaster management officials said a 6.1 magnitude earthquake in Afghanistan killed 130 people in the east of the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X