ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಲಘು ಭೂಕಂಪನ

ಇಸ್ಲಮಾಬಾದ್, ಸಪ್ಟೆಂಬರ್.24: ಪಾಕಿಸ್ತಾನ ರಾಜಧಾನಿ ಇಸ್ಲಮಾಬಾದ್ ನಲ್ಲಿ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.

ಗುರುವಾರ ಬೆಳಗಿನ ಜಾವ 5.46 ಗಂಟೆಗೆ ಭೂಮಿ ಕಂಪಿಸಿದೆ. ಭೂಕಂಪನದ ಕೇಂದ್ರ ಬಿಂದು ಪಶ್ಚಿಮ ಇಸ್ಲಮಾಬಾದ್ ನಿಂದ 40 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಉಲ್ಲೇಖಿಸಿದೆ.

ಇನ್ನೊಂದು ಕಡೆ ಅಫ್ಘಾನಿಸ್ತಾನದ ಕಾಬೂಲ್ ನಲ್ಲೂ ಭೂಮಿ ಕಂಪಿನಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆಯು 4.2ರಷ್ಟಿದೆ. ಬೆಳಗಿನ ಜಾವ 5.33 ಗಂಟೆಗೆ ಭೂಮಿ ಕಂಪಿಸಿದ್ದು, ಭೂಕಂಪದ ಕೇಂದ್ರಬಿಂದು ಕಾಬೂಲ್ ನಿಂದ 237 ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಲಾಗಿದೆ.

Earthquake Of Magnitude At Islamabad And Kabul

ಬುಧವಾರ ಕಣಿವೆ ರಾಜ್ಯದಲ್ಲಿ ಕಂಪಿಸಿದ ಭೂಮಿ:

ಶ್ರೀನಗರದಲ್ಲಿ ಮಂಗಳವಾರ ರಾತ್ರಿ 9.40ರ ವೇಳೆಗೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.6ರಷ್ಟಿದೆ. ಭೂಮಿಯಿಂದ 5 ಕಿಲೋ ಮೀಟರ್ ಆಳದಲ್ಲಿ ಭೂಮಿ ಕಂಪಿಸಿದ್ದು, ಭೂಕಂಪನದ ಕೇಂದ್ರಬಿಂದು ಶ್ರೀನಗರದಿಂದ ಉತ್ತರ ಭಾಗದಲ್ಲಿ 11 ಕಿಲೋ ಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿತ್ತು. ಇದರ ನಡುವೆ ಭೂಕಂಪನವು ಕೇವಲ ಶ್ರೀನಗದಕ್ಕೆ ಮಾತ್ರ ಸೀಮಿತವಾಗಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ಭೂಮಿ ಕಂಪಿಸಿದ ಘಟನೆಯ ಕುರಿತು ವರದಿಯಾಗಿಲ್ಲ. ಅಲ್ಲದೇ ಆರಂಭದಲ್ಲಿ ಜಮ್ಮು ಕಾಶ್ಮೀರದ ಯಾವುದೇ ಪ್ರದೇಶದಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ಹೇಳಲಾಗಿತ್ತು. ಆದರೆ ತದನಂತರದಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಬಗ್ಗೆ ಸ್ಪಷ್ಟನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+