Breaking: ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿಯಲ್ಲಿ 5.7 ತೀವ್ರತೆ ಭೂಕಂಪ

ನವದೆಹಲಿ, ಫೆಬ್ರವರಿ 5: ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಭೂಮಿ ಕಂಪಿಸಿದೆ. ಶನಿವಾರ ಬೆಳಗ್ಗೆ 9:45ಕ್ಕೆ ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

ಶನಿವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರ, ದೆಹಲಿ-ಎನ್‌ಸಿಆರ್ ಮತ್ತು ಇತರ ಪ್ರದೇಶಗಳಲ್ಲಿ ಕಂಪನಗಳು ಸಂಭವಿಸಿದ್ದು, ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿಯಲ್ಲಿ ಭೂಕಂಪನದ ಕೇಂದ್ರಬಿಂದು ವರದಿಯಾಗಿದೆ.

ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭೂಮಿ ಕಂಪಿಸಿರುವುದರಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ಅಧಿಕಾರಿಗಳು ಇನ್ನೂ ವರದಿ ಮಾಡಿಲ್ಲ. ಆದಾಗ್ಯೂ, ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಚರಾರ್-ಎ-ಶರೀಫ್‌ನಲ್ಲಿರುವ ದೇವಾಲಯದ ಶಿಖರಕ್ಕೆ ಹಾನಿಯಾಗಿದೆ ಎಂದು ವರದಿ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗುತ್ತಿದೆ.

Earthquake with a magnitude of 5.7 hit Afghanistan-Tajikistan Border Region

ಶುಕ್ರವಾರವೂ ಭೂಮಿ ಕಂಪಿಸಿದ ಅನುಭವ:

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 3.1 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಆದರೆ ಯಾವುದೇ ಸಾವು-ನೋವು ಅಥವಾ ಆಸ್ತಿ ಹಾನಿ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಕೇಂದ್ರಬಿಂದು ರಾಪರ್ ಗ್ರಾಮದ ಬಳಿ ಇತ್ತು. "ಶುಕ್ರವಾರ ಬೆಳಗ್ಗೆ 10.16 ಗಂಟೆಗೆ 3.1 ತೀವ್ರತೆಯ ಕಂಪನವು ದಾಖಲಾಗಿದ್ದು, ಕಚ್‌ನ ರಾಪರ್‌ನ 16 ಕಿಮೀ ದಕ್ಷಿಣ-ಆಗ್ನೇಯ (ಎಸ್‌ಎಸ್‌ಡಬ್ಲ್ಯೂ) ಕೇಂದ್ರಬಿಂದುವಾಗಿದೆ. ಇದು 19.1 ಕಿ.ಮೀ ಆಳದಲ್ಲಿ ದಾಖಲಾಗಿದೆ ಎಂದು ಗಾಂಧಿನಗರ ಮೂಲದ ಭೂಕಂಪನ ಸಂಶೋಧನಾ ಸಂಸ್ಥೆ (ಐಎಸ್‌ಆರ್) ಹೇಳಿಕೆಯಲ್ಲಿ ತಿಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+