ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಸಂದರ್ಶನದ ವೇಳೆ ತೀವ್ರ ಭೂಕಂಪ

|
Google Oneindia Kannada News

ವೆಲ್ಲಿಂಗ್ಟನ್, ಮೇ 25: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡರ್ನ್ ಅವರು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ತೀವ್ರ ಭೂಕಂಪ ಸಂಭವಿಸಿದೆ.

ನ್ಯೂಜಿಲೆಂಡ್ ರಾಜಧಾನಿ ವೆಲ್ಲಿಂಗ್ಟನ್‌ನಲ್ಲಿ ಸಂದರ್ಶನ ನೀಡುತ್ತಿದ್ದಾಗ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಒಮ್ಮೆ ಗಾಬರಿಗೊಂಡು, ಬಳಿಕ ಸಂದರ್ಶನವನ್ನು ಮುಂದುವರೆಸಿದರು.

ಮಣಿಪುರದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲುಮಣಿಪುರದಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು

ಜಸಿಂಡಾ ಅವರು 2017 ರಿಂದ ನ್ಯೂಜಿಲೆಂಡ್‌ನ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ಅವರು ತೆಗೆದುಕೊಳ್ಳುವ ನಿರ್ಧಾರದಿಂದಲೇ ಅವರು ಎಲ್ಲರಿಗೂ ಇಷ್ಟವಾಗುತ್ತಾರೆ.

Earthquake Strikes During Jacinda Arderns Interview

ನ್ಯೂಜಿಲೆಂಡ್‌ನ ಚರ್ಚ್‌ನಲ್ಲಿ ನಡೆದ ಮಾಸ್ ಶೂಟಿಂಗ್ ಬಳಿಕ ವಿಚಾರದಲ್ಲಿ ಅವರು ತೆಗೆದುಕೊಂಡ ನಿರ್ಧಾರ, ಕೊರೊನಾ ವೈರಸ್ ಹೋಗಲಾಡಿಸಲು ತೆಗೆದುಕೊಂಡ ನಿರ್ಧಾರಗಳು ಜನರಿಗೆ ಖುಷಿ ತಂದಿದೆ.

ವಿಲ್ಲಿಂಗ್ಟನ್ ಸುತ್ತಮುತ್ತಲ ಪ್ರದೇಶದಲ್ಲಿ ಸೋಮವಾರ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಲೆವಿನ್ ಇದರ ಕೇಂದ್ರಬಿಂದುವಾಗಿದೆ. 37 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪ ಸಂಭವಿಸಿದಾಗ ಅವರ ಭಾವನೆ ಹೇಗಿತ್ತು ಎಂಬುದರ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು 30 ಸೆಕೆಂಡುಗಳ ಕಾಲ ಭಯ ಎದುರಿಸಬೇಕಾಯಿತು. ಯಾರಿಗೂ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ.

ದೆಹಲಿಯಲ್ಲಿ ಮತ್ತೆ ಲಘು ಭೂಕಂಪ: 2.2 ತೀವ್ರತೆ ದಾಖಲು ದೆಹಲಿಯಲ್ಲಿ ಮತ್ತೆ ಲಘು ಭೂಕಂಪ: 2.2 ತೀವ್ರತೆ ದಾಖಲು

2011ರಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು 150 ಮಂದಿ ಮೃತಪಟ್ಟಿದ್ದರು. 2018ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಸಾಕಷ್ಟು ಪ್ರಮಾಣದ ಆಸ್ತಿಪಾಸ್ತಿಗಳು ನಾಶವಾಗಿದ್ದವು.

English summary
New Zealand Prime Minister Jacinda Ardern was unflustered by an earthquake that struck the capital Wellington on Monday while she was doing a live TV interview, and calmly continued with the programme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X